ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಲಖೀಂಪುರ್ ಹಿಂಸಾಚಾರ: 4 ಸಾಕ್ಷಿಗಳ ಹೇಳಿಕೆ ದಾಖಲಿಸಿದ ಯುಪಿ ಸರ್ಕಾರಕ್ಕೆ ಸುಪ್ರೀಂಕೋರ್ಟ್ ಚಾಟಿ!

|
Google Oneindia Kannada News

ಲಕ್ನೋ, ಅಕ್ಟೋಬರ್ 20: ಉತ್ತರ ಪ್ರದೇಶದ ಲಖಿಂಪುರ್ ಖೇರಿ ಹಿಂಸಾಚಾರ ಪ್ರಕರಣದಲ್ಲಿ 44 ಸಾಕ್ಷಿಗಳ ಪೈಕಿ ಈವರೆಗೂ ಕೇವಲ 4 ಸಾಕ್ಷಿಗಳ ಹೇಳಿಕೆಯನ್ನು ಸಂಗ್ರಹಿಸಿದ ಉತ್ತರ ಪ್ರದೇಶ ಸರ್ಕಾರದ ವಿರುದ್ಧ ಸುಪ್ರೀಂಕೋರ್ಟ್ ಚಾಟಿ ಬೀಸಿದೆ.

ಮುಖ್ಯ ನ್ಯಾಯಮೂರ್ತಿ ಎನ್ ವಿ ರಮಣ ನೇತೃತ್ವದ ನ್ಯಾಯಪೀಠವು ಬುಧವಾರ ಈ ವಿಷಯದ ಬಗ್ಗೆ ರಾಜ್ಯ ಸರ್ಕಾರ ಮುಚ್ಚಿದ ಲಕೋಟೆಯಲ್ಲಿ ಸಲ್ಲಿಸಿದ ವರದಿಯನ್ನು ಪರಿಶೀಲನೆ ನಡೆಸಿತು. ಅಕ್ಟೋಬರ್ 3ರಂದು ಲಖೀಂಪುರ್ ಖೇರಿಯಲ್ಲಿ ನಡೆದ ಹಿಂಸಾಚಾರದಲ್ಲಿ ನಾಲ್ವರು ರೈತರು ಸೇರಿದಂತೆ ಎಂಟು ಮಂದಿ ಪ್ರಾಣ ಬಿಟ್ಟಿದ್ದಾರೆ. ಈ ಘಟನೆಗೆ ಸಂಬಂಧಿಸಿದಂತೆ 44 ಸಾಕ್ಷಿಗಳ ಪೈಕಿ ಕೇವಲ 4 ಸಾಕ್ಷಿಗಳ ಹೇಳಿಕೆಯನ್ನು ಮಾತ್ರ ದಾಖಲಿಸಿಕೊಳ್ಳಲಾಗಿದೆ. ನ್ಯಾಯಾಧೀಶರ ಎದುರು ಉಳಿದ 40 ಸಾಕ್ಷಿಗಳ ಹೇಳಿಕೆಯನ್ನು ದಾಖಲಿಸುವಂತೆ ಸರ್ಕಾರಕ್ಕೆ ಸುಪ್ರೀಂಕೋರ್ಟ್ ಸೂಚನೆ ನೀಡಿದೆ.

ನ್ಯಾಯಮೂರ್ತಿ ಸೂರ್ಯಕಾಂತ್ ಮತ್ತು ಹಿಮಾ ಕೊಹ್ಲಿ ನೇತೃತ್ವದ ವಿಭಾಗೀಯ ಪೀಠ ಎದುರಿಗೆ ಉಳಿದ ಸಾಕ್ಷಿಗಳ ಹೇಳಿಕೆಯನ್ನು ದಾಖಲಿಸುವ ಪ್ರಕ್ರಿಯೆ ನಡೆಸಲಾಗುತ್ತಿದೆ ಎಂದು ಉತ್ತರ ಪ್ರದೇಶ ಸರ್ಕಾರವು ತಿಳಿಸಿದೆ. ಈ ಪ್ರಕರಣದ ವಿಚಾರಣೆಯನ್ನು ಸುಪ್ರೀಂಕೋರ್ಟ್ ಅಕ್ಟೋಬರ್ 26ಕ್ಕೆ ಮುಂದೂಡಿದೆ.

