ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಬಿಎಸ್‌ಪಿ ಅಧಿಕಾರಕ್ಕೆ ಬಂದರೆ ಈ 3 ಸಮುದಾಯದ ಅಭಿವೃದ್ಧಿಗಾಗಿ ಕೆಲಸ ಮಾಡಲಿದೆ: ಮಾಯಾವತಿ

|
Google Oneindia Kannada News

ಲಕ್ನೋ, ಡಿಸೆಂಬರ್ 1: ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದರೆ ಮೂರು ಸಮುದಾಯದ ಹಕ್ಕುಗಳನ್ನು ಗಮನದಲ್ಲಿಟ್ಟುಕೊಂಡು ಕೆಲಸ ಮಾಡಲಿದೆ ಎಂದು ಬಿಎಸ್‌ಪಿ ಮುಖ್ಯಸ್ಥೆ ಮಾಯಾವತಿ ಹೇಳಿದ್ದಾರೆ.

ಬಿಜೆಪಿ ಸರ್ಕಾರ ವಿವಿಧ ರೀತಿಯಲ್ಲಿ ಮೀಸಲಾತಿಯನ್ನು ನಿಷ್ಪರಿಣಾಮಕಾರಿಯಾಗಿ ಮಾಡಲು ಪ್ರಯತ್ನಿಸುತ್ತಿದೆ ಎಂದು ಬಹುಜನ ಸಮಾಜ ಪಕ್ಷದ(ಬಿಎಸ್ಪಿ) ಮುಖ್ಯಸ್ಥೆ ಮತ್ತು ಮಾಜಿ ಮುಖ್ಯಮಂತ್ರಿ ಮಾಯಾವತಿ ಅವರು ಮಂಗಳವಾರ ಆರೋಪಿಸಿದ್ದಾರೆ.

ಉ.ಪ್ರ ಚುನಾವಣೆ: ಬಿಎಸ್‌ಪಿ ಮತಗಳನ್ನು ಬಾಚಿಕೊಳ್ಳಲು ಎಸ್‌ಪಿ ಯತ್ನಉ.ಪ್ರ ಚುನಾವಣೆ: ಬಿಎಸ್‌ಪಿ ಮತಗಳನ್ನು ಬಾಚಿಕೊಳ್ಳಲು ಎಸ್‌ಪಿ ಯತ್ನ

ತನ್ನ ಜಾತಿವಾದಿ ಮನಸ್ಥಿತಿಯಿಂದಾಗಿ, ಮೋದಿ ಸರ್ಕಾರವು ಜಾತಿ ಆಧಾರಿತ ಒಬಿಸಿ ಜನಗಣತಿಯ ಬೇಡಿಕೆ ಬಗ್ಗೆ ಜಾಣ ಕಿವುಡುತನ ಪ್ರದರ್ಶಿಸುತ್ತಿದೆ ಎಂದು ಮಾಯಾವತಿ ವಾಗ್ದಾಳಿ ನಡೆಸಿದ್ದಾರೆ.

Mayawati Says BJP Govt Trying To Make Reservations ineffective

"ರಾಜ್ಯದಲ್ಲಿ ಬಿಎಸ್‌ಪಿ ಅಧಿಕಾರಕ್ಕೆ ಬಂದರೆ ನಮ್ಮ ಸರ್ಕಾರವು ಮೊದಲಿನಂತೆಯೇ ಒಬಿಸಿಗಳು, ಮುಸ್ಲಿಮರು ಮತ್ತು ಜಾಟ್‌ಗಳ ಹಕ್ಕುಗಳು ಮತ್ತು ಅಭಿವೃದ್ಧಿಯನ್ನು ಗಮನದಲ್ಲಿಟ್ಟುಕೊಂಡು ಕೆಲಸ ಮಾಡಲಿದೆ" ಎಂದು ಮಾಯಾವತಿ ಹೇಳಿದರು.

