ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಚೀನಾ-ಭಾರತ ಘರ್ಷಣೆ: ರಾಮಮಂದಿರ ನಿರ್ಮಾಣ ಆರಂಭ ಯೋಜನೆ ರದ್ದು

|
Google Oneindia Kannada News

ಅಯೋಧ್ಯೆ, ಜೂನ್ 19: ಭಾರತ ಮತ್ತು ಚೀನಾ ನಡುವೆ ಗಡಿ ವಿವಾದ ಬಹಳ ಗಂಭೀರವಾಗಿರುವ ಕಾರಣ ಅಯೋಧ್ಯೆಯಲ್ಲಿ ಆರಂಭವಾಗಬೇಕಿದ್ದ ರಾಮಮಂದಿರ ನಿರ್ಮಾಣ ಕಾರ್ಯವನ್ನು ತಾತ್ಕಾಲಿಕವಾಗಿ ರದ್ದುಗೊಳಿಸಲಾಗಿದೆ.

Recommended Video

ಸುಶಾಂತ್ ಗೆಳತಿ ಜೊತೆ 10 ಗಂಟೆ ವಿಚಾರಣೆ ನಡೆಸಿದ ಪೊಲೀಸ್ | Rhea Chakraborty | Oneindia Kannada

ಈ ಕುರಿತು ರಾಮಮಂದಿರ ಟ್ರಸ್ಟ್ ಮಾಹಿತಿ ನೀಡಿದ್ದು, ''ದೇಶದ ರಕ್ಷಣೆ ಬಹಳ ಮುಖ್ಯ. ಪರಿಸ್ಥಿತಿ ಬಹಳ ಗಂಭೀರವಾಗಿದೆ. ರಾಮ ಮಂದಿರ ನಿರ್ಮಾಣ ಯೋಜನೆ ಈಗ ಆರಂಭಿಸುವುದು ಸೂಕ್ತವಲ್ಲ, ಸದ್ಯಕ್ಕೆ ರಾಮಮಂದಿರ ನಿರ್ಮಾಣ ಯೋಜನೆ ಇಲ್ಲ'' ಎಂದು ತಿಳಿಸಿದ್ದಾರೆ.

10 ಭಾರತೀಯ ಯೋಧರನ್ನು ಬಿಡುಗಡೆಗೊಳಿಸಿದ ಚೈನೀಸ್ ಆರ್ಮಿ10 ಭಾರತೀಯ ಯೋಧರನ್ನು ಬಿಡುಗಡೆಗೊಳಿಸಿದ ಚೈನೀಸ್ ಆರ್ಮಿ

ಗಾಲ್ವಾನ್ ಕಣಿವೆ ಪ್ರದೇಶದಲ್ಲಿ ಭಾರತ ಮತ್ತು ಚೀನಾ ಸೇನೆಯ ನಡುವೆ ಘರ್ಷಣೆ ಸಂಭವಿಸಿದ್ದು, ಈ ಘಟನೆಯಲ್ಲಿ 20 ಭಾರತೀಯ ಯೋಧರು ಹುತಾತ್ಮರಾಗಿದ್ದಾರೆ. ಇಂತಹ ಸಂದರ್ಭದಲ್ಲಿ ರಾಮಮಂದಿರ ಕಾರ್ಯ ಸೂಕ್ತವಲ್ಲ ಎಂದು ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಟ್ರಸ್ಟ್ ಸದಸ್ಯ ಅನಿಲ್ ಮಿಶ್ರಾ ಪಿಟಿಐಗೆ ತಿಳಿಸಿದ್ದಾರೆ.

Indo-China Face off: Plan to start construction of Ram Temple in Ayodhya suspended

'ರಾಮಮಂದಿರ ನಿರ್ಮಾಣ ಕಾರ್ಯ ಪ್ರಾರಂಭದ ಬಗ್ಗೆ ದೇಶದ ಪರಿಸ್ಥಿತಿ ಅನುಗುಣವಾಗಿ ತೆಗೆದುಕೊಳ್ಳಲಾಗುವುದು ಮತ್ತು ಅಧಿಕೃತವಾಗಿ ಘೋಷಣೆ ಮಾಡಲಾಗುವುದು' ಎಂದು ಅನಿಲ್ ಮಿಶ್ರಾ ಮಾಹಿತಿ ನೀಡಿದ್ದಾರೆ.

ಅಂದ್ಹಾಗೆ, ಜುಲೈ ಆರಂಭದಲ್ಲಿ ರಾಮಮಂದಿರ ನಿರ್ಮಾಣಕ್ಕೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಭೂಮಿ ಪೂಜೆ ನಡೆಸಲಿದ್ದಾರೆ ಎನ್ನಲಾಗಿತ್ತು. ಈ ಸಂಬಂಧ ಎಲ್ಲ ತಯಾರಿ ಸಹ ನಡೆಯುತ್ತಿತ್ತು.

English summary
Ram Mandir trust suspends plan to start construction of temple in Ayodhya amid standoff at Indo-China border.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X