ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಲಖಿಂಪುರ್ ಹಿಂಸಾಚಾರ ಪ್ರಕರಣ: ಪ್ರಮುಖ ಆರೋಪಿ ಆಶಿಷ್ ಮಿಶ್ರಾ ಹಾಜರು

|
Google Oneindia Kannada News

ನವದೆಹಲಿ, ಅಕ್ಟೋಬರ್ 09: ಲಖಿಂಪುರ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿಯಾಗಿರುವ ಆಶಿಷ್ ಮಿಶ್ರಾ ಕ್ರೈಂ ಬ್ರಾಂಚ್ ಕಚೇರಿಗೆ ವಿಚಾರಣೆಗೆ ಹಾಜರಾಗಿದ್ದಾರೆ.

ಕಳೆದ ಭಾನುವಾರ ನಡೆದ ಹಿಂಸಾಚಾರವು ದೇಶವನ್ನು ತಲ್ಲಣಗೊಳಿಸಿತ್ತು. ಕೇಂದ್ರ ಸಚಿವರು ಆಯೋಜಿಸಿದ ಕಾರ್ಯಕ್ರಮದಲ್ಲಿ ಭಾಗವಹಿಸಲು ಉತ್ತರ ಪ್ರದೇಶ ಉಪಮುಖ್ಯಮಂತ್ರಿ ಕೇಶವ ಪ್ರಸಾದ್ ಮೌರ್ಯ ಅವರ ಭೇಟಿಗೆ ವಿರೋಧ ವ್ಯಕ್ತಪಡಿಸುತ್ತಿದ್ದಾಗ ನಡೆದ ಅವಘಡದಲ್ಲಿ ನಾಲ್ಕು ರೈತರು ಸೇರಿದಂತೆ ಎಂಟು ಜೀವ ಬಲಿಯಾಗಿತ್ತು.

ಸಚಿವ ಅಜಯ್ ಮಿಶ್ರಾ ರಾಜೀನಾಮೆಗೆ ಪ್ರಿಯಾಂಕಾ ಗಾಂಧಿ ವಾದ್ರಾ ಪಟ್ಟುಸಚಿವ ಅಜಯ್ ಮಿಶ್ರಾ ರಾಜೀನಾಮೆಗೆ ಪ್ರಿಯಾಂಕಾ ಗಾಂಧಿ ವಾದ್ರಾ ಪಟ್ಟು

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಆಶಿಷ್ ಮಿಶ್ರಾ ಮೇಲೆ ಸಾಕಷ್ಟು ಒತ್ತಡವಿತ್ತು ಎನ್ನಲಾಗಿದೆ. ಒಂದೆಡೆ ಸುಪ್ರೀಂ ಕೋರ್ಟ್ ಚಾಟಿ, ಮತ್ತೊಂದೆಡೆ ಬಿಜೆಪಿ ಪಕ್ಷಕ್ಕಾಗುತ್ತಿದ್ದ ಮುಜುಗರ ಆಶಿಷ್ ಮಿಶ್ರಾ ವಿಚಾರಣೆ ಹಾಜರಾಗಲು ಒತ್ತಡ ಹೇರಿತ್ತು ಎನ್ನಲಾಗಿದೆ.

Lakhimpur Kheri: India Ministers Son Evades Police Questioning

ಇಂದು ಬೆಳಗ್ಗೆಯೂ ಕೂಡ ಉತ್ತರ ಪ್ರದೇಶ ಪೊಲೀಸರು ಆಶಿಷ್ ಮಿಶ್ರಾಗೆ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ನೀಡಿದ್ದರು. ಈ ಸಮನ್ಸ್ ವಿಚಾರದ ಬೆನ್ನಲ್ಲೇ ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದ ಆರೋಪಿ ಪರ ಕಾನೂನು ಸಲಹೆಗಾರ ಅವಧೇಶ್ ಕುಮಾರ್ ಅವರು, 'ನಾವು ಸೂಚನೆಯನ್ನು ಗೌರವಿಸುತ್ತೇವೆ ಮತ್ತು ತನಿಖೆಗೆ ಸಹಕರಿಸುತ್ತೇವೆ. ಆಶಿಶ್ ಮಿಶ್ರಾ ಇಂದು ಪೊಲೀಸರ ಮುಂದೆ ಹಾಜರಾಗಲಿದ್ದಾರೆ ಎಂದು ಹೇಳಿದ್ದರು.

ಅದರಂತೆ ಆಶಿಷ್ ಮಿಶ್ರಾ, ಶನಿವಾರ ಉತ್ತರ ಪ್ರದೇಶ ಪೊಲೀಸರ ಅಪರಾಧ ವಿಭಾಗದ ಅಧಿಕಾರಿಗಳ ಮುಂದೆ ಮುಂದೆ ಹಾಜರಾದರು. ಆಶಿಷ್ ಮಿಶ್ರಾ ಶನಿವಾರ ಹಾಜರಾಗುವ ಮುನ್ನ ಪೊಲೀಸರು ತೆನಿ ನಿವಾಸ ಮತ್ತು ಲಖಿಂಪುರ್ ಖೇರಿಯಲ್ಲಿ ಸಾಕಷ್ಟು ಬಿಗಿ ಪೊಲೀಸ್ ಬಂದೋಬಸ್ತ್ ಮಾಡಿದ್ದರು.

