ಮಗುವಿನ ಲಿಂಗ ತಿಳಿಯಲು, ಹೆಂಡತಿಯ ಹೊಟ್ಟೆಯನ್ನೇ ಕೊಯ್ದ ಪತಿ

ಲಕ್ನೋ, ಸೆಪ್ಟೆಂಬರ್ 22: ಹುಟ್ಟಲಿರುವ ಮಗು ಗಂಡು ಅಥವಾ ಹೆಣ್ಣು ಎಂದು ತಿಳಿಯಲು ವ್ಯಕ್ತಿಯೊಬ್ಬ ಹೆಂಡತಿಯ ಹೊಟ್ಟೆಯನ್ನೇ ಚಾಕುವಿನಿಂದ ಕೊಯ್ದಿರುವ ಘಟನೆ ಲಕ್ನೋದಲ್ಲಿ ನಡೆದಿದೆ.

ಮಹಿಳೆಯ ಗರ್ಭದಲ್ಲಿದ್ದ ಶಿಶು ಸಾವನ್ನಪ್ಪಿದ್ದು, ಹೊಟ್ಟೆಯಲ್ಲಿ ಗಂಡು ಮಗುವಿತ್ತು ಎಂಬುದು ಗೊತ್ತಾಗಿದೆ. ಅಲ್ಲದೇ ಆಕೆಯ ಗರ್ಭಕೋಶಕ್ಕೆ ತೀವ್ರವಾಗಿ ಗಾಯಗಳಾಗಿರುವ ಪರಿಣಾಮ ಇನ್ನೂ ಮುಂದೆ ಮಹಿಳೆ ಗರ್ಭಧರಿಸಲು ಸಾಧ್ಯವಿಲ್ಲ ಎಂದು ವೈದ್ಯರು ತಿಳಿಸಿದ್ದಾರೆ.

ಸದ್ಯಕ್ಕೆ ದೇವಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇತ್ತ ಪತಿ ಪನ್ನಾಲಾಲ್‍ನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ ನಂತರ ಜೈಲಿಗೆ ಕಳುಹಿಸಲಾಗಿದೆ. ಆರೋಪಿ ವಿರುದ್ಧ ಕೊಲೆ ಯತ್ನ ಪ್ರಕರಣ ದಾಖಲಾಗಿತ್ತು. ಆದರೆ ಶಿಶುವಿನ ಮರಣದ ನಂತರ ಪೊಲೀಸರು ಹೆಚ್ಚಿನ ಪ್ರಕರಣಗಳನ್ನು ಆತನ ವಿರುದ್ಧ ದಾಖಲಿಸುವ ಪ್ರಕ್ರಿಯೆಯಲ್ಲಿದ್ದಾರೆ.

Man Slits Open Pregnant Wife’s Belly To Check Baby’s Gender

ಇನ್ನೂ ಐದು ಮಕ್ಕಳು ಅನಿತಾಳ ಸಂಬಂಧಿಕರ ಮನೆಯಲ್ಲಿದ್ದಾರೆ.ಆರೋಪಿ ಪನ್ನಾಲಾಲ್ ದಂಪತಿಗೆ ಐವರು ಹೆಣ್ಣು ಮಕ್ಕಳಿದ್ದು, ಆರನೇ ಮಗುವಿನ ನಿರೀಕ್ಷೆಯಲ್ಲಿದ್ದರು. ಆದರೆ ಪನ್ನಾಲಾಲ್‍ಗೆ ಗಂಡು ಮಗುವಿನ ಅತಿಯಾದ ವ್ಯಾಮೋಹವಿತ್ತು. ಈ ಸಂಬಂಧ ದಂಪತಿ ನಡುವೆ ಆಗಾಗ ಜಗಳ ಸಹ ನಡೆಯುತ್ತಿತ್ತು.

ಭಾನುವಾರ ದಂಪತಿ ನಡುವೆ ಹುಟ್ಟುವ ಮಗುವಿನ ಬಗ್ಗೆ ಜಗಳ ನಡೆದಿದೆ. ಈ ವೇಳೆ ಪನ್ನಾಲಾಲ್ ಮಗು ಯಾವುದು ಎಂದು ನೋಡಲು ಏಳು ತಿಂಗಳ ಗರ್ಭಿಣೆ ಹೊಟ್ಟೆಗೆ ಇರಿದಿದ್ದನು.

ದೆಹಲಿಯ ಸಫ್ದರ್ಜಂಗ್ ಆಸ್ಪತ್ರೆಯ ವೈದ್ಯರು ಚಿಕಿತ್ಸೆ ಮೂಲಕ ಮಹಿಳೆಯ ಜೀವವನ್ನು ಉಳಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆದರೆ ಗರ್ಭದಲ್ಲಿದ್ದ ಗಂಡು ಶಿಶು ಸಾವನ್ನಪ್ಪಿದೆ. ಆರೋಪಿಯನ್ನು ಜೈಲಿಗಟ್ಟಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+