Lakhimpur violence: Why only 4 witness statement recorded Out of 44, Supreme Court Questions UP Govt

ಕೇಂದ್ರ ಸಚಿವ ಅಜಯ್ ಮಿಶ್ರಾ ವಜಾಗೊಳಿಸಲು ಆಗ್ರಹ:

ಉತ್ತರ ಪ್ರದೇಶದ ಲಖೀಂಪುರ್ ಖೇರಿಯಲ್ಲಿ ಅಕ್ಟೋಬರ್ 3ರಂದು ರೈತರ ಮೇಲೆ ನಡೆದ ಹಿಂಸಾಚಾರದಲ್ಲಿ ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಅಜಯ್ ಮಿಶ್ರಾ ಮತ್ತು ಅವರ ಪುತ್ರ ಆಶೀಶ್ ಮಿಶ್ರಾ ವಿರುದ್ಧ ಆರೋಪ ಕೇಳಿ ಬಂದಿತ್ತು. ಈ ಸಂಬಂಧ ಕೇಂದ್ರ ಸಚಿವ ಸ್ಥಾನದಿಂದ ಅವರನ್ನು ವಜಾಗೊಳಿಸುವಂತೆ ರೈತರು ಪ್ರತಿಭಟನೆ ನಡೆಸಿದ್ದರು. ಅಕ್ಟೋಬರ್ 18ರಂದು ದೇಶವ್ಯಾಪಿ ಸಂಯುಕ್ತ ಕಿಸಾನ್ ಮೋರ್ಚಾ ಸಂಘಟನೆ ಸೇರಿದಂತೆ ರೈತ ಸಂಘಟನೆಗಳು ರೈಲು ತಡೆ ನಡೆಸಿದ್ದವು.

ಅಕ್ಟೋಬರ್ 18ರಂದು ದೇಶವ್ಯಾಪ್ತಿ ರೈಲುತಡೆ:

ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಅಜಯ್ ಮಿಶ್ರಾ ವಜಾಗೊಳಿಸುವಂತೆ ಆಗ್ರಹಿಸಿ ಸೋಮವಾರ ಸಂಯುಕ್ತ ಕಿಸಾನ್ ಮೋರ್ಚಾ ರಾಷ್ಟ್ರವ್ಯಾಪಿ ರೈಲುತಡೆಗೆ ಕರೆ ಕೊಟ್ಟಿದೆ. ಕೇಂದ್ರ ಸರ್ಕಾರ ಜಾರಿಗೊಳಿಸಲು ಹೊರಟಿರುವ ವಿವಾದಿತ ಕೃಷಿ ಕಾಯ್ದೆಗಳ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ರೈತ ಸಂಘಟನೆಗಳು ಲಖೀಂಪುರ್ ಖೇರಿ ಹಿಂಸಾಚಾರದಲ್ಲಿ ಮೃತ ರೈತರಿಗೆ ನ್ಯಾಯ ಸಿಗುವವರೆಗೂ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುವವರೆಗೂ ಹೋರಾಟ ಮುಂದುವರಿಸುವುದಾಗಿ ಹೇಳಿಕೆಯಲ್ಲಿ ಸ್ಪಷ್ಟಪಡಿಸಿದೆ. ಲಖೀಂಪುರ್ ಖೇರಿ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಗೃಹ ಖಾತೆಯ ರಾಜ್ಯ ಸಚಿವ ಅಜಯ್ ಮಿಶ್ರಾರನ್ನು ಹುದ್ದೆಯಿಂದ ವಜಾಗೊಳಿಸಬೇಕು ಹಾಗೂ ಪೊಲೀಸರು ಅವರನ್ನು ಬಂಧಿಸಬೇಕು ಎಂದು ರೈತ ಸಂಘಟನೆಗಳು ಆಗ್ರಹಿಸಿವೆ.

