Breaking: ಲಿಖಿಂಪುರ ಪ್ರಕರಣ: ಕೇಂದ್ರ ಸಚಿವರ ಪುತ್ರ ಆಶಿಶ್ ಮಿಶ್ರಾಗೆ ಜಾಮೀನು ನಿರಾಕರಣೆ
ಲಕ್ನೋ, ಜುಲೈ. 26: ಲಖಿಂಪುರ ಖೇರಿ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರದ ಕಿರಿಯ ಗೃಹ ಸಚಿವ ಅಜಯ್ ಮಿಶ್ರಾ ಅವರ ಪುತ್ರ ಆಶಿಶ್ ಮಿಶ್ರಾ ಅವರಿಗೆ ಅಲಹಾಬಾದ್ ಹೈಕೋರ್ಟ್ ಸೋಮವಾರ ಜಾಮೀನು ನಿರಾಕರಿಸಿದೆ.
ಫೆಬ್ರವರಿ 10 ರಂದು ಅಲಹಾಬಾದ್ ಹೈಕೋರ್ಟ್‌ನ ಲಕ್ನೋ ಪೀಠವು ನೀಡಿದ ಜಾಮೀನು ಆದೇಶವನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದ ನಂತರ ಆಶಿಶ್ ಮಿಶ್ರಾ ಹೊಸ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ನಂತರ ಸುಪ್ರೀಂ ಕೋರ್ಟ್ ಸಾಕಷ್ಟು ಅವಕಾಶವನ್ನು ನೀಡಿದ ನಂತರ ಅವರ ಜಾಮೀನು ಅರ್ಜಿಯನ್ನು ನಿರ್ಧರಿಸಲು ಹೈಕೋರ್ಟ್‌ಗೆ ಸೂಚಿಸಿತ್ತು.
ಅದರಂತೆ, ಹೈಕೋರ್ಟ್ ಅವರ ಜಾಮೀನು ಅರ್ಜಿಯನ್ನು ಹೊಸದಾಗಿ ಆಲಿಸಿತು. ವಿಚಾರಣೆಯನ್ನು ಪೂರ್ಣಗೊಳಿಸಿದ ನಂತರ ಜುಲೈ 15 ರಂದು ಆದೇಶವನ್ನು ಕಾಯ್ದಿರಿಸಿತು. ಅದರ ತೀರ್ಪನ್ನು ಸೋಮವಾರಕ್ಕೆ ನಿಗದಿಪಡಿಸಿತ್ತು. ಕಳೆದ ವರ್ಷ ಅಕ್ಟೋಬರ್‌ನಲ್ಲಿ ಉತ್ತರ ಪ್ರದೇಶದ ಲಖಿಂಪುರ ಖೇರಿಯಲ್ಲಿ ಕೃಷಿ ಕಾನೂನುಗಳ ವಿರುದ್ಧ ನಡೆದ ಪ್ರತಿಭಟನೆಯಲ್ಲಿ ನಾಲ್ವರು ರೈತರು ಸಾವನ್ನಪ್ಪಿದ್ದರು.

ಈ ವೇಳೆ ಆಶಿಶ್ ಮಿಶ್ರಾ ಕಾರಿನಲ್ಲಿ ಕುಳಿತಿದ್ದರು ಎನ್ನಲಾಗಿತ್ತು. ಈ ಪ್ರದೇಶದಲ್ಲಿ ಹಿಂಸಾಚಾರ ಭುಗಿಲೆದ್ದು, ಘಟನೆಯಲ್ಲಿ ನಾಲ್ವರು ರೈತರು, ಓರ್ವ ಪತ್ರಕರ್ತರು ಹಾಗೂ ಇಬ್ಬರು ಬಿಜೆಪಿ ಕಾರ್ಯಕರ್ತರು ಸೇರಿದಂತೆ ಒಟ್ಟು 8 ಮಂದಿ ಸಾವನ್ನಪ್ಪಿದ್ದರು. ಆಶಿಶ್ ರಾಜಕೀಯವಾಗಿ ತುಂಬಾ ಪ್ರಭಾವಿಯಾಗಿದ್ದು, ಸಾಕ್ಷಿಗಳ ಮೇಲೆ ಪ್ರಭಾವ ಬೀರಬಹುದು ಮತ್ತು ವಿಚಾರಣೆಯ ಮೇಲೆ ಪರಿಣಾಮ ಬೀರಬಹುದು ಎಂದು ನ್ಯಾಯಮೂರ್ತಿ ಕೃಷ್ಣ ಪಹಲ್ ಪೀಠ ಹೇಳಿತ್ತು.
ಪ್ರತಿಭಟನಾನಿರತರ ಮೇಲೆ ವೇಗವಾಗಿ ಬಂದ ಸ್ಕಾರ್ಪಿಯೋ ವಾಹನವೊಂದು ರೈತರು ಹಾಗೂ ಪತ್ರಕರ್ತರ ಮೇಲೆ ಹರಿದಿತ್ತು. ನಂತರದ ನಡೆದ ಹಿಂಸಾಚಾರದಲ್ಲಿ ಇಬ್ಬರು ಬಿಜೆಪಿ ಕಾರ್ಯಕರ್ತರು ಮತ್ತು ವಾಹನದ ಚಾಲಕನನ್ನು ಉದ್ರೇಕಿತ ಗುಂಪು ಕೊಂದಿತ್ತು.












Click it and Unblock the Notifications