ಉತ್ತರ ಪ್ರದೇಶ ಮಾಜಿ ಸಿಎಂ ಕಲ್ಯಾಣ್ ಸಿಂಗ್ ಆರೋಗ್ಯ ಸ್ಥಿತಿ ಗಂಭೀರ

ಲಕ್ನೋ, ಜುಲೈ 21: ಉತ್ತರ ಪ್ರದೇಶ ಮಾಜಿ ಮುಖ್ಯಮಂತ್ರಿ ಕಲ್ಯಾಣ್ ಸಿಂಗ್ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಅವರಿಗೆ ಲಕ್ನೋನ ಸಂಜಯ್ ಗಾಂಧಿ ಸ್ನಾತಕೋತ್ತರ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. 89 ವರ್ಷದ ಕಲ್ಯಾಣ್ ಸಿಂಗ್ ಅವರ ಪರಿಸ್ಥಿತಿ ಮಂಗಳವಾರ ಸಂಜೆ ಗಂಭೀರವಾಗಿತ್ತು, ನಂತರ ಅವರನ್ನು ಐಸಿಯುನಲ್ಲಿ ಇರಿಸಲಾಗಿದೆ ಎಂದು ವರದಿ ತಿಳಿಸಿದೆ.

ಇನ್ನು, ಅವರ ಕ್ಲಿನಿಕಲ್ ಪ್ಯಾರಾಮೀಟರ್‌ಗಳನ್ನು ತಜ್ಞ ಸಲಹೆಗಾರರು ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ ಎಂದು ವೈದ್ಯರು ಮಾಹಿತಿ ನೀಡಿದ್ದಾರೆ. ಕಲ್ಯಾಣ್ ಸಿಂಗ್ ಅವರನ್ನು ಜುಲೈ 4 ರಂದು ಸಂಜೆ ಐಸಿಯುಗೆ ದಾಖಲಿಸಲಾಗಿತ್ತು, ರಕ್ತ ಪರೀಕ್ಷೆಗಳ ಪ್ರಕಾರ ಅವರ ಕ್ರಿಯಾಟಿನ್ ಮಟ್ಟ ಹೆಚ್ಚಾಗಿದೆ ಎಂದು ಹೇಳಲಾಗಿದೆ.

Kalyan Singhs Health Condition Critical, Put On Life-Saving Support

ಇದಕ್ಕೂ ಮುನ್ನ ಅವರು ಡಾ. ರಾಮ್ ಮನೋಹರ್ ಲೋಹಿಯಾ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇನ್ನು, ಜುಲೈ 4 ರಂದು ಮಾಜಿ ಮುಖ್ಯಮಂತ್ರಿ ಕಲ್ಯಾಣ ಸಿಂಗ್ ಅವರನ್ನು ನೋಡಲು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ರಾಮ್ ಮನೋಹರ್ ಲೋಹಿಯಾ ಆಸ್ಪತ್ರೆಗೆ ಭೇಟಿ ನೀಡಿದ್ದರು.

ದ್ರೋಗ ಮೂತ್ರಪಿಂಡ ಶಾಸ್ತ್ರ, ನರವಿಜ್ಞಾನ ಸೇರಿದಂತೆ ಹಲವು ವಿಭಾಗಗಳ ತಜ್ಞರನ್ನು ಒಳಗೊಂಡ ಸಮಿತಿ ರಚಿಸಲಾಗಿದೆ, ತಜ್ಞರು ಕಲ್ಯಾಣ್ ಸಿಂಗ್ ಅವರ ಆರೋಗ್ಯದ ಮೇಲೆ ನಿಗಾ ಇರಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+