ಬಿಎಸ್‌ಪಿ 2022ರ ಉತ್ತರ ಪ್ರದೇಶ ಚುನಾವಣೆಯಲ್ಲಿ ಸ್ವತಂತ್ರವಾಗಿ ಸ್ಪರ್ಧಿಸುತ್ತದೆ ಎಂದು ಮತ್ತೊಮ್ಮೆ ಹೇಳಿದ ಮಾಯಾವತಿ, ಯಾವುದೇ ಪಕ್ಷದೊಂದಿಗೆ ಚುನಾವಣಾ ಪೂರ್ವ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಮಾಧ್ಯಮ ಪ್ರತಿನಿಧಿಗಳೊಂದಿಗೆ ಸಂವಾದ ನಡೆಸಿದ ಬಿಎಸ್ ಪಿ ಮುಖ್ಯಸ್ಥೆ, ತಮ್ಮ ಪಕ್ಷದ ಒಬಿಸಿ ಸಮುದಾಯ, ಅಲ್ಪಸಂಖ್ಯಾತ ಸಮುದಾಯ ವಿಶೇಷವಾಗಿ ಮುಸ್ಲಿಂ ಮತ್ತು ಜಾಟ್ ಸಮುದಾಯದ ನಾಯಕರಿಗೆ ತಮ್ಮ ಸಮುದಾಯದ ಜನರನ್ನು ಮೀಸಲು ಸ್ಥಾನಗಳಿಗೆ ಕರೆತರುವ ಜವಾಬ್ದಾರಿಯನ್ನು ವಹಿಸಲಾಗಿದೆ ಎಂದು ಹೇಳಿದರು.

ಚುನಾವಣೆಗೆ 6 ತಿಂಗಳು ಮೊದಲೇ ಮಾಧ್ಯಮಗಳಲ್ಲಿ ಚುನಾವಣಾ ಪೂರ್ವ ಸಮೀಕ್ಷೆಗಳನ್ನು ಚುನಾವಣಾ ಆಯೋಗ ನಿಷೇಧಿಸಬೇಕು ಎಂದು ಬಹುಜನ ಸಮಾಜವಾದಿ ಪಕ್ಷದ ಮುಖ್ಯಸ್ಥೆ ಮಾಯಾವತಿ ಆಗ್ರಹಿಸಿದ್ದಾರೆ.

ಉತ್ತರಪ್ರದೇಶ ವಿಧಾನಸಭೆಗೆ ಮುಂದಿನ ವರ್ಷ ಚುನಾವಣೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ನ್ಯೂಸ್‌ ಚಾನಲ್‌ವೊಂದು ಚುನಾವಣಾ ಪೂರ್ವ ಸಮೀಕ್ಷೆಯನ್ನು ಬಿಡುಗಡೆ ಮಾಡಿದ್ದು, ಇದರಲ್ಲಿ ಮುಂದಿನ 2022ರ ಚುನಾವಣೆಯಲ್ಲಿ ರಾಜ್ಯದಲ್ಲಿ ಬಿಜೆಪಿ ಅತೀ ಹೆಚ್ಚು ಸೀಟುಗಳನ್ನು ಗಳಿಸಿ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ತಿಳಿಸಿದೆ. ಈ ಸಮೀಕ್ಷೆ ಬಿಡುಗಡೆಯ ಬಳಿಕ ಮಾಯಾವತಿ ಸಮೀಕ್ಷೆಯನ್ನೇ ನಿಷೇಧಿಸಬೇಕು ಎಂಬ ಹೇಳಿಕೆ ನೀಡಿದ್ದಾರೆ.

ಕೇಂದ್ರದಲ್ಲಿಯೂ ಬಿಜೆಪಿ ನೇತೃತ್ವದ ಮೈತ್ರಿಕೂಟವಿದ್ದು, ಇವರು ಚುನಾವಣೆ ವೇಳೆ ತಮಗೆ ಪೂರಕವಾಗುವಂತೆ ಉತ್ತರ ಪ್ರದೇಶ ಸರ್ಕಾರದ ಆಡಳಿತವನ್ನು ದುರುಪಯೋಗಪಡಿಸಿಕೊಳ್ಳುವ ಸಾಧ್ಯತೆ ಇದೆ ಎಂದು ಮಾಯಾವತಿ ಆರೋಪಿಸಿದ್ದಾರೆ. ಈ ಸಂಬಂಧ ಚುನಾವಣಾ ಆಯೋಗಕ್ಕೆ ಪತ್ರ ಬರೆಯುವುದಾಗಿ ತಿಳಿಸಿದ ಅವರು, ಮಾಧ್ಯಮಗಳು ಹಾಗೂ ಇತರ ಸಂಸ್ಥೆಗಳು ನಡೆಸುವ ಚುನಾವಣಾ ಪೂರ್ವ ಸಮೀಕ್ಷೆಯನ್ನು ಚುನಾವಣೆ ನಡೆಯುವ 6 ತಿಂಗಳು ಮೊದಲೇ ನಿಷೇಧಿಸುವಂತೆ ಮನವಿ ಮಾಡಲಾಗುವುದು ಇದರಿಂದ ಚುನಾವಣೆಯ ಮೇಲೆ ಯಾವುದೇ ಪ್ರಭಾವ ಬೀರುವುದಿಲ್ಲ ಎಂದು ಹೇಳಿದರು.

