Breaking: ಹೃದಯಾಘಾತದಿಂದ ಲಕ್ನೋ ಬಿಜೆಪಿ ಶಾಸಕ ಅರವಿಂದ್ ಗಿರಿ ನಿಧನ
ಲಕ್ನೋ ಸೆಪ್ಟೆಂಬರ್ 6: ಉತ್ತರ ಪ್ರದೇಶದಿಂದ ಅತ್ಯಂತ ದುಃಖದ ಸುದ್ದಿಯೊಂದು ಹೊರಬಿದ್ದಿದೆ. ಭಾರತೀಯ ಜನತಾ ಪಕ್ಷದ ನಾಯಕ ಮತ್ತು ಲಖೀಂಪುರ ಖೇರಿಯ ಗೋಕರ್ಣನಾಥ ವಿಧಾನಸಭಾ ಕ್ಷೇತ್ರದ ಶಾಸಕ ಅರವಿಂದ್ ಗಿರಿ ನಿಧನರಾಗಿದ್ದಾರೆ. ಅರವಿಂದ್ ಗಿರಿ ಚಿಕಿತ್ಸೆಗಾಗಿ ಲಕ್ನೋಗೆ ಹೋಗುತ್ತಿದ್ದಾಗ ದಾರಿ ಮಧ್ಯೆ ಕಾರಿನಲ್ಲಿ ಹೃದಯಾಘಾತವಾಗಿದೆ ಎಂದು ಹೇಳಲಾಗುತ್ತಿದೆ. ತಕ್ಷಣ ಅರವಿಂದ್ ಗಿರಿ ಅವರನ್ನು ಹತ್ತಿರದ ಆಸ್ಪತ್ರೆಗೆ ಕರೆದೊಯ್ದರೂ ಅಷ್ಟರಲ್ಲಿ ತಟವಾಗಿತ್ತು. ಆಸ್ಪತ್ರೆಗೆ ಕರೆತಂದಾಗ ಅವರು ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದ್ದಾರೆ. ಅರವಿಂದ್ ಗಿರಿ ನಿಧನಕ್ಕೆ ಯುಪಿ ಸಿಎಂ ಯೋಗಿ ಆದಿತ್ಯನಾಥ್ ಟ್ವೀಟ್ ಮಾಡುವ ಮೂಲಕ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಅರವಿಂದ್ ಗಿರಿ ಅವರ ಸಾವಿನ ಕುರಿತು ಸಿಎಂ ಯೋಗಿ ಆದಿತ್ಯನಾಥ್ ಟ್ವೀಟ್ ಮಾಡಿ, 'ಲಖಿಂಪುರ ಖೇರಿ ಜಿಲ್ಲೆಯ ಗೋಲಾ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಅರವಿಂದ್ ಗಿರಿ ಅವರ ಸಾವು ಅತ್ಯಂತ ದುಃಖಕರವಾಗಿದೆ. ನನ್ನ ಸಂತಾಪವು ದುಃಖಿತ ಕುಟುಂಬಗಳೊಂದಿಗೆ ಇರುತ್ತದೆ. ಭಗವಾನ್ ಶ್ರೀರಾಮನು ಅಗಲಿದ ಆತ್ಮಕ್ಕೆ ಶಾಂತಿ ನೀಡಲಿ ಮತ್ತು ದುಃಖಿತ ಕುಟುಂಬ ಸದಸ್ಯರಿಗೆ ಈ ತುಂಬಲಾರದ ನಷ್ಟವನ್ನು ಭರಿಸುವ ಶಕ್ತಿಯನ್ನು ನೀಡಲಿ. ಶಾಂತಿ!' ಎಂದು ಬರೆದಿದ್ದಾರೆ.

ಅರವಿಂದ ಗಿರಿ ಐದು ಬಾರಿ ಶಾಸಕರಾಗಿ ಆಯ್ಕೆ
ಅರವಿಂದ್ ಗಿರಿ ಅವರು ಲಖಿಂಪುರ ಖೇರಿ ಜಿಲ್ಲೆಯ ಗೋಕರ್ಣ ನಾಥ್ ವಿಧಾನಸಭಾ ಕ್ಷೇತ್ರದಿಂದ ಐದು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದಾರೆ. ಈ ಮೊದಲು ಅರವಿಂದ ಗಿರಿ ಹಲವು ಬಾರಿ ಪುರಸಭೆ ಅಧ್ಯಕ್ಷರಾಗಿದ್ದರು. 2014ರಲ್ಲಿ ಲೋಕಸಭೆ ಚುನಾವಣೆಗೂ ಸ್ಪರ್ಧಿಸಿದ್ದು, ಅದರಲ್ಲಿ ಅರವಿಂದ ಗಿರಿ ಎರಡನೇ ಸ್ಥಾನ ಪಡೆದಿದ್ದರು.












Click it and Unblock the Notifications