ಮಾಡದ ತಪ್ಪಿಗೆ 20 ವರ್ಷ ಸೆರೆವಾಸ; ಸುಳ್ಳು ಆರೋಪದಿಂದ ಕೊನೆಗೂ ಮುಕ್ತಿ
ಆಗ್ರಾ, ಮಾರ್ಚ್ 02: ಮಾಡದ ತಪ್ಪಿಗೆ ಜೈಲು ಸೇರಿ ಇಪ್ಪತ್ತು ವರ್ಷ ಸೆರೆವಾಸ ಅನುಭವಿಸಿದ ನಂತರ ಆ ವ್ಯಕ್ತಿಯು ನಿರಪರಾಧಿ ಎಂದು ಅಲಹಾಬಾದ್ ಹೈಕೋರ್ಟ್ ಘೋಷಣೆ ಮಾಡಿದೆ.
2000ನೇ ಇಸವಿಯಲ್ಲಿ ವಿಷ್ಣು ತಿವಾರಿ ಎಂಬಾತನ ಮೇಲೆ ಅತ್ಯಾಚಾರ ಆರೋಪ ಕೇಳಿಬಂದಿತ್ತು. ಲಲಿತಪುರ ಗ್ರಾಮದ ತಿವಾರಿ, ಮಹಿಳೆಯೊಬ್ಬರ ಮೇಲೆ ಅತ್ಯಾಚಾರ ಎಸಗಿದ ಆರೋಪದಲ್ಲಿ ಜೈಲು ಸೇರಬೇಕಾಯಿತು. ಅತ್ಯಾಚಾರ, ಲೈಂಗಿಕ ದೌರ್ಜನ್ಯ ಆರೋಪದಲ್ಲಿ ನ್ಯಾಯಾಲಯ ಈತನಿಗೆ ಜೀವಾವಧಿ ಶಿಕ್ಷೆ ವಿಧಿಸಿತ್ತು. ಆಗ ತಿವಾರಿಗಿನ್ನೂ 23 ವಯಸ್ಸು.
ತನಗೆ ಉತ್ತಮ ವಕೀಲರ ಸಹಾಯ ದೊರಕದೇ ಇದ್ದ ಕಾರಣ ತಾನು ನಿರಪರಾಧಿ ಎಂದು ಸಾಬೀತುಪಡಿಸುವಲ್ಲಿ ತಿವಾರಿಗೆ ಪದೇ ಪದೇ ಸೋಲುಂಟಾಯಿತು.
2003ರಲ್ಲಿ ತಿವಾರಿಯನ್ನು ಆಗ್ರಾ ಜೈಲಿಗೆ ಸ್ಥಳಾಂತರಗೊಳಿಸಲಾಯಿತು. ಆಗಿನಿಂದಲೂ ತಿವಾರಿ ಜೈಲಿನಲ್ಲಿ ಅಡುಗೆ ಮಾಡುವ, ಜೈಲು ಶುದ್ಧಗೊಳಿಸುವ ಕಾರ್ಯ ಮಾಡುತ್ತಿದ್ದ.

ಕೊನೆ ಪ್ರಯತ್ನ ಎಂಬಂತೆ 2005ರಲ್ಲಿ ಅಲಹಾಬಾದ್ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಸಲು ನಿರ್ಧರಿಸಿದ್ದ. ಆದರೆ ಆ ಸಮಯಕ್ಕೆ ತನ್ನ ತಂದೆ ತೀರಿಹೋಗಿದ್ದು, ತಿವಾರಿಗೆ ದೊಡ್ಡ ಹೊಡೆತವನ್ನೇ ಕೊಟ್ಟಿತ್ತು. ಆನಂತರ ತಾನು ನಿರಪರಾಧಿ ಎಂದು ಸಾಬೀತುಪಡಿಸುವ ಪ್ರಯತ್ನವನ್ನೂ ನಿಲ್ಲಿಸಿದ್ದ.
