ಮಧ್ಯಪ್ರದೇಶ ರಾಜ್ಯಪಾಲ ಲಾಲ್‌ ಜಿ ಟಂಡನ್ ಸ್ಥಿತಿ ಚಿಂತಾಜನಕ

ಲಕ್ನೋ, ಜೂನ್ 16: ಮಧ್ಯಪ್ರದೇಶ ರಾಜ್ಯಪಾಲ ಲಾಲ್‌ಜಿ ಟಂಡನ್ ಅವರ ಸ್ಥಿತಿ ಗಂಭೀರವಾಗಿದೆ ಎಂದು ಮೂಲಗಳು ತಿಳಿಸಿವೆ.

ಅನಾರೋಗ್ಯದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ವೆಂಟಿಲೇಟರ್ ಅಳವಡಿಸಲಾಗಿದೆ.ಜ್ವರ ಮತ್ತು ಮೂತ್ರದ ಸಮಸ್ಯೆಯಿಂದ ಬಳಲುತ್ತಿದ್ದ ಲಾಲ್ ಜಿ ಟಂಡನ್ ಅವರನ್ನು ಶನಿವಾರ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಲಾಲ್ ಜಿ ಟಂಡನ್ ಅವರು ಯಕೃತ್ತಿನ ಸಣ್ಣ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು, ನಂತರ ಅವರ ಆರೋಗ್ಯ ಸ್ಥಿತಿ ಹದಗೆಟ್ಟಿತು. ಈಗ ಅವರನ್ನು ವೆಂಟಿಲೇಟರ್ ನಲ್ಲಿಡಲಾಗಿದೆ ಎಂದು ಮೆದಾಂತ್ ಆಸ್ಪತ್ರೆಯ ನಿರ್ದೇಶಕ ಪ್ರೊ. ರಾಕೇಶ್ ಕಪೂರ್ ಅವರು ಹೇಳಿದ್ದಾರೆ.

Lal ji tondon

ಭಾನುವಾರ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಆಸ್ಪತ್ರೆಗೆ ಭೇಟಿ ನೀಡಿ ಅವರ ಆರೋಗ್ಯ ವಿಚಾರಿಸಿದ್ದರು. ಕೊವಿಡ್ 19 ಪರೀಕ್ಷೆಯಲ್ಲಿ ನೆಗೆಟಿವ್ ಬಂದಿದೆ ಎಂದು ಆಸ್ಪತ್ರೆ ಆಡಳಿತ ಮಂಡಳಿ ತಿಳಿಸಿದೆ.

ಟಂಡನ್ ಅವರಿಗೆ ಶ್ವಾಸಕೋಶ, ಮೂತ್ರಪಿಂಡ, ಕರುಳಿಗೆ ಸಂಬಂಧಿಸಿದ ತೊಂದರೆಯೂ ಇತ್ತು. ಹೀಗಾಗಿ ಅವರಿಗೆ ಶಸ್ತ್ರಚಿಕಿತ್ಸೆ ನಡೆಸಲಾಗಿದ್ದು, ಯಶಸ್ವಿಯಾಗಿದೆ. ಅವರನ್ನು ತೀವ್ರ ನಿಗಾ ಘಟಕದಲ್ಲಿ ಇರಿಸಲಾಗಿದೆ. ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದರೂ ಪರಿಸ್ಥಿತಿ ಹಿಡಿತದಲ್ಲಿದೆ ಎಂದು ವೈದ್ಯರು ತಿಳಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+