ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

PUC ಪಾಸಾದ್ರೆ ಸ್ಮಾರ್ಟ್ ಫೋನ್, ಡಿಗ್ರಿ ಪಾಸಾದ್ರೆ ಸ್ಕೂಟಿ: ಇದು ಕಾಂಗ್ರೆಸ್ ಆಫರ್!

|
Google Oneindia Kannada News

ಲಕ್ನೋ, ಅಕ್ಟೋಬರ್ 21: ಉತ್ತರ ಪ್ರದೇಶ ವಿಧಾನಸಭೆ ಚುನಾವಣೆ 2022ರಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ 12ನೇ ತರಗತಿ ಉತ್ತೀರ್ಣರಾದ ಯುವತಿಯರಿಗೆ ಸ್ಮಾರ್ಟ್ ಫೋನ್ ಮತ್ತು ಪದವಿ ಪಾಸ್ ಆದ ವಿದ್ಯಾರ್ಥಿನಿಯರಿಗೆ ಎಲೆಕ್ಟ್ರಿಕ್ ಸ್ಕೂಟಿ ನೀಡುವುದಾಗಿ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಗುರುವಾರ ಭರವಸೆ ನೀಡಿದ್ದಾರೆ.

"ನಿನ್ನೆ ನಾನು ಕೆಲವು ವಿದ್ಯಾರ್ಥಿನಿಯರನ್ನು ಭೇಟಿಯಾಗಿದ್ದೆನು. ತಮ್ಮ ಅಧ್ಯಯನಕ್ಕಾಗಿ ಮತ್ತು ಅವರ ಭದ್ರತೆಗಾಗಿ ಸ್ಮಾರ್ಟ್ ಫೋನ್ ಅಗತ್ಯವಿದೆ ಎಂದು ಹೇಳಿದರು. ಇಂದು ಉತ್ತರ ಪ್ರದೇಶ ಕಾಂಗ್ರೆಸ್ ಚುನಾವಣಾ ಪ್ರಣಾಳಿಕೆಯ ಸಮಿತಿಯ ಒಪ್ಪಿಗೆಯೊಂದಿಗೆ ತಮ್ಮ ಪಕ್ಷ ಅಧಿಕಾರಕ್ಕೆ ಬಂದ ನಂತರದಲ್ಲಿ 12ನೇ ತರಗತಿ ಪಾಸ್ ಆಗಿರುವ ವಿದ್ಯಾರ್ಥಿನಿಯರಿಗೆ ಸ್ಮಾರ್ಟ್ ಫೋನ್ ಮತ್ತು ಪದವಿ ಪಡೆದ ವಿದ್ಯಾರ್ಥಿನಿಯರಿಗೆ ಎಲೆಕ್ಟ್ರಾನಿಕ್ ಸ್ಕೂಟಿಯನ್ನು ನೀಡಲು ನಿರ್ಧರಿಸಿದ್ದಕ್ಕೆ ನನಗೆ ಸಂತೋಷವಾಗಿದೆ," ಎಂದು ಪ್ರಿಯಾಂಕಾ ಗಾಂಧಿ ವಾದ್ರಾ ಟ್ವೀಟ್ ಮಾಡಿದ್ದಾರೆ.

 'ಈ ಚಿತ್ರ ನೋಡಿ ಯೋಗಿಜಿಗೆ ತುಂಬಾ ನೋವಾಗಿದೆ ಎಂದು ತಿಳಿಯಿತು' 'ಈ ಚಿತ್ರ ನೋಡಿ ಯೋಗಿಜಿಗೆ ತುಂಬಾ ನೋವಾಗಿದೆ ಎಂದು ತಿಳಿಯಿತು'

