ಸ್ವಾತಂತ್ರ್ಯ ದಿನ 2022: ಈ ವರ್ಷ ಶಾಲೆಗಳು, ಕಾಲೇಜುಗಳು, ಕಚೇರಿಗಳಿಗೆ ರಜೆ ಇಲ್ಲ

ಲಕ್ನೋ ಜುಲೈ 14: ಮೊದಲ ಬಾರಿಗೆ ಉತ್ತರಪ್ರದೇಶದಲ್ಲಿ ಶಾಲೆಗಳು, ಕಾಲೇಜುಗಳು, ವಿಶ್ವವಿದ್ಯಾನಿಲಯಗಳು, ಸರ್ಕಾರ, ಸರ್ಕಾರೇತರ ಕಚೇರಿಗಳು ಮತ್ತು ಮುಖ್ಯವಾಗಿ ಮಾರುಕಟ್ಟೆಗಳು ಸ್ವಾತಂತ್ರ್ಯ ದಿನದಂದು ತೆರೆದಿರುತ್ತವೆ. ಈ ವರ್ಷ ಯುಪಿಯಲ್ಲಿ ಸ್ವಾತಂತ್ರ್ಯ ದಿನಾಚರಣೆಯಂದು ರಜೆ ಇಲ್ಲ. ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಪ್ರತಿ ಜಿಲ್ಲೆಯಲ್ಲೂ ಈ ವರ್ಷ ಸ್ವಾತಂತ್ರ್ಯ ದಿನಾಚರಣೆಯನ್ನು ವಿಶೇಷ ಕಾರ್ಯಕ್ರಮವಾಗಿ ಆಚರಿಸಲಾಗುವುದು ಎಂದು ಹೇಳಿದ್ದಾರೆ. ಈ ಬಗ್ಗೆ ಮುಖ್ಯ ಕಾರ್ಯದರ್ಶಿ ಡಿ.ಎಸ್.ಮಿಶ್ರಾ ಮಾತನಾಡಿ, "ದೀಪಾವಳಿ ಹಬ್ಬದಂತೆ ವಿಶೇಷ ಸ್ವಚ್ಛತಾ ಆಂದೋಲನ ನಡೆಸಲಾಗುವುದು ಮತ್ತು ಇದನ್ನು ರಾಷ್ಟ್ರೀಯ ಜನಾಂದೋಲನವನ್ನಾಗಿ ಮಾಡಬೇಕು," ಎಂದಿದ್ದಾರೆ.

"ಸ್ವಾತಂತ್ರ್ಯ ಹೋರಾಟಗಾರರ ಬಗ್ಗೆ ಹೆಚ್ಚು ಸ್ಥಳಗಳಲ್ಲಿ ಕಾರ್ಯಕ್ರಮಗಳು ನಡೆಯಬೇಕು. ಸ್ವಾತಂತ್ರ್ಯೋತ್ಸವ ಸಪ್ತಾಹದಲ್ಲಿ ವಾರದ ಪ್ರತಿ ದಿನವೂ ವಿಭಿನ್ನ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು. ಸ್ವಾತಂತ್ರ್ಯ ದಿನಾಚರಣೆಯನ್ನು ಕೇವಲ ಅಧಿಕೃತ ಕಾರ್ಯಕ್ರಮಕ್ಕೆ ಸೀಮಿತಗೊಳಿಸಬಾರದು. ಜನರು ಇದರಲ್ಲಿ ಭಾಗವಹಿಸಬೇಕು. ಎಲ್ಲಾ ವರ್ಗದ ಜನರು ಸಾಮಾಜಿಕ ಸಂಸ್ಥೆಗಳು, ಸಾರ್ವಜನಿಕ ಪ್ರತಿನಿಧಿಗಳು ಮತ್ತು ವ್ಯಾಪಾರ ಸಂಸ್ಥೆಗಳಲ್ಲಿ ಕಾರ್ಯಕ್ರಮಗಳನ್ನು ಆಯೋಜಿಸಬೇಕು" ಎಂದು ಅವರು ಹೇಳಿದರು.

