ಬಿಎಸ್‌ಪಿ ಅಧಿಕಾರಕ್ಕೆ ಬಂದರೆ ಈ 3 ಸಮುದಾಯದ ಅಭಿವೃದ್ಧಿಗಾಗಿ ಕೆಲಸ ಮಾಡಲಿದೆ: ಮಾಯಾವತಿ
ಲಕ್ನೋ, ಡಿಸೆಂಬರ್ 1: ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದರೆ ಮೂರು ಸಮುದಾಯದ ಹಕ್ಕುಗಳನ್ನು ಗಮನದಲ್ಲಿಟ್ಟುಕೊಂಡು ಕೆಲಸ ಮಾಡಲಿದೆ ಎಂದು ಬಿಎಸ್‌ಪಿ ಮುಖ್ಯಸ್ಥೆ ಮಾಯಾವತಿ ಹೇಳಿದ್ದಾರೆ.
ಬಿಜೆಪಿ ಸರ್ಕಾರ ವಿವಿಧ ರೀತಿಯಲ್ಲಿ ಮೀಸಲಾತಿಯನ್ನು ನಿಷ್ಪರಿಣಾಮಕಾರಿಯಾಗಿ ಮಾಡಲು ಪ್ರಯತ್ನಿಸುತ್ತಿದೆ ಎಂದು ಬಹುಜನ ಸಮಾಜ ಪಕ್ಷದ(ಬಿಎಸ್ಪಿ) ಮುಖ್ಯಸ್ಥೆ ಮತ್ತು ಮಾಜಿ ಮುಖ್ಯಮಂತ್ರಿ ಮಾಯಾವತಿ ಅವರು ಮಂಗಳವಾರ ಆರೋಪಿಸಿದ್ದಾರೆ.
ತನ್ನ ಜಾತಿವಾದಿ ಮನಸ್ಥಿತಿಯಿಂದಾಗಿ, ಮೋದಿ ಸರ್ಕಾರವು ಜಾತಿ ಆಧಾರಿತ ಒಬಿಸಿ ಜನಗಣತಿಯ ಬೇಡಿಕೆ ಬಗ್ಗೆ ಜಾಣ ಕಿವುಡುತನ ಪ್ರದರ್ಶಿಸುತ್ತಿದೆ ಎಂದು ಮಾಯಾವತಿ ವಾಗ್ದಾಳಿ ನಡೆಸಿದ್ದಾರೆ.

"ರಾಜ್ಯದಲ್ಲಿ ಬಿಎಸ್‌ಪಿ ಅಧಿಕಾರಕ್ಕೆ ಬಂದರೆ ನಮ್ಮ ಸರ್ಕಾರವು ಮೊದಲಿನಂತೆಯೇ ಒಬಿಸಿಗಳು, ಮುಸ್ಲಿಮರು ಮತ್ತು ಜಾಟ್‌ಗಳ ಹಕ್ಕುಗಳು ಮತ್ತು ಅಭಿವೃದ್ಧಿಯನ್ನು ಗಮನದಲ್ಲಿಟ್ಟುಕೊಂಡು ಕೆಲಸ ಮಾಡಲಿದೆ" ಎಂದು ಮಾಯಾವತಿ ಹೇಳಿದರು.
ಬಿಎಸ್‌ಪಿ 2022ರ ಉತ್ತರ ಪ್ರದೇಶ ಚುನಾವಣೆಯಲ್ಲಿ ಸ್ವತಂತ್ರವಾಗಿ ಸ್ಪರ್ಧಿಸುತ್ತದೆ ಎಂದು ಮತ್ತೊಮ್ಮೆ ಹೇಳಿದ ಮಾಯಾವತಿ, ಯಾವುದೇ ಪಕ್ಷದೊಂದಿಗೆ ಚುನಾವಣಾ ಪೂರ್ವ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಮಾಧ್ಯಮ ಪ್ರತಿನಿಧಿಗಳೊಂದಿಗೆ ಸಂವಾದ ನಡೆಸಿದ ಬಿಎಸ್ ಪಿ ಮುಖ್ಯಸ್ಥೆ, ತಮ್ಮ ಪಕ್ಷದ ಒಬಿಸಿ ಸಮುದಾಯ, ಅಲ್ಪಸಂಖ್ಯಾತ ಸಮುದಾಯ ವಿಶೇಷವಾಗಿ ಮುಸ್ಲಿಂ ಮತ್ತು ಜಾಟ್ ಸಮುದಾಯದ ನಾಯಕರಿಗೆ ತಮ್ಮ ಸಮುದಾಯದ ಜನರನ್ನು ಮೀಸಲು ಸ್ಥಾನಗಳಿಗೆ ಕರೆತರುವ ಜವಾಬ್ದಾರಿಯನ್ನು ವಹಿಸಲಾಗಿದೆ ಎಂದು ಹೇಳಿದರು.
