ಉತ್ತರಪ್ರದೇಶದಲ್ಲಿ ಭೀಕರ ಅಪಘಾತ; 16 ಸಾವು
ಲಕ್ನೋ, ಫೆಬ್ರವರಿ 13; ಉತ್ತರ ಪ್ರದೇಶದಲ್ಲಿ ಭೀಕರ ಅಪಘಾತ ಸಂಭವಿಸಿದೆ. ಪ್ರಯಾಣಿಕರಿಂದ ತುಂಬಿದ್ದ ಬಸ್ ಒಂದಕ್ಕೆ ಲಾರಿಯೊಂದು ಅಪ್ಪಳಿಸಿದ್ದರಿಂದ 16 ಜನ ಮೃತಪಟ್ಟಿದ್ದಾರೆ. ಬುಧವಾರ ರಾತ್ರಿ ಈ ಘಟನೆ ನಡೆದಿದೆ.
ಆಗ್ರಾ-ಲಕ್ನೋ ಎಕ್ಸಪ್ರೆಸ್ ಹೈವೆಯ ಫಿರೂಜಾಬಾದ್ ಬಳಿ ಈ ಘಟನೆ ನಡೆದಿದ್ದು, ಘಟನೆಯಲ್ಲಿ 28 ಜನ ಗಾಯಗೊಂಡಿದ್ದಾರೆ. ಇದರಲ್ಲಿ 5 ಜನರ ಸ್ಥಿತಿ ಗಂಭೀರವಾಗಿದೆ ಎಂದು ವರದಿಯಾಗಿದೆ.
ದೆಹಲಿಯಿಂದ ಬಿಹಾರದ ಮೊತಿಹರಿಗೆ ಹೋಗುತ್ತಿದ್ದ ಸ್ಲೀಪರ್ ಬಸ್‌ಗೆ ನಸುಕಿನ ಜಾವ ಹಿಂದಿನಿಂದ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ 13 ಜನ ಮೃತಪಟ್ಟು ಆಸ್ಪತ್ರೆಯಲ್ಲಿ ಇನ್ನಿಬ್ಬರು ಮೃತಪಟ್ಟಿದ್ದಾರೆ.

ಗಾಯಗೊಂಡಿರುವ ವ್ಯಕ್ತಿಗಳನ್ನು ಇತವಾಹನ್‌ನ ಸೈಪೈ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಮೃತರ ಸಂಖ್ಯೆ ಹೆಚ್ಚಾಗುವ ಸಂಭವವಿದೆ ಎಂದು ತಿಳಿದು ಬಂದಿದೆ. ನಗ್ಲಾ ಖಂಗಾರ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.












Click it and Unblock the Notifications