ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕಾಂಗ್ರೆಸ್‌ ಪಕ್ಷ ನಮ್ಮನ್ನು ವಂಚಿಸಿದೆ: ಅಖಿಲೇಶ್ ಯಾದವ್ ಆರೋಪ

|
Google Oneindia Kannada News

ಕಾನ್ಪುರ, ಏಪ್ರಿಲ್ 25: ಲೋಕಸಭೆ ಚುನಾವಣೆ ಪ್ರಗತಿಯಲ್ಲಿರುವಂತೆಯೇ ಎನ್‌ಡಿಎ ವಿರೋಧಪಕ್ಷಗಳ ಪಾಳಯದಲ್ಲಿನ ಬಿರುಕು ದೊಡ್ಡದಾಗುತ್ತಿವೆ. ಸಮಾಜವಾದಿ ಪಕ್ಷದ ನಾಯಕ ಅಖಿಲೇಶ್ ಯಾದವ್ ಕಾಂಗ್ರೆಸ್ ವಿರುದ್ಧ ಹರಿಹಾಯ್ದಿದ್ದಾರೆ. ರಾಹುಲ್ ಗಾಂಧಿ ನೇತೃತ್ವದ ಪಕ್ಷವನ್ನು ತಮ್ಮನ್ನು ವಂಚಿಸಿದೆ ಎಂದು ಆರೋಪಿಸಿದ್ದಾರೆ.

ಮತ್ತೆ ವಿವಾದದ ಕಿಡಿಯೆಬ್ಬಿಸಿರುವ 'ಖಾಮೋಶ್' ಶತ್ರುಘ್ನ ಸಿನ್ಹಾಮತ್ತೆ ವಿವಾದದ ಕಿಡಿಯೆಬ್ಬಿಸಿರುವ 'ಖಾಮೋಶ್' ಶತ್ರುಘ್ನ ಸಿನ್ಹಾ

ಕಾನ್ಪುರದಲ್ಲಿ ಚುನಾವಣಾ ಪ್ರಚಾರ ನಡೆಸಿದ ಅಖಿಲೇಶ್ ಯಾದವ್, 'ಯಾರಾದರೂ ಸಮಾಜವಾದಿ ಪಕ್ಷಕ್ಕೆ ಮೋಸ ಮಾಡಿದೆ ಎಂದರೆ ಅದು ಕಾಂಗ್ರೆಸ್ ಪಕ್ಷ' ಎಂದು ಹೇಳಿದ್ದಾರೆ.

ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್ ಆಸ್ತಿ ವಿವರಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್ ಆಸ್ತಿ ವಿವರ

ಉತ್ತರ ಪ್ರದೇಶದಲ್ಲಿ 2017ರಲ್ಲಿ ನಡೆದ ವಿಧಾನಸಭೆ ಚುನಾವಣೆಯಲ್ಲಿ ಎಸ್ಪಿ ಮತ್ತು ಕಾಂಗ್ರೆಸ್‌ ಮೈತ್ರಿ ಮಾಡಿಕೊಂಡಿದ್ದವು. ಆದರೆ, ಚುನಾವಣೆಯಲ್ಲಿ ಎರಡೂ ಪಕ್ಷಗಳು ಹೀನಾಯ ಸೋಲು ಅನುಭವಿಸಿದ ಬಳಿಕ ಅವರ ಮೈತ್ರಿಯಲ್ಲಿ ಒಡಕು ಉಂಟಾಗಿತ್ತು.

Lok Sabha elections 2019 Uttar Pradesh SP Akhilesh Yadav congree betrayed us

'ನಾವು ಈ ಹಿಂದೆ ಮೈತ್ರಿ ಮಾಡಿಕೊಂಡಿದ್ದು ಸತ್ಯ. ಆದರೆ, ಕಾಂಗ್ರೆಸ್ ಪಕ್ಷ ಹೆಚ್ಚು ಅಹಂಕಾರ ಹೊಂದಿದೆ ಎನ್ನುವುದು ಆಗ ಗೊತ್ತಿರಲಿಲ್ಲ. ಅವರಿಗೆ ಅಹಂಕಾರವೇ ಮುಖ್ಯ ಹೊರತು ಮೈತ್ರಿ ಏನೂ ಅಲ್ಲ' ಎಂದು ಅಖಿಲೇಶ್ ಆರೋಪಿಸಿದ್ದಾರೆ.

ಅಖಿಲೇಶ್ ಯಾದವ್ ಅವರು ಮಾಯಾವತಿಯ ಒತ್ತಡಕ್ಕೆ ಬಿದ್ದಿದ್ದಾರೆ!ಅಖಿಲೇಶ್ ಯಾದವ್ ಅವರು ಮಾಯಾವತಿಯ ಒತ್ತಡಕ್ಕೆ ಬಿದ್ದಿದ್ದಾರೆ!

ಕಾಂಗ್ರೆಸ್ ವಿರುದ್ಧ ಮುನಿಸಿಕೊಂಡಿರುವ ಅಖಿಲೇಶ್ ಯಾದವ್, ಈ ಬಾರಿಯ ಚುನಾವಣೆಯಲ್ಲಿ ಕಾಂಗ್ರೆಸ್ ಜೊತೆ ಕೈಜೋಡಿಸಲು ಮನಸು ಮಾಡಿಲ್ಲ. ಬದಲಾಗಿ ರಾಜ್ಯದಲ್ಲಿ ಪ್ರಬಲವಾಗಿರುವ ಮತ್ತೊಂದು ಪಕ್ಷ ಬಿಎಸ್‌ಪಿಯೊಂದಿಗೆ ಮೈತ್ರಿ ಮಾಡಿಕೊಂಡಿದ್ದಾರೆ. ಸೀಟು ಹಂಚಿಕೆ ಒಪ್ಪಂದದಿಂದ ಕಾಂಗ್ರೆಸ್ ಅನ್ನು ಅದು ದೂರ ಇರಿಸಿದೆ. ಇದರಿಂದ ಕಾಂಗ್ರೆಸ್‌ಗೆ ತೀವ್ರ ಇರಿಸುಮುರಿಸು ಉಂಟಾಗಿದೆ.

English summary
Lok Sabha elections 2019: Uttar Pradesh Samajwadi party leader Akhilesh Yadav lashed out against Congress and accused the party betrayed us.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X