ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮೂರು ತಿಂಗಳಲ್ಲಿ 4 ಲಕ್ಷ ಲೀಟರ್ ಅಕ್ರಮ ಮದ್ಯ ಪೊಲೀಸರ ವಶಕ್ಕೆ!

|
Google Oneindia Kannada News

ಲಕ್ನೋ, ಜುಲೈ.26: ಕೊರೊನಾವೈರಸ್ ಸೋಂಕು ಹರಡುವಿಕೆ ಭೀತಿ ಹಾಗೂ ಭಾರತ ಲಾಕ್ ಡೌನ್ ನಡುವೆ ಅಕ್ರಮ ಮದ್ಯ ಮಾರಾಟ ಎಗ್ಗಿಲ್ಲದೇ ಸಾಗಿತ್ತು. ಕಳ್ಳದಾರಿಯಲ್ಲಿ ಎಣ್ಣೆ ಮಾರಾಟ ಮಾಡುತ್ತಿದ್ದ ಸಾವಿರಾರು ಖದೀಮರ ಕೈಗೆ ಉತ್ತರ ಪ್ರದೇಶ ಪೊಲೀಸರು ಕೋಳ ತೊಡಿಸಿದ್ದಾರೆ.

ಉತ್ತರ ಪ್ರದೇಶದಲ್ಲಿ ಕಳೆದ ಮೂರು ತಿಂಗಳಿನಲ್ಲಿ ಅಕ್ರಮ ಮದ್ಯ ಮಾರಾಟಕ್ಕೆ ಸಂಬಂಧಿಸಿದಂತೆ 14,732 ಪ್ರಕರಣಗಳನ್ನು ದಾಖಲಿಸಿಕೊಳ್ಳಲಾಗಿದೆ. ರಾಜ್ಯದ ಹಲವೆಡೆಗಳಲ್ಲಿ ದಾಳಿ ನಡೆಸಿ 4,07,366 ಲೀಟರ್ ಅಕ್ರಮ ಮದ್ಯವನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ.

ವಿಕಾಸ್ ದುಬೆ ಬಳಿಕ ಯುಪಿಯಲ್ಲಿ ಮತ್ತೊಬ್ಬ ರೌಡಿ ಶೀಟರ್ ಎನ್‌ಕೌಂಟರ್ವಿಕಾಸ್ ದುಬೆ ಬಳಿಕ ಯುಪಿಯಲ್ಲಿ ಮತ್ತೊಬ್ಬ ರೌಡಿ ಶೀಟರ್ ಎನ್‌ಕೌಂಟರ್

ರಾಜ್ಯದ ಹಲವು ಕಡೆಗಳಲ್ಲಿ ವಶಕ್ಕೆ ಪಡೆದಿರುವ ಮದ್ಯದ ಪೈಕಿ 3,39,848 ಲೀಟರ್ ಅಕ್ರಮ ಮದ್ಯವಾಗಿದ್ದು, 37,855 ಲೀಟರ್ ಕಳ್ಳಭಟ್ಟಿ ಹಾಗೂ 29663 ಲೀಟರ್ ವಿದೇಶಿ ಮದ್ಯವಾಗಿದೆ ಎಂದು ಉತ್ತರ ಪ್ರದೇಶ ಅಬಕಾರಿ ಇಲಾಖೆಯ ಕಾರ್ಯದರ್ಶಿ ಸಂಜಯ್ ಆರ್.ಬೂಸರೆಡ್ಡಿ ತಿಳಿಸಿದ್ದಾರೆ.

Illicit Liquor Trade: 4797 Accused Arrested In Three Months In Uttar Pradesh

4797 ಆರೋಪಿಗಳ ಬಂಧಿಸಿದ ಪೊಲೀಸರು:

ಕೊರೊನಾವೈರಸ್ ಸೋಂಕು ಹರಡುವಿಕೆ ಭೀತಿ ಹಿನ್ನೆಲೆ ಉತ್ತರ ಪ್ರದೇಶದಲ್ಲಿ ಕಟ್ಟುನಿಟ್ಟಿನ ಲಾಕ್ ಡೌನ್ ಜಾರಿಗೊಳಿಸಲಾಗಿತ್ತು. ಮದ್ಯ ಮಾರಾಟಕ್ಕೂ ಬ್ರೇಕ್ ಬಿದ್ದ ಹಿನ್ನೆಲೆ ಅಕ್ರಮವಾಗಿ ಮದ್ಯ ಮಾರಾಟಕ್ಕೆ ಖದೀಮರು ಕಳ್ಳ ದಾರಿ ಹುಡುಕಿಕೊಂಡಿದ್ದರು. ಹೀಗೆ ಅಕ್ರಮ ಮದ್ಯ ಮಾರಾಟಕ್ಕೆ ಸಂಬಂಧಿಸಿದಂತೆ ಮೂರು ತಿಂಗಳಿನಲ್ಲಿ 4797 ಆರೋಪಿಗಳನ್ನು ಬಂಧಿಸಲಾಗಿದೆ. ಈ ಪೈಕಿ 1234 ಆರೋಪಿಗಳನ್ನು ಜೈಲಿಗೆ ಕಳುಹಿಸಲಾಗಿದ್ದು, ಅಕ್ರಮ ಮದ್ಯ ರವಾನೆಗೆ ಬಳಸಿದ 119 ವಾಹನಗಳನ್ನು ಜಪ್ತಿ ಮಾಡಲಾಗಿದೆ.

English summary
Illicit Liquor Trade: 4797 Accused Arrested In Three Months In Uttar Pradesh.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X