ಚುನಾವಣೆಗೆ 6 ತಿಂಗಳು ಮೊದಲೇ ಮಾಧ್ಯಮಗಳಲ್ಲಿ ಚುನಾವಣಾ ಪೂರ್ವ ಸಮೀಕ್ಷೆಗಳನ್ನು ಚುನಾವಣಾ ಆಯೋಗ ನಿಷೇಧಿಸಬೇಕು ಎಂದು ಬಹುಜನ ಸಮಾಜವಾದಿ ಪಕ್ಷದ ಮುಖ್ಯಸ್ಥೆ ಮಾಯಾವತಿ ಆಗ್ರಹಿಸಿದ್ದಾರೆ.
ಉತ್ತರಪ್ರದೇಶ ವಿಧಾನಸಭೆಗೆ ಮುಂದಿನ ವರ್ಷ ಚುನಾವಣೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ನ್ಯೂಸ್ ಚಾನಲ್‌ವೊಂದು ಚುನಾವಣಾ ಪೂರ್ವ ಸಮೀಕ್ಷೆಯನ್ನು ಬಿಡುಗಡೆ ಮಾಡಿದ್ದು, ಇದರಲ್ಲಿ ಮುಂದಿನ 2022ರ ಚುನಾವಣೆಯಲ್ಲಿ ರಾಜ್ಯದಲ್ಲಿ ಬಿಜೆಪಿ ಅತೀ ಹೆಚ್ಚು ಸೀಟುಗಳನ್ನು ಗಳಿಸಿ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ತಿಳಿಸಿದೆ. ಈ ಸಮೀಕ್ಷೆ ಬಿಡುಗಡೆಯ ಬಳಿಕ ಮಾಯಾವತಿ ಸಮೀಕ್ಷೆಯನ್ನೇ ನಿಷೇಧಿಸಬೇಕು ಎಂಬ ಹೇಳಿಕೆ ನೀಡಿದ್ದಾರೆ.
ಕೇಂದ್ರದಲ್ಲಿಯೂ ಬಿಜೆಪಿ ನೇತೃತ್ವದ ಮೈತ್ರಿಕೂಟವಿದ್ದು, ಇವರು ಚುನಾವಣೆ ವೇಳೆ ತಮಗೆ ಪೂರಕವಾಗುವಂತೆ ಉತ್ತರ ಪ್ರದೇಶ ಸರ್ಕಾರದ ಆಡಳಿತವನ್ನು ದುರುಪಯೋಗಪಡಿಸಿಕೊಳ್ಳುವ ಸಾಧ್ಯತೆ ಇದೆ ಎಂದು ಮಾಯಾವತಿ ಆರೋಪಿಸಿದ್ದಾರೆ. ಈ ಸಂಬಂಧ ಚುನಾವಣಾ ಆಯೋಗಕ್ಕೆ ಪತ್ರ ಬರೆಯುವುದಾಗಿ ತಿಳಿಸಿದ ಅವರು, ಮಾಧ್ಯಮಗಳು ಹಾಗೂ ಇತರ ಸಂಸ್ಥೆಗಳು ನಡೆಸುವ ಚುನಾವಣಾ ಪೂರ್ವ ಸಮೀಕ್ಷೆಯನ್ನು ಚುನಾವಣೆ ನಡೆಯುವ 6 ತಿಂಗಳು ಮೊದಲೇ ನಿಷೇಧಿಸುವಂತೆ ಮನವಿ ಮಾಡಲಾಗುವುದು ಇದರಿಂದ ಚುನಾವಣೆಯ ಮೇಲೆ ಯಾವುದೇ ಪ್ರಭಾವ ಬೀರುವುದಿಲ್ಲ ಎಂದು ಹೇಳಿದರು.
ಉ.ಪ್ರ.ದಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ? ಸಮೀಕ್ಷೆ ಭವಿಷ್ಯ: ಕಾಂಶಿರಾಮ್ ಸ್ಮಾರಕ ಸ್ಥಳದಲ್ಲಿ ನಡೆದ ಬಹುಜನ ಸಮಾಜವಾದಿ ಪಕ್ಷದ ಸಂಸ್ಥಾಪಕ ಕಾಂಶಿ ರಾಮ್ ಅವರ 15ನೇ ವರ್ಷದ ಸಂಸ್ಮರಣೆ ಕಾರ್ಯಕ್ರಮದಲ್ಲಿ ಮಾಯಾವತಿ ಮಾತನಾಡುತ್ತಿದ್ದರು. ದಲಿತ ನಾಯಕ ಕಾಂಶಿರಾಮ್ ಅವರಿಗೆ ಭಾರತರತ್ನ ನೀಡಬೇಕು ಎಂದು ಮಾಯಾವತಿ ಇದೇ ವೇಳೆ ತಿಳಿಸಿದರು.
