ಅಮೇಥಿಯಲ್ಲಿ ರಾಹುಲ್ ಗಾಂಧಿಗೆ ಆಘಾತ: ಮೊದಲ ಸೋಲು!

ಅಮೇಥಿ, ಮೇ 23: ಉತ್ತರ ಪ್ರದೇಶದ ಅಮೇಥಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಸ್ಮೃತಿ ಇರಾನಿ ಅವರ ವಿರುದ್ಧ ಕಾಂಗ್ರೆಸ್ ನ ರಾಹುಲ್ ಗಾಂಧಿ ಅಚ್ಚರಿಯ ಸೋಲು ಕಂಡಿದ್ದಾರೆ. ಈ ಮೂಲಕ ಅಚ್ಚರಿಯಲ್ಲಿ ಇದೇ ಮೊದಲ ಬಾರಿಗೆ ಅವರು ಸೋಲನುಭವಿಸಿದ್ದಾರೆ.

ತಮ್ಮ ಸೋಲಿನ ಬಗ್ಗೆ ಪ್ರತಿಕ್ರಿಯೆ ನೀಡಿದ ರಾಹುಲ್ ಗಾಂಧಿ, ಜನರ ತೀರ್ಪವನ್ನು ನಾನು ಗೌರವಿಸುತ್ತೇನೆ. ಸ್ಮೃತಿ ಇರಾನಿ ಅವರಿಗೆ ನನ್ನ ಅಭಿನಂದನೆಗಳು ಎಂದಿದ್ದಾರೆ.

ಅಮೇಥಿ ಕ್ಷೇತ್ರದಲ್ಲಿ ಕಾಂಗ್ರೆಸ್ ಸೋತಿದ್ದು ಎರಡೇ ಬಾರಿ. 1977 ರಲ್ಲಿ ಜನತಾ ಪಕ್ಷದ ಅಲೆ ಎದ್ದಿದ್ದ ಸಮಯದಲ್ಲಿ ಮತ್ತು 1998 ರಲ್ಲಿ ಮಾತ್ರವೇ ಕಾಂಗ್ರೆಸ್ ಈ ಕ್ಷೇತ್ರದಲ್ಲಿ ಸೋತಿತ್ತು. ಸಂಜಯ್ ಗಾಂಧಿ, ರಾಜೀವ್ ಗಾಂಧಿ, ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಅವರು ಈ ಕ್ಷೇತ್ರದಿಂದ ಅನೂಚಾನವಾಗಿ ಗೆಲ್ಲುತ್ತ ಬಂದಿದ್ದಾರೆ.

ಆದರೆ ರಾಹುಲ್ ಗಾಂಧಿ ಅವರು ಈ ಬಾರಿ ಸೋಲನುಭವಿಸುವ ಮೂಲಕ ಆಘಾತ ಅನುಭವಿಸಿದ್ದಾರೆ.

Lok Sabha election results 2019: Smriti Irani defeats Rahul Gandhi

2014 ರ ಲೋಕಸಭಾ ಚುನಾವಣೆಯಲ್ಲಿ ಸ್ಮೃತಿ ಇರಾನಿ ಅವರು ಕೇವಲ ಒಂದು ಲಕ್ಷ ಮತಗಳ ಅಂತರದಿಂದ ರಾಹುಲ್ ಗಾಂಧಿ ಅವರ ವಿರುದ್ಧ ಸೋತಿದ್ದರು. 2009 ರಲ್ಲಿ 3.7 ಲಕ್ಷ ಮತಗಳ ಅಂತರದಿಂದ ರಾಹುಲ್ ಗೆಲುವು ಸಾಧಿಸಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+