ಲಲಿತ್‌ಪುರ ಅತ್ಯಾಚಾರ: ಇನ್ಸ್‌ಪೆಕ್ಟರ್‌ಗೆ ನ್ಯಾಯಾಂಗ ಬಂಧನ, ಠಾಣೆಯಲ್ಲಿ ಹೊಸ ಸಿಬ್ಬಂದಿ
ಲಲಿತ್‌ಪುರ ಮೇ 6: ಲಲಿತ್‌ಪುರ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಬಂಧಿತ ಠಾಣಾಧಿಕಾರಿಯನ್ನು ಗುರುವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿದೆ. ಇದರೊಂದಿಗೆ ನ್ಯಾಯಾಲಯದ ಆದೇಶದ ಮೇರೆಗೆ ಪ್ರಕರಣದ ಎಲ್ಲ ಆರು ಆರೋಪಿಗಳನ್ನು ಜೈಲಿಗೆ ಕಳುಹಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಅತ್ಯಾಚಾರದ ಬಳಿಕ ಪರಾರಿಯಾಗಿದ್ದ ಆರೋಪಿ ಎಸ್‌ಎಚ್‌ಒ ತಿಲಕಧಾರಿ ಸರೋಜ್ ಅವರನ್ನು ಅಲಹಾಬಾದ್ ಹೈಕೋರ್ಟ್ ಬಳಿಯ ಪ್ರದೇಶದಿಂದ ಬಂಧಿಸಲಾಗಿದೆ. ಜೊತೆಗೆ ಅವರನ್ನು ಜಿಲ್ಲಾ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, 14 ದಿನಗಳ ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ನಿಖಿಲ್ ಪಾಠಕ್ ತಿಳಿಸಿದ್ದಾರೆ. 13 ವರ್ಷದ ಬಾಲಕಿಯ ಮೇಲೆ ಮೂರು ದಿನಗಳ ಕಾಲ ನಾಲ್ವರು ಅತ್ಯಾಚಾರವೆಸಗಿದ್ದಾರೆ ಮತ್ತು ಪೊಲೀಸ್ ಠಾಣೆಯ ಸ್ಟೇಷನ್ ಹೌಸ್ ಆಫೀಸರ್ (ಎಸ್‌ಎಚ್‌ಒ) ಮತ್ತೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಘಟನೆಯ ನಂತರ ಉಪ ಪೊಲೀಸ್ ಮಹಾನಿರೀಕ್ಷಕ (ಡಿಐಜಿ) ಜೋಗೇಂದ್ರ ಕುಮಾರ್ ಅವರು ಪಾಲಿ ಪೊಲೀಸ್ ಠಾಣೆಯ ಸಂಪೂರ್ಣ ಸಿಬ್ಬಂದಿಯನ್ನು ತೆಗೆದುಹಾಕಿದ್ದಾರೆ. ಸದ್ಯ ಪೊಲೀಸ್ ಠಾಣೆಯ ನೂತನ ಎಸ್‌ಎಚ್‌ಒ ಆಗಿ ಧರ್ಮೇಂದ್ರ ಸಿಂಗ್ ಅವರನ್ನು ನೇಮಿಸಲಾಗಿದ್ದು, ಹೊಸ ಸಿಬ್ಬಂದಿಯನ್ನು ಸಹ ಅಲ್ಲಿಗೆ ನಿಯೋಜಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಬಾಲಕಿಯ ಚಿಕ್ಕಮ್ಮ ಮತ್ತು ಸಂತ್ರಸ್ತೆಯನ್ನು ಭೋಪಾಲ್‌ಗೆ ಕರೆದೊಯ್ದು ಅತ್ಯಾಚಾರ ಎಸಗಿದ ನಾಲ್ವರು ಸೇರಿದಂತೆ ಇತರ ಐವರನ್ನು ಬಂಧಿಸಲಾಗಿದೆ. ಅತ್ಯಾಚಾರ ಸಂತ್ರಸ್ತೆಯ ಪೋಷಕರು ಕೂಲಿ ಕಾರ್ಮಿಕರಾಗಿದ್ದಾರೆ ಎಂದು ಅವರು ತಿಳಿಸಿದದ್ದಾರೆ.