ಆದರೆ ತಿವಾರಿ ಉತ್ತಮ ನಡತೆ ಕಂಡು 2020ರಲ್ಲಿ ಜೈಲು ಅಧಿಕಾರಿಗಳೇ ಈತನಿಗೆ ನ್ಯಾಯ ಒದಗಿಸಿಕೊಡುವಂತೆ ರಾಜ್ಯ ನ್ಯಾಯಾಂಗಕ್ಕೆ ಮೊರೆ ಹೋದರು. ಹೈಕೋರ್ಟ್‌ನಲ್ಲಿ ಈತನ ಪರ ಮೇಲ್ಮನವಿ ಸಲ್ಲಿಸಲಾಯಿತು. ಜನವರಿಯಲ್ಲಿ ನ್ಯಾಯಾಧೀಶ ಜಯೇಂದ್ರ ಠಾಕರ್ ಹಾಗೂ ಗೌತಮ್ ಚೌಧರಿ ಅವರನ್ನೊಳಗೊಂಡ ಪೀಠ ಅರ್ಜಿ ವಿಚಾರಣೆ ನಡೆಸಿದ್ದು, ವಿಷ್ಣು ತಿವಾರಿ ನಿರಪರಾಧಿ ಎಂದು ತೀರ್ಪು ನೀಡಿದೆ.
ತಡವಾಗಿ ಎಫ್‌ಐಆರ್ ದಾಖಲಿಸಲಾಗಿದೆ ಹಾಗೂ ಮಹಿಳೆ ಮೇಲೆ ಹಲ್ಲೆ ಅಥವಾ ಅತ್ಯಾಚಾರ ನಡೆದಿರುವುದನ್ನು ಸಾಬೀತುಪಡಿಸುವ ಯಾವುದೇ ಸಾಕ್ಷ್ಯ ದೊರೆತಿಲ್ಲ. ಜಮೀನು ವಿಷಯಕ್ಕೆ ಸಂಬಂಧಿಸಿದಂತೆ ಮಹಿಳೆ ಪತಿ ಹಾಗೂ ಮಾವನೇ ಸೇರಿಕೊಂಡು ಈ ಸುಳ್ಳು ಘಟನೆ ಸೃಷ್ಟಿಸಿದ್ದಾರೆ. ಈ ಆರೋಪ ಸುಳ್ಳು ಎಂದು ತೀರ್ಪು ನೀಡಲಾಗಿದೆ.
ಕೊನೆಗೂ ವಿಷ್ಣು ತಿವಾರಿ ಬಿಡುಗಡೆಯಾಗಿದ್ದು, "ತಿವಾರಿಯನ್ನು ಶೀಘ್ರವೇ ಬಿಡುಗಡೆ ಮಾಡಲಾಗುತ್ತದೆ. ತಾನು ಮಾಡದ ಅಪರಾಧಕ್ಕೆ ಇಪ್ಪತ್ತು ವರ್ಷ ಶಿಕ್ಷೆ ಅನುಭವಿಸಿದ್ದಾನೆ. ಆತನ ಬಿಡುಗಡೆಯ ಅಧೀಕೃತ ಆದೇಶಕ್ಕೆ ಕಾಯುತ್ತಿದ್ದೇವೆ" ಎಂದು ಆಗ್ರಾ ಕೇಂದ್ರ ಕಾರಾಗ್ರಹದ ಹಿರಿಯ ಸೂಪರಿಂಟೆಂಡೆಂಟ್ ವಿ.ಕೆ. ಸಿಂಗ್ ಸಂತಸ ವ್ಯಕ್ತಪಡಿಸಿದ್ದಾರೆ.
ಆದರೆ ಈ ಇಪ್ಪತ್ತು ವರ್ಷಗಳಲ್ಲಿ ವಿಷ್ಣು ತಿವಾರಿ ತನ್ನ ಕುಟುಂಬದ ಸದಸ್ಯರನ್ನೆಲ್ಲಾ ಕಳೆದುಕೊಂಡಿದ್ದಾನೆಂದು ತಿಳಿದುಬಂದಿದೆ.
-
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು












Click it and Unblock the Notifications