ಯುಪಿಯಲ್ಲಿ ರಜೆ ಇಲ್ಲ

ಯುಪಿಯಲ್ಲಿ ರಜೆ ಇಲ್ಲ

ಕಳೆದ ಎರಡು ವರ್ಷಗಳಿಂದ ಕೊರೊನಾ ಕಾರಣಕ್ಕೆ ದೇಶದ ಶಾಲಾ-ಕಾಲೇಜುಗಳು ವಿಶ್ವವಿದ್ಯಾನಿಲಯಗಳು, ಸರ್ಕಾರ, ಸರ್ಕಾರೇತರ ಕಚೇರಿಗಳನ್ನು ಬಂದ್ ಮಾಡಲಾಗಿತ್ತು. ಎರಡು ವರ್ಷದ ಬಳಿಕ ಸ್ವಾತಂತ್ರ್ಯ ದಿನಾಚರಣೆಯನ್ನು ಶಾಲಾ-ಕಾಲೇಜುಗಳಲ್ಲಿ ವಿದ್ಯಾರ್ಥಿಗಳೊಂದಿಗೆ, ಕಚೇರಿಗಳಲ್ಲಿ ಸಿಬ್ಬಂದಿಯೊಂದಿಗೆ ಆಚರಿಸಲಾಗುತ್ತಿದೆ. ಹೀಗಾಗಿ ಈ ವರ್ಷ ರಜೆಯಿಲ್ಲದೆ ಜೊತೆಗೆ ಸ್ವಾತಂತ್ರ್ಯ ದಿನಾಚರಣೆಯನ್ನು ವಿಶೇಷ ಕಾರ್ಯಕ್ರಮವಾಗಿ ಆಚರಿಸಲು ಉತ್ತರಪ್ರದೇಶದಲ್ಲಿ ಯೋಚಿಸಲಾಗಿದೆ.

ದೇಶದಲ್ಲಿ ಪ್ರಕರಣಗಳು ಹೆಚ್ಚಳ

ದೇಶದಲ್ಲಿ ಪ್ರಕರಣಗಳು ಹೆಚ್ಚಳ

ಉತ್ತರಪ್ರದೇಶದಲ್ಲಿ ಹೊಸದಾಗಿ 38 ಕೊರೊನಾ ಪ್ರಕರಣಗಳು ದಾಖಲಾಗಿವೆ. ಭಾರತದಲ್ಲಿ 20,139 ಹೊಸ ಕೊರೊನಾವೈರಸ್ ಪ್ರಕರಣಗಳು ದಾಖಲಾಗಿವೆ. ಜೊತೆಗೆ ಸೋಂಕಿನಿಂದ 38 ಸಾವುಗಳು ಸಂಭವಿಸಿವೆ. ಕೇಂದ್ರ ಆರೋಗ್ಯ ಸಚಿವಾಲಯ ಗುರುವಾರ (ಜುಲೈ 14) ಹಂಚಿಕೊಂಡ ಮಾಹಿತಿಯ ಪ್ರಕಾರ, ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ ಒಟ್ಟು 16,482 ಜನ ಸೋಂಕಿತರು ಗುಣಮುಖರಾಗಿದ್ದಾರೆ. ಭಾರತದಲ್ಲಿ COVID-19 ನ ಒಟ್ಟು ಸಕ್ರಿಯ ಪ್ರಕರಣಗಳು 1,36,076 ಕ್ಕೆ ಏರಿದೆ ಎಂದು ಆರೋಗ್ಯ ಸಚಿವಾಲಯದ ಅಂಕಿಅಂಶಗಳು ಇಂದು ತೋರಿಸಿವೆ. ನಿನ್ನೆ 1,32,457 ಸಕ್ರಿಯ ಪ್ರಕರಣಗಳು ದಾಖಲಾಗಿವೆ.