ಉತ್ತರ ಪ್ರದೇಶದ ಲಲಿತ್‌ಪುರದಿಂದ ಸುಮಾರು 240 ಕಿಲೋಮೀಟರ್ ದೂರದಲ್ಲಿರುವ ಭೋಪಾಲ್‌ಗೆ ನಾಲ್ವರು ವ್ಯಕ್ತಿಗಳು ಬಾಲಕಿಯನ್ನು ಕರೆದೊಯ್ದು ಮೂರು ದಿನಗಳ ಕಾಲ ಆಕೆಯ ಮೇಲೆ ಅತ್ಯಾಚಾರ ಎಸಗಿ ನಂತರ ಪಾಲಿ ಪೊಲೀಸ್ ಠಾಣೆ ಬಳಿ ಬಿಟ್ಟು ಹೋಗಿದ್ದರು. ಆರಂಭದಲ್ಲಿ ಎಸ್‌ಎಚ್‌ಒ ಸರೋಜ್ ಸಂತ್ರಸ್ತೆಯನ್ನು ಆಕೆಯ ಚಿಕ್ಕಮ್ಮನಿಗೆ ಹಸ್ತಾಂತರಿಸಿದರು. ಆದರೆ ನಂತರ ಆಕೆಯ ಹೇಳಿಕೆಯನ್ನು ದಾಖಲಿಸುವ ನೆಪದಲ್ಲಿ ಆಕೆಯನ್ನು ಪೊಲೀಸ್ ಠಾಣೆಗೆ ಕರೆದು ಅತ್ಯಾಚಾರವೆಸಗಿದ್ದಾರೆ.
ಈ ಘಟನೆಯು ದೇಶಾದ್ಯಂತ ಕಳವಳವನ್ನುಂಟು ಮಾಡಿದ್ದು, ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗವು ಉತ್ತರ ಪ್ರದೇಶದ ಮುಖ್ಯ ಕಾರ್ಯದರ್ಶಿ ಮತ್ತು ಪೊಲೀಸ್ ಮಹಾನಿರ್ದೇಶಕರಿಗೆ ನೋಟಿಸ್ ಜಾರಿ ಮಾಡಿದೆ. ನಾಲ್ಕು ವಾರಗಳಲ್ಲಿ ಈ ಸಂಬಂಧ ವರದಿಯನ್ನು ಸಲ್ಲಿಸುವಂತೆ ಕೇಳಿದೆ.

ಪ್ರತಿಪಕ್ಷ ಸಮಾಜವಾದಿ ಪಕ್ಷ (ಎಸ್‌ಪಿ), ಬಹುಜನ ಸಮಾಜ ಪಕ್ಷ (ಬಿಎಸ್‌ಪಿ) ಮತ್ತು ಕಾಂಗ್ರೆಸ್ ತಮ್ಮ ದೂರು ಸಲ್ಲಿಸಲು ಎಲ್ಲಿಗೆ ಹೋಗಬೇಕು ಮತ್ತು ಯಾರನ್ನು ನಂಬಬೇಕು ಎಂದು ಪ್ರಶ್ನಿಸಿ ರಾಜ್ಯದ ಮಹಿಳೆಯರ ದುರ್ಬಲತೆಯನ್ನು ಎತ್ತಿ ತೋರಿಸಿವೆ. ಪ್ರಕರಣ ರಾಜಕೀಯ ಕೆಸರೆರೆಚಾಟಕ್ಕೆ ಒಳಗಾಗುತ್ತಿದ್ದಂತೆ ಎಸ್‌ಪಿ ಮುಖ್ಯಸ್ಥ ಅಖಿಲೇಶ್ ಯಾದವ್ ಅವರು ಲಲಿತ್‌ಪುರಕ್ಕೆ ಭೇಟಿ ನೀಡಿ ಜಿಲ್ಲಾ ಆಸ್ಪತ್ರೆಯಲ್ಲಿ ಅತ್ಯಾಚಾರ ಸಂತ್ರಸ್ತೆಯನ್ನು ಭೇಟಿ ಮಾಡಿದರು.
ಘಟನೆಯ ಕುರಿತು ಯೋಗಿ ಆದಿತ್ಯನಾಥ್ ನೇತೃತ್ವದ ರಾಜ್ಯ ಸರ್ಕಾರದ ವಿರುದ್ಧ ಬಿಎಸ್‌ಪಿ ಮುಖ್ಯಸ್ಥೆ ಮಾಯಾವತಿ ಮತ್ತು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಟ್ವಿಟರ್‌ನಲ್ಲಿ ವಾಗ್ದಾಳಿ ನಡೆಸಿದರು. ಆದಾಗ್ಯೂ, ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಮತ್ತು ಅವರ ವಿರುದ್ಧ ಕಠಿಣ ರಾಷ್ಟ್ರೀಯ ಭದ್ರತಾ ಕಾಯ್ದೆಯನ್ನು ಹಾಕಲಾಗುವುದು ಎಂದು ಉಪಮುಖ್ಯಮಂತ್ರಿ ಬ್ರಜೇಶ್ ಪಾಠಕ್ ಹೇಳಿದ್ದಾರೆ.

ಸೆಕ್ಷನ್ 363 (ಅಪಹರಣ), 376 (ಅತ್ಯಾಚಾರ), 376 ಬಿ (ತನ್ನ ವಶದಲ್ಲಿರುವ ಮಹಿಳೆಯೊಂದಿಗೆ ಸಾರ್ವಜನಿಕ ಸೇವಕನ ಸಂಭೋಗ), ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯಿದೆ ಮತ್ತು ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡಗಳ ಕಾಯಿದೆ, 120 ಬಿ (ಪಿತೂರಿ) ಸೇರಿದಂತೆ ಭಾರತೀಯ ದಂಡ ಸಂಹಿತೆಯ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ.












Click it and Unblock the Notifications