ಕಾಂಗ್ರೆಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮತ್ತು ಯುಪಿಯಲ್ಲಿ ಪಕ್ಷದ ಚುನಾವಣಾ ಉಸ್ತುವಾರಿ ವಹಿಸಿಕೊಂಡಿರುವ ಪ್ರಿಯಾಂಕಾ ಗಾಂಧಿ ವಾದ್ರಾ, ತನ್ನ ಟ್ವೀಟ್‌ನೊಂದಿಗೆ ಶಾಲಾ/ಕಾಲೇಜು ಹುಡುಗಿಯರ ಗುಂಪಿನೊಂದಿಗೆ ಸಂವಹನ ನಡೆಸುತ್ತಿರುವ ವಿಡಿಯೋವನ್ನು ಟ್ಯಾಗ್ ಮಾಡಿದ್ದು, ಅವರು ತಮ್ಮೊಂದಿಗೆ ಫೋಟೋಗಳನ್ನು ಕ್ಲಿಕ್ ಮಾಡಿಕೊಂಡರು ಎಂದು ಹೇಳಿದ್ದಾರೆ. ಇದೇ ವೇಳೆ ಸೆಲ್ಫಿ ಕ್ಲಿಕ್ಕಿಸಲು ತಮ್ಮ ಬಳಿ ಫೋನ್ ಇದೆಯೇ ಎಂದು ಪ್ರಿಯಾಂಕಾ ಗಾಂಧಿ ಕೇಳಿದ್ದರು ಎಂದು ವಿದ್ಯಾರ್ಥಿಯೊಬ್ಬರು ಹೇಳುತ್ತಿರುವುದು ಕಂಡುಬಂದಿದೆ.

If Congress forms Govt in UP, Smartphone to 12 pass girls, scooty to graduate girls: Priyanka Gandhi

ವಿದ್ಯಾರ್ಥಿನಿಯರ ಭದ್ರತೆಗಾಗಿ ಸ್ಮಾರ್ಟ್ ಫೋನ್:

"ನಾವು ಫೋನ್‌ಗಳನ್ನು ಹೊಂದಿಲ್ಲ ಅಥವಾ ಕಾಲೇಜಿನಲ್ಲಿ ಅನುಮತಿಸುವುದಿಲ್ಲ ಎಂದು ನಾವು ಹೇಳಿದ್ದೇವೆ. ನಂತರ ಅವರು ನಮ್ಮನ್ನು ಕೇಳಿದರು, ಹುಡುಗಿಯರು ಫೋನ್‌ಗಳನ್ನು ಪಡೆಯಬೇಕು ಎಂದು ಘೋಷಿಸಬೇಕೇ ಎಂದು ಕೇಳಿದರು ಮತ್ತು ನಮ್ಮ ಸುರಕ್ಷತೆಗಾಗಿ ನಾವು ಇನ್ನೇನು ಕೇಳಬಹುದು," ಎಂದು ವಿಡಿಯೊದಲ್ಲಿ ವಿದ್ಯಾರ್ಥಿಯೊಬ್ಬರು ಹೇಳಿದ್ದಾರೆ.

"ಅವರು ಕಷ್ಟಪಟ್ಟು ಓದುವಂತೆ ನಮಗೆ ಹೇಳಿದರು. ಅವರು ನಮ್ಮನ್ನು ಭೇಟಿಯಾಗುವುದನ್ನು ಮತ್ತು ಈ ರೀತಿ ಮಾತನಾಡುವುದನ್ನು ಮುಂದುವರಿಸಬೇಕೆಂದು ನಾನು ಬಯಸುತ್ತೇನೆ," ಎಂದು ಇನ್ನೊಬ್ಬ ವಿದ್ಯಾರ್ಥಿಯು ವಿಡಿಯೋದಲ್ಲಿ ಹೇಳುತ್ತಿರುವುದು ಕಂಡುಬಂದಿದೆ.

