ಗಡಿಯಲ್ಲಿ ಭಾರತ ಪ್ರಜೆಯನ್ನು ಗುಂಡಿಕ್ಕಿ ಹತ್ಯೆ ಮಾಡಿದ ನೇಪಾಳ ಪೊಲೀಸರು

ಪಿಲಿಭಿಟ್, ಮಾರ್ಚ್ 05: ಭಾರತ, ನೇಪಾಳ ಗಡಿಯಲ್ಲಿ ನೇಪಾಳ ಪೊಲೀಸರು ಭಾರತದ ಪ್ರಜೆಯನ್ನು ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ.

ನೇಪಾಳ ಪೊಲೀಸರೊಂದಿಗೆ ವಾಗ್ವಾದ ನಡೆದ ಪರಿಣಾಮ ಭಾರತ-ನೇಪಾಳ ಗಡಿಯಲ್ಲಿ ನಡೆದ ಪೊಲೀಸ್ ಗುಂಡಿನ ದಾಳಿಯಲ್ಲಿ ಭಾರತೀಯ ಪ್ರಜೆಯೊಬ್ಬ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ನೇಪಾಳಕ್ಕೆ ಹೋಗಿದ್ದ ಮೂವರು ಅಲ್ಲಿನ ಪೊಲೀಸರೊಂದಿಗೆ ಯಾವುದೋ ಕಾರಣಕ್ಕಾಗಿ ವಾಗ್ವಾದಕ್ಕಿಳಿದಿದ್ದರು. ಈ ವೇಳೆ ಗುಂಡಿನ ದಾಳಿ ನಡೆಸಿದ್ದರಿಂದ ಓರ್ವ ವ್ಯಕ್ತಿ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

Indian National Killed In Police Firing At India-Nepal Border, One Missing

ಮತ್ತೊಬ್ಬರು ಗಡಿ ದಾಟಿ ಭಾರತದ ಕಡೆಗೆ ಬಂದು ತಮ್ಮನ್ನು ಕಾಪಾಡಿಕೊಂಡರು, ಇನ್ನೊಬ್ಬರು ನಾಪತ್ತೆಯಾಗಿದ್ದಾರೆ ಎಂದು ಉತ್ತರ ಪ್ರದೇಶದ ಪಿತಿಬಿತ್ ಪೊಲೀಸ್ ಸೂಪರಿಂಟೆಂಡೆಂಟ್ ಜೈ ಪ್ರಕಾಶ್ ತಿಳಿಸಿದ್ದಾರೆ.

ಈ ಘಟನೆ ಬಳಿಕ ಪ್ರದೇಶದಲ್ಲಿ ಪರಿಸ್ಥಿತಿ ಉದ್ವಿಗ್ನವಾಗಿದ್ದು ಪೊಲೀಸರು ನಿಗಾ ವಹಿಸಿದ್ದಾರೆ. ಮೃತರನ್ನು 26 ವರ್ಷದ ಗೋವಿಂದ ಎಂದು ಗುರುತಿಸಲಾಗಿದ್ದು ಅವರು ಮತ್ತಿಬ್ಬರಾದ ಪಪ್ಪು ಸಿಂಗ್ ಮತ್ತು ಗುರ್ಮೀತ್ ಸಿಂಗ್ ಎಂಬುವವರೊಂದಿಗೆ ನೇಪಾಳಕ್ಕೆ ಹೋಗಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+