ಲಖಿಂಪುರ ಖೇರಿ ಪ್ರಕರಣ: 'ಅಜಯ್ ಮಿಶ್ರಾ ವಿರುದ್ಧ ಕ್ರಮ ಕೈಗೊಳ್ಳುವ ಸಾಧ್ಯತೆ ಇಲ್ಲ'
ಲಖಿಂಪುರ ಡಿಸೆಂಬರ್ 16: ಲಖಿಂಪುರ ಖೇರಿ ಘಟನೆಗೆ ಸಂಬಂಧಿಸಿದಂತೆ ಕೇಂದ್ರ ಸಚಿವ ಸಂಪುಟದಿಂದ ಅವರನ್ನು ವಜಾಗೊಳಿಸುವಂತೆ ಪ್ರತಿಪಕ್ಷಗಳ ನಾಯಕರ ಒತ್ತಾಯದ ನಡುವೆ, ಕೇಂದ್ರ ಗೃಹ ಸಚಿವ ಅಜಯ್ ಮಿಶ್ರಾ ಟೆನಿ ವಿರುದ್ಧ ಯಾವುದೇ ಕ್ರಮ ಕೈಗೊಳ್ಳುವ ಸಾಧ್ಯತೆಯಿಲ್ಲ ಎಂದು ಮೂಲಗಳು ಇಂಡಿಯಾ ಟುಡೇಗೆ ತಿಳಿಸಿವೆ. ಮೂಲಗಳ ಪ್ರಕಾರ, ಲಖಿಂಪುರ ಘಟನೆಯು "ಪ್ರತಿಭಟನಾ ನಿರತ ರೈತರ ಹತ್ಯೆಗೆ ಯೋಜಿತ ಸಂಚು" ಎಂದು ಹೇಳಿರುವ ಎಸ್‌ಐಟಿ ವರದಿಯು ಪ್ರಕರಣದಲ್ಲಿ ಅಂತಿಮ ವರದಿಯಲ್ಲ ಎಂಬುದು ಸರ್ಕಾರ ಮತ್ತು ಆಡಳಿತಾರೂಢ ಬಿಜೆಪಿಯೊಳಗಿನ ಅಭಿಪ್ರಾಯವಾಗಿದೆ. ಈ ಪ್ರಕರಣವು ಅಜಯ್ ಮಿಶ್ರಾ ಅವರ ಮಗ ಆಶಿಶ್‌ಗೆ ಸಂಬಂಧಿಸಿದೆ ಮತ್ತು ಅಜಯ್ ಮಿಶ್ರಾ ಅವರಿಗೂ ಪ್ರಕರಣಕ್ಕೂ ಯಾವುದೇ ಸಂಬಂಧವಿಲ್ಲ ಎಂಬ ಅಭಿಪ್ರಾಯವೂ ಸರ್ಕಾರದೊಳಗೆ ಇದೆ ಎಂದು ಮೂಲಗಳು ತಿಳಿಸಿವೆ.
ಅಕ್ಟೋಬರ್ 3 ರಂದು ಉತ್ತರ ಪ್ರದೇಶದ ಲಖಿಂಪುರ ಖೇರಿಯಲ್ಲಿ ಕೇಂದ್ರದ ಮೂರು ಕೃಷಿ ಕಾನೂನುಗಳ ವಿರುದ್ಧ ಆಂದೋಲನ ನಡೆಸುತ್ತಿದ್ದ ಗುಂಪು, ಯುಪಿ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಅವರ ಭೇಟಿಯನ್ನು ವಿರೋಧಿಸಿ ಪ್ರತಿಭಟನೆ ನಡೆಸುತ್ತಿತ್ತು. ಈ ವೇಳೆ ವೇಗವಾಗಿ ಬಂದ ವಾಹನ ಪ್ರತಿಭಟನಾನಿರತ ರೈತರ ಮೇಲೆ ಹರಿದಿದೆ. ಘಟನೆಯಲ್ಲಿ ನಾಲ್ವರು ರೈತರು ಮೃತಪಟ್ಟರು. ಉದ್ರಿಕ್ತಗೊಂಡ ಪ್ರತಿಭಟನಾಕಾರರು ಬಿಜೆಪಿ ಕಾರ್ಯಕರ್ತರ ಮೇಲೆ ದಾಳಿ ಮಾಡಿದೆ. ಘಟನೆಯಲ್ಲಿ ಓರ್ವ ಪತ್ರಕರ್ತ ಸೇರಿದಂತೆ ಒಟ್ಟು ನಾಲ್ವರು ಸಾವನ್ನಪ್ಪಿದ್ದಾರೆ. ಜೊತೆಗೆ ರೈತರ ಮೇಲೆ ಅಜಯ್ ಮಿಶ್ರಾ ಅವರಿಗೆ ಸೇರಿದ ಎಸ್‌ಯುವಿ ಹರಿದ ವಾಹನವನ್ನು ಕೇಂದ್ರ ಸಚಿವ ಅಜಯ್ ಮಿಶ್ರಾ ಅವರ ಪುತ್ರಾ ಆಶಿಶ್ ಮಿಶ್ರಾ ಚಲಾಯಿಸುತ್ತಿದ್ದರು ಎಂದು ರೈತರು ಆರೋಪಿಸಿದ್ದಾರೆ. ಹೀಗಾಗಿ ಆಶಿಶ್ ಮಿಶ್ರಾ ಅವರನ್ನು ಬಂಧಿಸಲಾಗಿದೆ. ಜೊತೆಗೆ ಪ್ರಕರಣದ ತನಿಖೆ ಕೂಡ ಚಾಲ್ತಿಯಲ್ಲಿದೆ. ಈ ಘಟನೆಯ ಹೊಣೆ ಹೊತ್ತು ಅಜಯ್ ಮಿಶ್ರಾ ಕೂಡ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ವಿರೋಧ ಪಕ್ಷಗಳು ಪಟ್ಟು ಹಿಡಿದಿವೆ. ಜೊತೆಗೆ ರೈತರು ಕೂಡ ಅಜಯ್ ಮಿಶ್ರಾ ಹಾಗೂ ಅವರ ಪುತ್ರನ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಹಲವಾರು ಬಾರಿ ಪ್ರತಿಭಟನೆ ಕೂಡ ಮಾಡಿದ್ದಾರೆ.
