ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಎಸ್ ಪಿ ಪಟ್ಟಿ ಪ್ರಕಟ: ಮುಲಾಯಂ ಕ್ಷೇತ್ರದಿಂದ ಅಖಿಲೇಶ್ ಯಾದವ್ ಸ್ಪರ್ಧೆ

|
Google Oneindia Kannada News

ಲಕ್ನೋ, ಮಾರ್ಚ್ 24: ಸಮಾಜವಾದಿ ಪಕ್ಷವು 2019ರ ಲೋಕಸಭೆ ಚುನಾವಣೆಗಾಗಿ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಭಾನುವಾರದಂದು ಪ್ರಕಟಿಸಿದೆ. ಮಾಜಿ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಅವರು ತಮ್ಮ ತಂದೆ ಮುಲಾಯಂ ಸಿಂಗ್ ಯಾದವ್ ಅವರು ಸ್ಪರ್ಧಿಸುತ್ತಿದ್ದ ಆಜಂಗಢ ಕ್ಷೇತ್ರದಿಂದ ಸ್ಪರ್ಧಿಸುತ್ತಿದ್ದಾರೆ.

ಸಮಗ್ರ ಮಾಹಿತಿಯುಳ್ಳ ಲೋಕಸಭೆ ಚುನಾವಣೆಯ ವಿಶೇಷ ಪುಟ

ಪ್ರಮುಖ ನಾಯಕ ಅಜಂ ಖಾನ್ ಅವರು ರಾಮ್ ಪುರ್ ಕ್ಷೇತ್ರದಿಂದ ಕಣಕ್ಕಿಳಿಯುತ್ತಿದ್ದಾರೆ. ಅಭ್ಯರ್ಥಿಗಳ ಪಟ್ಟಿಯ ಜೊತೆಗೆ ಸ್ಟಾರ್ ಪ್ರಚಾರಕರ ಪಟ್ಟಿಯನ್ನು ಎಸ್ ಪಿ ಪ್ರಕಟಿಸಿದೆ. ಆದರೆ, ಸ್ಟಾರ್ ಪ್ರಚಾರಕರ ಪಟ್ಟಿಯಲ್ಲಿ ಪಕ್ಷದ ವರಿಷ್ಠ ಮುಲಾಯಂ ಸಿಂಗ್ ಯಾದವ್ ಅವರ ಹೆಸರಿಲ್ಲ.

Lok Sabha elections 2019: SP releases candidate list; Akhilesh Yadav to contest from Azamgarh

ಅಖಿಲೇಶ್, ಮಾಯಾವತಿ ಲೋಕ ಚುನಾವಣೆಗೆ ಸ್ಪರ್ಧಿಸಲ್ಲ, ಏಕೆ ಗೊತ್ತೆ? ಅಖಿಲೇಶ್, ಮಾಯಾವತಿ ಲೋಕ ಚುನಾವಣೆಗೆ ಸ್ಪರ್ಧಿಸಲ್ಲ, ಏಕೆ ಗೊತ್ತೆ?

2014ರಲ್ಲಿ ಅಜಂಗಢದಲ್ಲಿ ಲೋಕಸಭಾ ಕ್ಷೇತ್ರದಲ್ಲಿ ಮುಲಾಯಂ ಸಿಂಗ್ ಯಾದವ್ ಅವರು ಗೆಲುವು ಸಾಧಿಸಿದ್ದರು. ಈ ಬಾರಿ ಮುಲಾಯಂ ಅವರು ಮೈನ್ ಪುರಿ ಕ್ಷೇತ್ರದಿಂದ ಸ್ಪರ್ಧಿಸುತ್ತಿದ್ದಾರೆ.

ಅಖಿಲೇಶ್‌ ಅವರ ಪತ್ನಿ ಡಿಂಪಲ್‌ ಯಾದವ್‌ ಅವರು ಸಂಸದೆಯಾಗಿರುವ ಕನ್ನಂಜ್‌ನಿಂದ ಸ್ಪರ್ಧಿಸುತ್ತಾರೆ ಎನ್ನುವುದು ಕೂಡ ಹುಸಿಯಾಗಿದೆ. ಈಗಾಗಲೇ ಮಾ. 8 ರಂದು ಘೋಷಿಸಿದ ಅಭ್ಯರ್ಥಿಗಳ ಪಟ್ಟಿಯಲ್ಲಿ ಡಿಂಪಲ್ ಅವರನ್ನು ಅಭ್ಯರ್ಥಿಯನ್ನಾಗಿ ಘೋಷಿಸಲಾಗಿದೆ.

ಉತ್ತರ ಪ್ರದೇಶದಲ್ಲಿ ಎಸ್ಪಿ-ಬಿಎಸ್ಪಿಗೆ ಈಗ ಮತ್ತೊಂದು ಪಕ್ಷದ ಬೆಂಬಲಉತ್ತರ ಪ್ರದೇಶದಲ್ಲಿ ಎಸ್ಪಿ-ಬಿಎಸ್ಪಿಗೆ ಈಗ ಮತ್ತೊಂದು ಪಕ್ಷದ ಬೆಂಬಲ

ಸ್ಟಾರ್‌ ಪ್ರಚಾರಕರ ಪಟ್ಟಿಯನ್ನು ಕೂಡ ಘೋಷಿಸಿದ್ದು, ಎಸ್‌ಪಿ ಮುಖ್ಯಸ್ಥ ಅಖಿಲೇಶ್ ಯಾದವ್‌, ರಾಮ್‌ ಗೋಪಾಲ್‌ ಯಾದವ್‌, ಅಜಂಖಾನ್‌, ಜಯಾ ಬಚ್ಚನ್‌, ಡಿಂಪಲ್‌ ಯಾದವ್‌ ಮತ್ತು ತೇಜ್‌ಪ್ರತಾಪ್‌ ಯಾದವ್‌ ಅವರ ಹೆಸರಿದೆ.

English summary
he Samajwadi Party on Sunday announced that its chief Akhilesh Yadav will contest the upcoming Lok Sabha elections 2019 from Azamgarh, while Azam Khan will contest from Rampur. The party also put out its list of star campaigners, which surprisingly did not feature SP patriarch Mulayam Singh Yadav.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X