ಇನ್ನು ಇದೇ ಪ್ರಕರಣದ ವಿಚಾರವಾಗಿ ಸುಪ್ರೀಂ ಕೋರ್ಟ್ ಉತ್ತರ ಪ್ರದೇಶ ಪೊಲೀಸರು ಮತ್ತು ಸರ್ಕಾರಕ್ಕೆ ಚಾಟಿ ಬೀಸಿತ್ತು. ಪ್ರಕರಣ ನಡೆದು ಐದು ದಿನಗಳ ನಂತರವೂ ಆಶಿಷ್‌ನನ್ನು ಬಂಧಿಸದಿದ್ದಕ್ಕಾಗಿ ಸುಪ್ರೀಂ ಕೋರ್ಟ್ ತನ್ನ ಅಸಮಾಧಾನ ವ್ಯಕ್ತಪಡಿಸಿತ್ತು.

ಈ ಹಿಂದೆ ಯುಪಿ ಪೊಲೀಸರು ಗುರುವಾರ ನೀಡಿದ ಮೊದಲ ಸಮನ್ಸ್‌ಗೆ ಪ್ರತಿಕ್ರಿಯೆಯಾಗಿ ಆಶಿಷ್ ಮಿಶ್ರಾ ಶುಕ್ರವಾರ ಹಾಜರಾಗಲಿಲ್ಲ. ನಂತರ ಪೊಲೀಸ್ ಅಧಿಕಾರಿಗಳು ಶುಕ್ರವಾರ ಎರಡನೇ ಸಮನ್ಸ್ ನೀಡಿದ್ದರು.

ಆಶಿಷ್ ಅವರನ್ನು ಲಖಿಂಪುರದಲ್ಲಿ ಶನಿವಾರ ಬೆಳಿಗ್ಗೆ 11 ಗಂಟೆಯೊಳಗೆ ವಿಚಾರಣೆಗಾಗಿ ಅಪರಾಧ ವಿಭಾಗದ ಮುಂದೆ ಹಾಜರುಪಡಿಸುವಂತೆ ಕೇಳಿಕೊಂಡರು. ಆಶಿಷ್ ಶುಕ್ರವಾರ ಪೊಲೀಸ್ ಸಮನ್ಸ್ ಗೆ ಉತ್ತರಿಸಿ ಅವರ ತಂದೆ ಮತ್ತು ನನ್ನ ಆರೋಗ್ಯದ ಕಾರಣಗಳಿಂದ ಪೊಲೀಸರ ವಿಚಾರಣೆಗೆ ತೆರಳಲು ಸಾಧ್ಯವಿಲ್ಲ ಎಂದು ಹೇಳಿದ್ದರು.

ಬಳಿಕ ರೈತರ ದೂರಿನ ಆಧಾರದ ಮೇಲೆ ಎಫ್‌ಐಆರ್ ದಾಖಲಿಸಲಾಗಿತ್ತು, ಈ ಪೈಕಿ ಕೇಂದ್ರ ಸಚಿವರ ಪುತ್ರ ಆಶಿಷ್ ಮಿಶ್ರಾ ಮತ್ತು 15-20 ಅಪರಿಚಿತ ವ್ಯಕ್ತಿಗಳ ವಿರುದ್ಧ ಐಪಿಸಿಯ ವಿವಿಧ ಸೆಕ್ಷನ್ ಗಳ ಅಡಿಯಲ್ಲಿ ಕೊಲೆ, ಕ್ರಿಮಿನಲ್ ಪಿತೂರಿ ಮತ್ತು ಗಲಭೆ ಇತ್ಯಾದಿಗಳನ್ನು ದಾಖಲಿಸಲಾಗಿದೆ.

ಲಖಿಂಪುರಖೇರಿ ಪ್ರಕರಣದ ಆರೋಪಿಯನ್ನು ಬಂಧಿಸುವಂತೆ ಆಗ್ರಹಿಸಿ ಕಾಂಗ್ರೆಸ್ ನಾಯಕ ನವಜೋತ್ ಸಿಂಗ್ ಸಿಧು ನಡೆಸುತ್ತಿದ್ದ ಉಪವಾಸ ಸತ್ಯಾಗ್ರಹವನ್ನು ಕೈ ಬಿಟ್ಟಿದ್ದಾರೆ. ಆಶಿಷ್ ಮಿಶ್ರಾ ಕ್ರೈಂ ಬ್ರಾಂಚ್ ಕಚೇರಿಗೆ ಆಗಮಿಸುತ್ತಿದ್ದಂತೆಯೇ ಇತ್ತ ಲಕ್ನೋನಲ್ಲಿ ಸಿಧು ನಡೆಸುತ್ತಿದ್ದ ಉಪವಾಸ ಸತ್ಯಾಗ್ರಹವನ್ನು ಅಂತ್ಯಗೊಳಿಸಿದ್ದಾರೆ ಎನ್ನಲಾಗಿದೆ.

English summary
Union Minister Ajay Mishra's son Ashish, accused of running over farmers in Uttar Pradesh, today arrived for questioning in Lakhimpur Kheri, escorted by dozens of cops. He had skipped summons yesterday.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X