ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಅಚ್ಚರಿಯ ಬೆಳವಣಿಗೆ: ಬಿಜೆಪಿ ಸೇರಲಿರುವ ನಟಿ ಜಯಪ್ರದ

|
Google Oneindia Kannada News

ಲಕ್ನೋ, ಮಾರ್ಚ್ 25: ಅಚ್ಚರಿಯ ಬೆಳವಣಿಗೆಯಲ್ಲಿ ಸಮಾಜವಾದಿ ಪಕ್ಷದ ಮಾಜಿನಾಯಕಿ, ಹೆಸರಾಂತ ನಟಿ ಜಯಪ್ರದ ಅವರು ಇಂದು ಬಿಜೆಪಿ ಸೇರಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಅಷ್ಟೇ ಅಲ್ಲ, ಒಂದು ಕಾಲದಲ್ಲಿ ತಮ್ಮ ಆಪ್ತರಾಗಿದ್ದ ಸಮಾಜವಾದಿ ಪಕ್ಷದ ಆಝಂ ಖಾನ್ ಅವರ ವಿರುದ್ಧವೇ 'ಶಬ್ದವೇದಿ' ಚಿತ್ರದ ನಟಿ ಜಯಪ್ರದಾ ಅವರು ಉತ್ತರ ಪ್ರದೇಶದ ರಾಂಪುರ ಕ್ಷೇತ್ರದಿಂದ ಅಖಾಡಕ್ಕಿಳಿಯಲಿದ್ದಾರೆ, ಬಿಜೆಪಿ ಅಭ್ಯರ್ಥಿಯಾಗಿ.

ಮೋದಿ ನಾಯಕತ್ವಕ್ಕೆ ಜೈ, ಬಿಜೆಪಿಯತ್ತ ವಾಲಿದ ಜಯಪ್ರದಾಮೋದಿ ನಾಯಕತ್ವಕ್ಕೆ ಜೈ, ಬಿಜೆಪಿಯತ್ತ ವಾಲಿದ ಜಯಪ್ರದಾ

ಲೋಕಸಭಾ ಚುನಾವಣೆ ಏಪ್ರಿಲ್ 11 ರಂದು ಆರಂಭವಾಗಲಿದ್ದು, ಏಳು ಹಂತಗಳಲ್ಲಿ ನಡೆಯಲಿದೆ. ಮೇ 19 ರ ವರೆಗೆ ನಡೆಯಲಿರುವ ಚುನಾವಣೆಯ ಫಲಿತಾಂಶ ಮೇ.23 ರಂದು ಹೊರಬೀಳಲಿದೆ.

Jaya prada likely to join BJP, may contest from Rampur against Azam Khan

55 ವರ್ಷ ವಯಸ್ಸಿನ ಜಯಪ್ರದಾ ಅವರು ಸಮಾಜವಾದಿ ಪಕ್ಷದ ಟಿಕೆಟ್ ನಿಂದಲೇ ಎರಡು ಬಾರಿ (2004,2009) ರಾಂಪುರದ ಸಂಸದೆಯಾಗಿ ಲೋಕಸಭೆ ಪ್ರವೇಶಿಸಿದ್ದರು. ಆದರೆ, 2010ರಲ್ಲಿ ಸಮಾಜವಾದಿ ಪಕ್ಷದ ಅಧ್ಯಕ್ಷ ಮುಲಾಯಂ ಸಿಂಗ್ ಯಾದವ್ ಜತೆಗಿನ ಕಿತ್ತಾಟದಿಂದಾಗಿ ರಾಜ್ಯ ಸಭಾ ಸದಸ್ಯ ಅಮರ್ ಸಿಂಗ್ ಜತೆಯಲ್ಲಿಯೇ ಜಯಪ್ರದಾ ಅವರನ್ನು ಎಸ್ ಪಿ ಉಚ್ಛಾಟಿಸಿತ್ತು.

ಎಸ್ಪಿ ಮುಖಂಡ ಅಜಮ್ ಖಾನ್ ಉಚ್ಚಾಟನೆ ?ಎಸ್ಪಿ ಮುಖಂಡ ಅಜಮ್ ಖಾನ್ ಉಚ್ಚಾಟನೆ ?

ತೆಲಗುದೇಶಂ ಪಕ್ಷದ ಮೂಲಕ ರಾಜಕೀಯ ಬದುಕು ಆರಂಭಿಸಿದ್ದ ಜಯಪ್ರದ, ಎಸ್ಪಿ ಯಿಂದ ಉಚ್ಛಾಟನೆಗೊಂಡ ನಂತರ ಎನ್ ಡಿಎ ಯತ್ತ ಒಲವು ತೋರಿದ್ದರು. ಪ್ರಧಾನಿ ನರೇಂದ್ರ ಮೋದಿ ಅವರ ಕಾರ್ಯ ವಿಧಾನವನ್ನು ಸದಾ ಶ್ಲಾಘಿಸುತ್ತ, ಬಿಜೆಪಿ ಸೇರುವ ಸೂಚನೆ ನೀಡಿದ್ದ ಜಯಪ್ರದಾ ಇಂದು ಬಿಜೆಪಿಗೆ ಅಧಿಕೃತವಾಗಿ ಸೇರುವುದು ಖಚಿತವಾಗಿದ್ದು, ರಾಂಪುರದಿಂದ ಸ್ಪರ್ಧೆಗಿಳಿಯಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಸಮಗ್ರ ಮಾಹಿತಿಯುಳ್ಳ ಲೋಕಸಭೆ ಚುನಾವಣೆಯ ವಿಶೇಷ ಪುಟ

ಕನ್ನಡ, ತೆಲುಗು, ಹಿಂದಿ ಸೇರಿದಂತೆ 70 ಕ್ಕೂ ಅಧಿಕ ಚಿತ್ರಗಳಲ್ಲಿ ನಟಿಸಿರುವ ಜಯಪ್ರದಾ, ಅವರು 2014ರಲ್ಲಿ ರಾಷ್ಟ್ರೀಯ ಲೋಕದಳ ಟಿಕೆಟ್ ಪಡೆದು ಬಿಜ್ನೋರ್ ಕ್ಷೇತ್ರದಿಂದ ಲೋಕಸಭೆಗೆ ಸ್ಪರ್ಧಿಸಿ ಬಿಜೆಪಿ ಅಭ್ಯರ್ಥಿ ವಿರುದ್ಧ ಸೋತಿದ್ದರು.

English summary
Veteran actress Jaya Prada is likely to join BJP and may contest from Rampur constituency in Uttar Pradesh, where her ex-close aide Azam Khan will be contesting from Samajwadi Party.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X