• search
  • Live TV
ಲಕ್ನೋ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

"ರಾಹುಲ್ ಗಾಂಧಿ ಮೇಲೆ ಹಲ್ಲೆ ಮೂಲಕ ಪ್ರಜಾಪ್ರಭುತ್ವಕ್ಕೆ ಅವಮಾನ"

|

ಲಕ್ನೋ, ಅಕ್ಟೋಬರ್.01: ಉತ್ತರ ಪ್ರದೇಶದ ಹತ್ರಾಸ್ ನಲ್ಲಿ ನಡೆದ ಸಾಮೂಹಿಕ ಅತ್ಯಾಚಾರದಿಂದ ಮೃತಪಟ್ಟ ಸಂತ್ರಸ್ತೆ ಕುಟುಂಬ ಸದಸ್ಯರ ಭೇಟಿಗೆ ತೆರಳುತ್ತಿದ್ದ ವೇಳೆ ಸಂಸದ ರಾಹುಲ್ ಗಾಂಧಿ ಮೇಲೆ ಪೊಲೀಸರು ತೋರಿದ ದೌರ್ಜನ್ಯಕ್ಕೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಖಂಡನೆ ವ್ಯಕ್ತಪಡಿಸಿದ್ದಾರೆ.

"ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸಂಸದ ರಾಹುಲ್ ಗಾಂಧಿಯವರು ಹತ್ರಾಸ್ ಗೆ ಭೇಟಿ ನೀಡುವ ಎಲ್ಲ ಹಕ್ಕುಗಳನ್ನು ಹೊಂದಿದ್ದಾರೆ. ಸಾಂವಿಧಾನಿಕ ಸ್ವಾತಂತ್ರ್ಯವನ್ನು ಹೊಂದಿದ್ದಾರೆ. ಅದನ್ನು ತಡೆಯಲು ಯತ್ನಿಸಿದ ಪೊಲೀಸರ ನಡೆ ಪ್ರಜಾಪ್ರಭುತ್ವ ವಿರೋಧಿಯಾಗಿದೆ. ಪ್ರಜಾಪ್ರಭುತ್ವ ಸಮಾಜದಲ್ಲಿ ಇಂಥ ವರ್ತನೆಗೆ ಅವಕಾಶ ಇರುವುದಿಲ್ಲ. ರಾಹುಲ್ ಗಾಂಧಿ ಮೇಲೆ ಪೊಲೀಸರು ಹಲ್ಲೆಗೆ ಯತ್ನಿಸಿರುವುದು ಖಂಡನೀಯ" ಎಂದು ಪಿಣರಾಯಿ ವಿಜಯನ್ ಕಿಡಿ ಕಾರಿದ್ದಾರೆ.

ಹತ್ರಾಸ್‌ಗೆ ಹೊರಟಿದ್ದ ರಾಹುಲ್, ಪ್ರಿಯಾಂಕಾ ಬಂಧನ

ಹತ್ರಾಸ್ ಅತ್ಯಾಚಾರ ಸಂತ್ರಸ್ತೆಯ ಸಂಬಂಧಿಕರ ನಿವಾಸಕ್ಕೆ ಹೊರಟ ಸಂಸದ ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ಮುಖಂಡೆ ಪ್ರಿಯಾಂಕಾ ಗಾಂಧಿ ಅವರನ್ನು ಗೌತಮ್ ಬುದ್ಧ ನಗರ್ ನಲ್ಲಿರುವ ಯಮುನಾ ಎಕ್ಸ್ ಪ್ರೆಸ್ ವೇ ಉತ್ತರ ಪ್ರದೇಶ ಪೊಲೀಸರು ಬಂಧಿಸಿದ್ದರು.

ಸೆಕ್ಷನ್ 188ರ ಅಡಿ ರಾಹುಲ್, ಪ್ರಿಯಾಂಕಾ ಅರೆಸ್ಟ್:

ಉತ್ತರ ಪ್ರದೇಶದ ಹತ್ರಾಸ್ ನಲ್ಲಿ ಪ್ರತಿಭಟನೆ ತೀವ್ರಗೊಂಡ ಹಿನ್ನೆಲೆ 144 ಸೆಕ್ಷನ್ ಅಡಿಯಲ್ಲಿ ನಿಷೇಧಾಜ್ಞೆೆ ಜಾರಿಗೊಳಿಸಲಾಗಿತ್ತು. ಇದರ ಮಧ್ಯೆಯೂ ಕಾನೂನು ಉಲ್ಲಂಘನೆ ನಡೆಸಿದ ಆರೋಪದಡಿ ಭಾರತೀಯ ದಂಡ ಸಂಹಿತೆ 188ರ ಅಡಿಯಲ್ಲಿ ಸಂಸದ ರಾಹುಲ್ ಗಾಂಧಿ ಅವರನ್ನು ಬಂಧಿಸಲಾಗಿದೆ ಎಂದು ಉತ್ತರ ಪ್ರದೇಶ ಪೊಲೀಸರು ಸ್ಪಷ್ಟನೆ ನೀಡಿದ್ದಾರೆ.

ಉತ್ತರ ಪ್ರದೇಶದ ಹತ್ರಾಸ್ ನಲ್ಲಿ ಸಪ್ಟೆಂಬರ್.19ರಂದು ಹುಲ್ಲು ಕತ್ತರಿಸುತ್ತಿದ್ದ ಯುವತಿಯನ್ನು ಅಪಹರಿಸಿದ ದುಷ್ಕರ್ಮಿಗಳು ಅತ್ಯಾಚಾರ ನಡೆಸಿದ್ದರು. ಇಷ್ಟಕ್ಕೆ ಸುಮ್ಮನಾಗದೇ ಯುವತಿ ಕತ್ತು ಹಿಸುಕಿ, ನಾಲಗೆ ಕತ್ತರಿಸುವ ಮೂಲಕ ಕ್ರೌರ್ಯ ಮೆರೆದಿದ್ದರು. ಎರಡು ವಾರ ಸಾವು ಬದುಕಿನ ನಡುವೆ ಹೋರಾಟ ನಡೆಸಿದ ದಲಿತ ಯುವತಿ ಮಂಗಳವಾರ ನವದೆಹಲಿಯ ಸಫ್ದರ್ ಜಂಗ್ ಆಸ್ಪತ್ರೆದಲ್ಲಿ ಕೊನೆಯುಸಿರೆಳೆದಿದ್ದಳು. ಬುಧವಾರ ಮಧ್ಯರಾತ್ರಿ 2.30ರ ಸಂದರ್ಭದಲ್ಲಿ ಪೊಲೀಸರೇ ಯುವತಿಯ ಅಂತ್ಯ ಸಂಸ್ಕಾರವನ್ನು ನೆರವೇರಿಸಿದ್ದರು.

English summary
Kerala CM Pinarayi Vijayan Condemns Police Assaulting On Rahul Gandhi.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X