ಉ.ಪ್ರ.ದಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ? ಸಮೀಕ್ಷೆ ಭವಿಷ್ಯ: ಕಾಂಶಿರಾಮ್‌ ಸ್ಮಾರಕ ಸ್ಥಳದಲ್ಲಿ ನಡೆದ ಬಹುಜನ ಸಮಾಜವಾದಿ ಪಕ್ಷದ ಸಂಸ್ಥಾಪಕ ಕಾಂಶಿ ರಾಮ್‌ ಅವರ 15ನೇ ವರ್ಷದ ಸಂಸ್ಮರಣೆ ಕಾರ್ಯಕ್ರಮದಲ್ಲಿ ಮಾಯಾವತಿ ಮಾತನಾಡುತ್ತಿದ್ದರು. ದಲಿತ ನಾಯಕ ಕಾಂಶಿರಾಮ್‌ ಅವರಿಗೆ ಭಾರತರತ್ನ ನೀಡಬೇಕು ಎಂದು ಮಾಯಾವತಿ ಇದೇ ವೇಳೆ ತಿಳಿಸಿದರು.

ಉತ್ತರಪ್ರದೇಶದ ಜನ ರಾಜ್ಯದಲ್ಲಿ ಅಧಿಕಾರವನ್ನು ಬದಲಾಯಿಸಬೇಕೆನ್ನುವ ಯೋಚನೆಯಲ್ಲಿದ್ದಾರೆ. ಚುನಾವಣಾ ಪೂರ್ವ ಸಮೀಕ್ಷೆ ನಡೆಸುವುದನ್ನು ನಿಷೇಧಿಸುವಂತೆ ಶೀಘ್ರದಲ್ಲಿಯೇ ಚುನಾವಣಾ ಆಯೋಗಕ್ಕೆ ನಾನು ಪತ್ರ ಬರೆಯುತ್ತೇನೆ. ನಿಮಗೂ ತಿಳಿದಿರಬಹುದು. ಪಶ್ಚಿಮ ಬಂಗಾಳದಲ್ಲಿ ವಿಧಾನಸಭೆ ಚುನಾವಣೆ ನಡೆಯುತ್ತಿದ್ದ ವೇಳೆ ಸಮೀಕ್ಷೆಗಳು ಮಮತಾ ಬ್ಯಾನರ್ಜಿ ಸೋಲುತ್ತಿದ್ದಾರೆ ಎಂದು ತಿಳಿಸಿದ್ದವು.

ಆದರೆ ಫಲಿತಾಂಶದ ವೇಳೆ ಅದು ಸಂಪೂರ್ಣ ವಿರುದ್ಧವಾಗಿತ್ತು. ಮಮತಾ ಭಾರಿ ಬಹುಮತದೊಂದಿಗೆ ಚುನಾವಣೆಯಲ್ಲಿ ಗೆದ್ದು ಬೀಗಿದರು. ಅಲ್ಲಿ ಅಧಿಕಾರ ಹಿಡಿಯಬೇಕೆಂದು ಬಯಸಿದ್ದ ಕೆಲವರ ಕನಸುಗಳು ಭಗ್ನಗೊಂಡವು. ಹೀಗಾಗಿ ಸಮೀಕ್ಷೆಯ ಮೂಲಕ ಜನರ ದಾರಿ ತಪ್ಪಿಸಬಾರದು ಎಂದು ಮಾಯಾವತಿ ಹೇಳಿದರು.

English summary
Bahujan Samaj Party (BSP) chief and former CM Mayawati has accused the BJP government of trying to make reservations ineffective through various ways.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X