Lakhimpur violence: Why only 4 witness statement recorded Out of 44, Supreme Court Questions UP Govt

ಲಖೀಂಪುರ್ ಖೇರಿ ಹಿಂಸಾಚಾರ ಪ್ರಕರಣದ ಹಿನ್ನೆಲೆ:

ಕಳೆದ ಅಕ್ಟೋಬರ್ 3ರಂದು ಉತ್ತರ ಪ್ರದೇಶದ ಲಖಿಂಪುರ್ ಖೇರಿಯಲ್ಲಿ ನಡೆದ ಹಿಂಸಾಚಾರದಲ್ಲಿ ನಾಲ್ವರು ರೈತರು ಒಬ್ಬ ಪತ್ರಕರ್ತ ಸೇರಿದಂತೆ ಎಂಟು ಮಂದಿ ಪ್ರಾಣ ಬಿಟ್ಟಿದ್ದರು. ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಅಜಯ್ ಮಿಶ್ರಾ ಪುತ್ರ ಆಶೀಶ್ ಮಿಶ್ರಾ ವಿರುದ್ಧ ರೈತರ ಮೇಲೆ ಕಾರು ಹರಿಸಿದ ಆರೋಪ ಮಾಡಲಾಗಿದ್ದು, ಅಕ್ಟೋಬರ್ 9ರಂದು ಪೊಲೀಸರು ಆರೋಪಿಯನ್ನು ಬಂಧಿಸಿದ್ದರು.

Lakhimpur violence: Why only 4 witness statement recorded Out of 44, Supreme Court Questions UP Govt

ಕೃಷಿ ಕಾಯ್ದೆ ವಿರುದ್ಧ ದೆಹಲಿಯಲ್ಲಿ ಮುಂದುವರಿದ ಪ್ರತಿಭಟನೆ:

ಕೇಂದ್ರ ಸರ್ಕಾರ ಜಾರಿಗೊಳಿಸಲು ಮುಂದಾಗಿರುವ ವಿವಾದಿತ ರೈತರ ಉತ್ಪಾದನೆ ವ್ಯಾಪಾರ ಮತ್ತು ವಾಣಿಜ್ಯ (ಪ್ರಚಾರ ಮತ್ತು ಸೌಲಭ್ಯ) ಕಾಯ್ದೆ, ಬೆಲೆ ಭರವಸೆ ಮತ್ತು ಕೃಷಿ ಸೇವೆಗಳ ಕಾಯ್ದೆ (ಸಬಲೀಕರಣ ಮತ್ತು ಸಂರಕ್ಷಣೆ) ಒಪ್ಪಂದ ಹಾಗೂ ಅಗತ್ಯ ಸರಕುಗಳ (ತಿದ್ದುಪಡಿ) ಕಾಯ್ದೆಗಳ ವಿರುದ್ಧ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಕಳೆದ 2020ರ ನವೆಂಬರ್.26ರಿಂದ ನವದೆಹಲಿಯ ಸಿಂಘು ಗಡಿ, ಟಿಕ್ರಿ ಗಡಿ ಮತ್ತು ಘಾಜಿಪುರ್ ಗಡಿ ಪ್ರದೇಶಗಳಲ್ಲಿ ರೈತರು ನಿರಂತರವಾಗಿ ಪ್ರತಿಭಟನೆ ನಡೆಸುತ್ತಿದ್ದಾರೆ. ಪಂಜಾಬ್, ಹರಿಯಾಣ, ಮತ್ತು ಉತ್ತರ ಪ್ರದೇಶದ ಸಾವಿರಾರು ರೈತರು ಕೃಷಿ ಕಾಯ್ದೆಗಳ ವಿರುದ್ಧ ಹೋರಾಟ ನಡೆಸುತ್ತಿದ್ದಾರೆ.

English summary
Lakhimpur Kheri Violence: Why only 4 witness statement recorded Out of 44, Supreme Court Questions Uttar Pradesh Govt.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X