ಉತ್ತರಪ್ರದೇಶದ ಜನ ರಾಜ್ಯದಲ್ಲಿ ಅಧಿಕಾರವನ್ನು ಬದಲಾಯಿಸಬೇಕೆನ್ನುವ ಯೋಚನೆಯಲ್ಲಿದ್ದಾರೆ. ಚುನಾವಣಾ ಪೂರ್ವ ಸಮೀಕ್ಷೆ ನಡೆಸುವುದನ್ನು ನಿಷೇಧಿಸುವಂತೆ ಶೀಘ್ರದಲ್ಲಿಯೇ ಚುನಾವಣಾ ಆಯೋಗಕ್ಕೆ ನಾನು ಪತ್ರ ಬರೆಯುತ್ತೇನೆ. ನಿಮಗೂ ತಿಳಿದಿರಬಹುದು. ಪಶ್ಚಿಮ ಬಂಗಾಳದಲ್ಲಿ ವಿಧಾನಸಭೆ ಚುನಾವಣೆ ನಡೆಯುತ್ತಿದ್ದ ವೇಳೆ ಸಮೀಕ್ಷೆಗಳು ಮಮತಾ ಬ್ಯಾನರ್ಜಿ ಸೋಲುತ್ತಿದ್ದಾರೆ ಎಂದು ತಿಳಿಸಿದ್ದವು.
ಆದರೆ ಫಲಿತಾಂಶದ ವೇಳೆ ಅದು ಸಂಪೂರ್ಣ ವಿರುದ್ಧವಾಗಿತ್ತು. ಮಮತಾ ಭಾರಿ ಬಹುಮತದೊಂದಿಗೆ ಚುನಾವಣೆಯಲ್ಲಿ ಗೆದ್ದು ಬೀಗಿದರು. ಅಲ್ಲಿ ಅಧಿಕಾರ ಹಿಡಿಯಬೇಕೆಂದು ಬಯಸಿದ್ದ ಕೆಲವರ ಕನಸುಗಳು ಭಗ್ನಗೊಂಡವು. ಹೀಗಾಗಿ ಸಮೀಕ್ಷೆಯ ಮೂಲಕ ಜನರ ದಾರಿ ತಪ್ಪಿಸಬಾರದು ಎಂದು ಮಾಯಾವತಿ ಹೇಳಿದರು.
-
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Banana Price: ತಮಿಳುನಾಡು ಬಿಸಿಗಾಳಿ ಎಫೆಕ್ಟ್ಗೆ ಕುಸಿದ ಬಾಳೆಹಣ್ಣು ಧಾರಣೆ: ಬೆಂಗಳೂರಿನಲ್ಲಿ ಕೆ.ಜಿಗೆ 7 ರೂಪಾಯಿ -
Summer Specail Train: ಮೈಸೂರಿನಿಂದ ಇಲ್ಲಿಗೆ ವಿಶೇಷ ಎಕ್ಸ್ಪ್ರೆಸ್ ರೈಲು, 3 ರಾಜ್ಯಗಳಿಗೆ ಅನುಕೂಲ -
April 12 Horoscope: 12 ರಾಶಿಗಳಿಗೆ ಇಂದು ಹಣ-ಪ್ರೇಮದಲ್ಲಿ ಅದೃಷ್ಟ ಯಾರಿಗೆ? ಸಂಪೂರ್ಣ ವಿವರ -
IPL 2026: ಗಿಲ್ ಮತ್ತು ಬಟ್ಲರ್ ಸ್ಫೋಟಕ ಬ್ಯಾಟಿಂಗ್, ಎಲ್ಎಸ್ಜಿ ಮಣಿಸಿದ ಗುಜರಾತ್ ಟೈಟಾನ್ಸ್ -
Asha Bhosle: ಭಾರತೀಯ ಸಿನಿಮಾ ರಂಗದ ಖ್ಯಾತ ಗಾಯಕಿ ಆಶಾ ಭೋಸ್ಲೆ ಇನ್ನಿಲ್ಲ, ಸಂಗೀತ ರಾಣಿ ಎಂದೇ ಖ್ಯಾತಿ -
Karnataka Train: ಕಲಬುರಗಿ - ಕಲ್ಯಾಣ ಕರ್ನಾಟಕದಲ್ಲಿ ರೈಲು ಪ್ರಯಾಣಿಕರ ನಿತ್ಯ ಪರದಾಟ: ಸಿದ್ದು ಮಠಪತಿ ಬರಹ -
Vijay: ನಟ, ರಾಜಕಾರಣಿ ವಿಜಯ್ ಮಹತ್ವದ ಟ್ವೀಟ್ - ಅಪ್ರಬುದ್ಧ ರಾಜಕಾರಣಿ ಎಂದ ಡಿ.ಕೆ ಶಿವಕುಮಾರ್ Tamil Nadu Assembly Election -
Bhagyalakshmi Serial: ಕೊನೆಗೂ ಭಾಗ್ಯಲಕ್ಷ್ಮೀ - ಆದಿ ಮದುವೆ, ಮೂರು ಕುಟುಂಬಗಳನ್ನು ಒಂದು ಮಾಡುವ ಟಾಸ್ಕ್ -
Transfer: ಕರ್ನಾಟಕ ಶಿಕ್ಷಕರಿಗೆ ಸಿಹಿ ಸುದ್ದಿ: ವರ್ಗಾವಣೆ ನಿಯಮಗಳಲ್ಲಿ ಮಹತ್ವ ಬದಲಾವಣೆ, ಯಾರು ಅರ್ಹರು?












Click it and Unblock the Notifications