ವಾರಣಾಸಿಯಲ್ಲಿ ಮೋದಿ ವಿರುದ್ಧ ಕಾಂಗ್ರೆಸ್ ನಿಂದ ಅಜಯ್ ರೈ ಕಣಕ್ಕೆ

ವಾರಣಾಸಿ, ಏಪ್ರಿಲ್ 25: ಉತ್ತರ ಪ್ರದೇಶದ ವಾರಣಾಸಿಯಲ್ಲಿ ಬಿಜೆಪಿಯ ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಕಾಂಗ್ರೆಸ್ ಅಜಯ್ ರೈ ಅವರನ್ನು ತನ್ನ ಅಭ್ಯರ್ಥಿಯನ್ನಾಗಿ ಘೋಷಿಸಿದೆ.

2014 ರ ಲೋಕಸಭೆ ಚುನಾವಣೆಯಲ್ಲೂ ನರೇಂದ್ರ ಮೋದಿ ಅವರ ವಿರುದ್ಧ 49 ವರ್ಷ ವಯಸ್ಸಿನ ಅಜಯ್ ರೈ ಅವರನ್ನೇ ಕಾಂಗ್ರೆಸ್ ಕಣಕ್ಕಿಳಿಸಿತ್ತು.

ಈ ಚುನಾವಣೆಯಲ್ಲಿ ನರೇಂದ್ರ ಮೋದಿ ಅವರು 5,81,022 ಮತಗಳನ್ನು ಪಡೆದರೆ, ಅರವಿಂದ್ ಕೇಜ್ರಿವಾಲ್ 2,09,238 ಮತಗಳನ್ನು ಪಡೆದಿದ್ದರು. ಅಜಯ್ ರೈ ಕೇವಲ 75,614 ಮತಗಳನ್ನು ಪಡೆದು ಮೂರನೇ ಸ್ಥಾನದಲ್ಲಿದ್ದರು.

LS polls: Ajay Rai to be the Congress candidate from Varanasi

ಐದು ಬಾರಿ ಶಾಸಕರಾಗಿದ್ದ ಅಜಯ್ ರೈ ಮೊದಲಿಗೆ ಬಿಜೆಪಿಯಲ್ಲೇ ಇದ್ದವರು. 2009 ರ ಲೋಕಸಭಾ ಚುನಾವಣೆಯಲ್ಲಿ ತಮಗೆ ಟಿಕೆಟ್ ಸಿಗದ ಕಾರಣ, ಸಮಾಜವಾದಿ ಪಕ್ಷದಿಂದ ವಾರಣಾಸಿಯಿಂದಲೇ ಸ್ಪರ್ಧಿಸಿ ಸೋತಿದ್ದರು.

ನಂತರ 2014 ರ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ನಿಂದ ವಾರಣಾಸಿ ಕ್ಷೇತ್ರದಿಂದ ಸ್ಪರ್ಧಿಸಿದ್ದರು.

1996 ರಿಂದ 2007 ರವರೆಗೆ ಉತ್ತರ ಪ್ರದೇಶದ ಕೊಲಸ್ಲಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿ, ಮೂರು ಬಾರಿಯೂ ಗೆಲುವು ಸಾಧಿಸಿದ್ದರು ಅಜಯ್ ರೈ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+