ಮಹಿಳೆಯರಿಗೆ ಶೇ.40ರಷ್ಟು ಮೀಸಲಾತಿ ಘೋಷಿಸಿದ್ದ ಪ್ರಿಯಾಂಕಾ:

2022ರ ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ಶೇ.40ರಷ್ಟು ಟಿಕೆಟ್ ಅನ್ನು ಮಹಿಳೆಯರಿಗೆ ನೀಡುವುದಾಗಿ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಮಂಗಳವಾರವಷ್ಟೇ ಘೋಷಿಸಿದ್ದರು. ಉತ್ತರ ಪ್ರದೇಶದ ಲಕ್ನೋದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ದೇಶದ ರಾಜಕೀಯದಲ್ಲಿ ಮಹಿಳೆಯರು ಪೂರ್ಣ ಪ್ರಮಾಣದ ಪಾಲುದಾರರಾಗಬೇಕೆಂದು ನಾವು ಬಯಸುತ್ತೇವೆ" ಎಂದು ಹೇಳಿದ್ದರು. "ನಾನು ಇಂದು ನಮ್ಮ ಮೊದಲ ಭರವಸೆಯ ಬಗ್ಗೆ ಮಾತನಾಡಲಿದ್ದೇನೆ. ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು ಮಹಿಳೆಯರಿಗೆ ಶೇಕಡಾ 40 ರಷ್ಟು ಟಿಕೆಟ್ ನೀಡಲಿದೆ ಎಂದು ನಾವು ನಿರ್ಧರಿಸಿದ್ದೇವೆ" ಎಂದು ಪ್ರಿಯಾಂಕಾ ಗಾಂಧಿ ತಿಳಿಸಿದ್ದರು.

ಕಾಂಗ್ರೆಸ್ ಕಚೇರಿಗೆ ಆಹ್ವಾನಿಸಿದ ಪ್ರಿಯಾಂಕಾ ಗಾಂಧಿ:

"ಮುಂಬರುವ ನವೆಂಬರ್ 15ರವರೆಗೆ ಮಹಿಳೆಯರಿಗೆ ಅವಕಾಶವಿರುತ್ತದೆ. ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ಇಚ್ಛಿಸುವ ಯಾವುದೇ ಮಹಿಳೆಯರು ಕಾಂಗ್ರೆಸ್ ಪಕ್ಷದ ಕಚೇರಿಗೆ ಬಂದು ಭೇಟಿ ಮಾಡಬಹುದು ಎಂದು ಪ್ರಿಯಾಂಕಾ ಗಾಂಧಿ ಆಹ್ವಾನ ನೀಡಿದ್ದಾರೆ. ಮಹಿಳಾ ನಾಯಕರಿಗೆ ಅವರ ಸಾಮರ್ಥ್ಯ ಮತ್ತು ಕ್ಷೇತ್ರದಲ್ಲಿ ಅವರು ಮಾಡಿದ ಅಭಿವೃದ್ಧಿ ಕೆಲಸಗಳ ಆಧಾರದ ಮೇಲೆ ಅವಕಾಶಗಳನ್ನು ನೀಡಲಾಗುವುದು," ಎಂದು ಹೇಳಿದ್ದಾರೆ.

2017ರ ಉತ್ತರ ಪ್ರದೇಶ ಚುನಾವಣೆ ಫಲಿತಾಂಶ:

ಕಳೆದ 2017ರ ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ 403 ಸ್ಥಾನಗಳ ಪೈಕಿ ಬಿಜೆಪಿ 312 ರಲ್ಲಿ ಗೆಲುವು ದಾಖಲಿಸಿತ್ತು. ಈ ಪಕ್ಷ ಶೇ. 39.67ರಷ್ಟು ಮತವನ್ನು ಪಡೆದುಕೊಂಡಿತ್ತು. ಅಂದು ಸಮಾಜವಾದಿ ಪಕ್ಷವು 47 ಸ್ಥಾನಗಳನ್ನು, ಬಹುಜನ ಸಮಾಜ ಪಕ್ಷ (BSP) 19 ಸ್ಥಾನಗಳನ್ನು ಗೆದ್ದರೆ, ಕಾಂಗ್ರೆಸ್ ಕೇವಲ 7 ಸ್ಥಾನಗಳಲ್ಲಿ ಗೆಲುವು ಸಾಧಿಸಿತ್ತು.

English summary
If Congres forms Govt in UP, Smartphone to 12 pass girls, electronic scooty to graduate girls: Priyanka Gandhi Vadra.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
Metrics Calculation