ICMR ಪರೀಕ್ಷೆ

ICMR ಪರೀಕ್ಷೆ

24 ಗಂಟೆಗಳ ಅವಧಿಯಲ್ಲಿ 3,619 ಸಕ್ರಿಯ ಕೋವಿಡ್-19 ಪ್ರಕರಣಗಳು ದಾಖಲಾಗಿದೆ. ಸಕ್ರಿಯ ಪ್ರಕರಣಗಳು ಒಟ್ಟು ಸೋಂಕುಗಳಲ್ಲಿ 0.31 ಪ್ರತಿಶತವನ್ನು ಒಳಗೊಂಡಿವೆ ಎಂದು ಸಚಿವಾಲಯ ತಿಳಿಸಿದೆ. ದೇಶದಲ್ಲಿ ಒಟ್ಟು ಸಾವಿನ ಸಂಖ್ಯೆ 5,25,557 ಆಗಿದೆ.

ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್ (ICMR) ಪ್ರಕಾರ, ಕೋವಿಡ್-19 ಗಾಗಿ ಜುಲೈ 13 ರವರೆಗೆ 86,81,64,348 ಮಾದರಿಗಳನ್ನು ಪರೀಕ್ಷಿಸಲಾಗಿದೆ. ಈ ಪೈಕಿ ಬುಧವಾರ 3,94,774 ಮಾದರಿಗಳನ್ನು ಪರೀಕ್ಷಿಸಲಾಗಿದೆ.

ಆರೋಗ್ಯ ಇಲಾಖೆ ಮಾಹಿತಿ

ಆರೋಗ್ಯ ಇಲಾಖೆ ಮಾಹಿತಿ

ಆರೋಗ್ಯ ಇಲಾಖೆ ಹಂಚಿಕೊಂಡ ಮಾಹಿತಿಯ ಪ್ರಕಾರ, ದೆಹಲಿಯು ಬುಧವಾರ 490 ಹೊಸ COVID-19 ಪ್ರಕರಣಗಳನ್ನು ದಾಖಲಿಸಿದೆ ಮತ್ತು ಶೇಕಡಾ 3.16 ರಷ್ಟು ಧನಾತ್ಮಕ ಪ್ರಮಾಣ ಮತ್ತು ಮೂರು ಸಾವುಗಳು ಸಂಭವಿಸಿವೆ. ಹೊಸ ಸೋಂಕುಗಳು ಮತ್ತು ಸಾವು ನೋವುಗಳೊಂದಿಗೆ, ರಾಜಧಾನಿಯ ಪ್ರಕರಣಗಳ ಸಂಖ್ಯೆ 19,41,905 ಕ್ಕೆ ಏರಿದೆ ಮತ್ತು ಸಾವಿನ ಸಂಖ್ಯೆ 26,288 ಕ್ಕೆ ಏರಿದೆ ಎಂದು ಆರೋಗ್ಯ ಇಲಾಖೆ ಬುಲೆಟಿನ್ ತಿಳಿಸಿದೆ. ದೆಹಲಿಯಲ್ಲಿ ಮಂಗಳವಾರ 400 ಕೋವಿಡ್-19 ಪ್ರಕರಣಗಳು ದಾಖಲಾಗಿದ್ದು ಮತ್ತು ಇನ್ನೊಂದು ಸಾವು ಸಂಭವಿಸಿದೆ. ನಗರದಲ್ಲಿ ಸೋಮವಾರ 280 ಪ್ರಕರಣಗಳು ವರದಿಯಾಗಿದೆ ಮತ್ತು ಯಾವುದೇ ಸಾವು ಸಂಭವಿಸಿಲ್ಲ.

Recommended Video

      ಮಮತಾ ಬ್ಯಾನರ್ಜಿ ಮಾಡಿಕೊಡ್ತಿರೋ ಪಾನಿಪುರಿ ತಿನ್ನೋದಕ್ಕೆ ಭಾರೀ ಸಂಖ್ಯೆಯಲ್ಲಿ ಸೇರಿದ ಜನ | *Politics | OneIndia

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+