ಪ್ರಕರಣದಲ್ಲಿ ಆಶಿಶ್ ಮಿಶ್ರಾ, ಲುವ್ಕುಶ್, ಆಶಿಶ್ ಪಾಂಡೆ, ಶೇಖರ್ ಭಾರ್ತಿ, ಅಂಕಿತ್ ದಾಸ್, ಲತೀಫ್, ಶಿಶುಪಾಲ್, ನಂದನ್ ಸಿಂಗ್, ಸತ್ಯಂ ತ್ರಿಪಾಠಿ, ಸುಮಿತ್ ಜೈಸ್ವಾಲ್, ಧರ್ಮೇಂದ್ರ ಬಂಜಾರಾ, ರಿಂಕು ರಾಣಾ ಮತ್ತು ಉಲ್ಲಾಸ್ ತ್ರಿವೇದಿಯನ್ನು ಬಂಧಿಸಲಾಗಿದೆ. ಆರೋಪಿಗಳು ಪ್ರಸ್ತುತ ಪೊಲೀಸ್ ಕಸ್ಟಡಿಯಲ್ಲಿದ್ದಾರೆ.

ಉತ್ತರ ಪ್ರದೇಶ ಸರ್ಕಾರ ರಚಿಸಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ತನ್ನ ವರದಿಯಲ್ಲಿ ಲಖೀಂಪುರ ಖೇರಿ ಹಿಂಸಾಚಾರದ ಘಟನೆಯು "ಯೋಜಿತ ಪಿತೂರಿ" ಮತ್ತು ಹಿಂದೆ ಹೇಳಿಕೊಂಡಂತೆ ಕ್ರಿಮಿನಲ್‌ಗಳಿಂದಾದ ಘಟನೆಯಲ್ಲ ಎಂದು ಹೇಳಿದೆ. ಆಶಿಶ್ ಮಿಶ್ರಾ ಸೇರಿದಂತೆ ಆರೋಪಿಗಳ ವಿರುದ್ಧದ ಆರೋಪಗಳನ್ನು ಮಾರ್ಪಡಿಸುವಂತೆ ಎಸ್‌ಐಟಿ ನ್ಯಾಯಾಧೀಶರಿಗೆ ಪತ್ರ ಬರೆದಿದೆ.
ಆಶಿಶ್ ಮಿಶ್ರಾ ಮೇಲೆ, ಎಸ್‌ಐಟಿ ಸೆಕ್ಷನ್ 307 (ಕೊಲೆಗೆ ಯತ್ನ), ಸೆಕ್ಷನ್ 326 (ಅಪಾಯಕಾರಿ ಆಯುಧದಿಂದ ಗಾಯಗೊಳಿಸುವುದು), ಸೆಕ್ಷನ್ 34 (ಸಾಮಾನ್ಯ ಉದ್ದೇಶಕ್ಕಾಗಿ ಹಲವಾರು ವ್ಯಕ್ತಿಗಳು ಮಾಡಿದ ಕೃತ್ಯಗಳು) ಮತ್ತು ಸೆಕ್ಷನ್ 3/25 ಅಡಿಯಲ್ಲಿ ಪ್ರಕರಣ ದಾಖಲಿಸಲು ಅನುಮತಿ ಕೋರಿದೆ. ಲಖಿಂಪುರ ಖೇರಿ ಹಿಂಸಾಚಾರದಲ್ಲಿ ಅವರ ಪುತ್ರನ ಕೈವಾಡದ ಕುರಿತು ಅಜಯ್ ಮಿಶ್ರಾ ಟೆನಿ ಅವರನ್ನು ಕೇಂದ್ರ ಸಚಿವ ಸಂಪುಟದಿಂದ ವಜಾಗೊಳಿಸಬೇಕೆಂದು ವಿರೋಧ ಪಕ್ಷದ ನಾಯಕರು ಒತ್ತಾಯಿಸಿ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು.












Click it and Unblock the Notifications