• search
  • Live TV
ಲಕ್ನೋ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

"ಚೀನಾ, ಪಾಕ್ ಜೊತೆ ಯುದ್ಧಕ್ಕೆ ಪ್ರಧಾನಿ ಮೋದಿಯಿಂದ ದಿನಾಂಕ ನಿಗದಿ"

|

ಲಕ್ನೋ, ಅಕ್ಟೋಬರ್.25: ಚೀನಾ ಮತ್ತು ಪಾಕಿಸ್ತಾನದ ಜೊತೆಗೆ ಯುದ್ಧ ಮಾಡುವುದಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ದಿನಾಂಕವನ್ನು ನಿಗದಿಪಡಿಸಿದ್ದಾರೆ ಎನ್ನುವ ಮೂಲಕ ಉತ್ತರ ಪ್ರದೇಶದ ಬಿಜೆಪಿ ರಾಜ್ಯಾಧ್ಯಕ್ಷ ಸ್ವತಂತ್ರ ದೇವ್ ಸಿಂಗ್ ವಿವಾದದ ಕಿಡಿ ಹೊತ್ತಿಸಿದ್ದಾರೆ.

ಬಿಜೆಪಿ ಶಾಸಕ ಸಂಜಯ್ ಯಾವದ್ ನಿವಾಸದಲ್ಲಿ ನಡೆದ ಕಾರ್ಯಕ್ರಮವೊಂದರ ಬಳಿಕ ಸ್ವತಂತ್ರ ಸಿಂಗ್ ದೇವ್ ಮಾತನಾಡಿದ್ದಾರೆ. ಭಾರತ ಚೀನಾ ಪೂರ್ವ ಗಡಿ ನಿಯಂತ್ರಣ ರೇಖೆಯಲ್ಲಿ ಪರಿಸ್ಥಿತಿ ಉದ್ವಿಗ್ನಗೊಂಡಿರುವ ಇಂಥ ಸಂದರ್ಭದಲ್ಲಿ ಬಿಜೆಪಿ ಮುಖಂಡ ಸ್ವತಂತ್ರ್ಯ ದೇವ್ ಸಿಂಗ್ ನೀಡಿರುವ ಹೇಳಿಕೆ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ.

ಲಡಾಖ್‌ನಲ್ಲಿ ಬಂಧಿಸಲಾಗಿರುವ ಚೀನಾ ಸೈನಿಕನ ಬಿಡುಗಡೆ ಸದ್ಯಕ್ಕಿಲ್ಲ

ರಾಮ ಮಂದಿರ ನಿರ್ಮಾಣ ಕಾಮಗಾರಿ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ನೀಡಿರುವ ತೀರ್ಪು. ಸಂವಿಧಾನದ 370ನೇ ವಿಧಿ ಅಡಿಯಲ್ಲಿ ಜಮ್ಮು ಕಾಶ್ಮೀರಕ್ಕೆ ನೀಡಿದ್ದ ವಿಶೇಷ ಸ್ಥಾನಮಾನ ರದ್ದುಗೊಳಿಸಿ ಬಗ್ಗೆ ಸ್ವತಂತ್ರ್ಯ ದೇವ್ ಸಿಂಗ್ ಮಾತನಾಡಿದರು.

ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್:

"ರಾಮ ಮಂದಿರ ನಿರ್ಮಾಣ ಮತ್ತು ಜಮ್ಮು ಕಾಶ್ಮೀರದ ವಿಶೇಷ ಸ್ಥಾನಮಾನ ರದ್ದುಗೊಳಿಸುವಂತಾ ತೀರ್ಮಾನಗಳನ್ನು ತೆಗೆದುಕೊಂಡ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು, ಚೀನಾ ಮತ್ತು ಪಾಕಿಸ್ತಾನದ ಜೊತೆಗೆ ಯುದ್ಧಕ್ಕೂ ಒಂದು ದಿನಾಂಕ ನಿಗದಿಗೊಳಿಸಿದ್ದಾರೆ" ಎಂದು ಸ್ವತಂತ್ರ್ಯ ದೇವ್ ಸಿಂಗ್ ಹೇಳಿಕೆಯ ನೀಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಇದೀಗ ಸಖತ್ ವೈರಲ್ ಆಗುತ್ತಿದೆ.

ಎಸ್ ಪಿ, ಬಿಎಸ್ ಪಿ ಕಾರ್ಯಕರ್ತರು ಉಗ್ರರಿಗೆ ಹೋಲಿಕೆ:

ಪಾಕಿಸ್ತಾನ ಮತ್ತು ಚೀನಾ ವಿರುದ್ಧ ಆಕ್ರೋಶಭರಿತವಾಗಿ ಮಾತನಾಡುವ ಭರಾಟೆಯಲ್ಲಿ ಸ್ವತಂತ್ರ್ಯ ದೇವ್ ಸಿಂಗ್ ಸಾಲು ಸಾಲು ಎಡವಟ್ಟು ಹೇಳಿಕೆಗಳನ್ನೇ ನೀಡಿದ್ದಾರೆ. ಸಮಾಜವಾದಿ ಮತ್ತು ಬಹುಜನ ಸಮಾಜ ಪಕ್ಷದ ಕಾರ್ಯಕರ್ತರನ್ನು ಉಗ್ರರ ಜೊತೆಗೆ ಹೋಲಿಕೆ ಮಾಡಿ ಮಾತನಾಡಿದ್ದಾರೆ.

English summary
Is It PM Narendra Modi Has Already Decided Date Of War With China And Pakistan: UP BJP President Swatantra Dev Singh.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X