ರಾಹುಲ್ ಸ್ವಂತ ಮನೆ ಮೊದಲು ಸರಿಪಡಿಸಿಕೊಳ್ಳಲಿ: ಮಾಯಾವತಿ ವಾಗ್ದಾಳಿ
ಲಕ್ನೋ, ಏಪ್ರಿಲ್ 10: ಉತ್ತರ ಪ್ರದೇಶ ಚುನಾವಣೆಯಲ್ಲಿ ಒಟ್ಟಾಗಿ ಸ್ಪರ್ಧಿಸುವ ಕಾಂಗ್ರೆಸ್ ಪ್ರಸ್ತಾಪಕ್ಕೆ ಬಹುಜನ ಸಮಾಜ ಪಕ್ಷದ(ಬಿಎಸ್‌ಪಿ) ಮುಖ್ಯಸ್ಥೆ ಮಾಯಾವತಿ ಒಪ್ಪಿಗೊಂಡಿಲ್ಲ ಚುನಾವಣೆಗೆ ಸ್ಪರ್ಧಿಸಿಲ್ಲ ಎಂದು ಹೇಳಿದ್ದ ಕಾಂಗ್ರೆಸ್ ನಾಯಕ, ವಯನಾಡು ಸಂಸದ ರಾಹುಲ್ ಗಾಂಧಿ ವಿರುದ್ಧ ಮಾಯಾವತಿ ವಾಗ್ದಾಳಿ ನಡೆಸಿದ್ದಾರೆ. ಮೊದಲು ರಾಹುಲ್ ಗಾಂಧಿ ತಮ್ಮ ಸ್ವಂತ ಮನೆಯನ್ನು ಸರಿ ಮಾಡಿಕೊಳ್ಳಲಿ ಎಂದಿದ್ದಾರೆ.
ಮಾಯಾವತಿ ಅವರು ಮೈತ್ರಿಗಾಗಿ ಪಕ್ಷದ ಪ್ರಸ್ತಾಪವನ್ನು ತಿರಸ್ಕರಿಸಿದ್ದಾರೆ ಎಂದು ಕಾಂಗ್ರೆಸ್ ಪಕ್ಷದ ರಾಹುಲ್ ಗಾಂಧಿ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ದಲಿತ ನಾಯಕಿ ಮಾಯಾವತಿ ರಾಹುಲ್ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. "ಸ್ವಂತ ಮನೆಯನ್ನು ಸರಿಯಾಗಿ ನೋಡಿಕೊಳ್ಳಲು ಸಾಧ್ಯವಾಗದ ರಾಹುಲ್ ಗಾಂಧಿ ಬಿಎಸ್‌ಪಿ ಬಗ್ಗೆ ಮಾತನಾಡುತ್ತಾರೆ," ಎಂದು ಕಿಡಿಕಾರಿದರು.
ಹಾಗೆಯೇ ರಾಹುಲ್ ಗಾಂಧಿ ಹೇಳಿದ್ದು ಸಂಪೂರ್ಣವಾಗಿ ಸುಳ್ಳು ಎಂದು ಪ್ರತಿಪಾದಿಸಿದ ಮಾಯಾವತಿ, ಈ ಸಣ್ಣ ವಿಷಯಗಳಿಗಿಂತ ಯುಪಿ ಚುನಾವಣೆಯಲ್ಲಿನ ಸೋಲಿನ ಮೇಲೆ ಈಗ ಗಮನ ಹರಿಸಬೇಕು ಎಂದು ಹೇಳಿದರು.

ಟೀಕೆಗಳಿಗೂ ಮುನ್ನ ನೂರು ಬಾರಿ ಯೋಚಿಸಿ ಎಂದ ಮಾಯಾವತಿ
"ಕಾಂಗ್ರೆಸ್ ಇಂತಹ ಟೀಕೆಗಳನ್ನು ಮಾಡುವ ಮೊದಲು 100 ಬಾರಿ ಯೋಚಿಸಬೇಕು. ಅವರು ಬಿಜೆಪಿ ವಿರುದ್ಧ ಗೆಲ್ಲಲು ಸಾಧ್ಯವಾಗಲಿಲ್ಲ ಆದರೆ ಈ ಬೂಟಾಟಿಕೆಗಳನ್ನು ಮಾತ್ರ ಬಿಡಲ್ಲ. ಕಾಂಗ್ರೆಸ್ ಅಧಿಕಾರದಲ್ಲಿದ್ದರೂ ಮತ್ತು ಅಧಿಕಾರದ ಹೊರಗಿರುವಾಗಲೂ ಏನನ್ನೂ ಮಾಡಿಲ್ಲ," ಎಂದು ಟೀಕೆ ಮಾಡಿದರು.
ರಾಹುಲ್ ಗಾಂಧಿ ಹೇಳಿದ್ದು ಏನು?
"ಕಾಂಗ್ರೆಸ್ ಮೈತ್ರಿ ಮಾಡಿಕೊಳ್ಳಲು ಮುಂದಾಗಿದೆ. ಮಾಯಾವತಿ ಅವರನ್ನು ಮುಖ್ಯಮಂತ್ರಿ ಮಾಡಲಾಗುವುದು ಎಂದು ಕೂಡಾ ಭರವಸೆ ನೀಡಿದೆ. ಆದರೆ ಮಾಯಾವತಿ ಅವರು ನಮ್ಮೊಂದಿಗೆ ಮಾತನಾಡಿಲ್ಲ," ಎಂದು ರಾಹುಲ್ ಗಾಂಧಿ ಈ ಹಿಂದೆ ಹೇಳಿಕೆ ನೀಡಿದ್ದರು.
ಬಿಎಸ್‌ಪಿ ಮುಖ್ಯಸ್ಥರ ವಿರುದ್ಧ ವಾಗ್ದಾಳಿ ನಡೆಸಿದ ಮಾಜಿ ಕಾಂಗ್ರೆಸ್ ಅಧ್ಯಕ್ಷ, ಮಾಯಾವತಿ ಅವರು "ಸಿಬಿಐ, ಇಡಿ ಮತ್ತು ಪೆಗಾಸಸ್" ಯಿಂದಾಗಿ ರಾಜ್ಯದಲ್ಲಿ ಆಡಳಿತಾರೂಢ ಬಿಜೆಪಿಗೆ ಸ್ಪಷ್ಟ ಮಾರ್ಗವನ್ನು ನೀಡಿದ್ದಾರೆ ಎಂದು ಆರೋಪಿಸಿದರು.
ಇನ್ನು ಮಾಜಿ ಪ್ರಧಾನಿ ಮತ್ತು ರಾಹುಲ್ ಗಾಂಧಿ ಅವರ ತಂದೆ ದಿವಂಗತ ರಾಜೀವ್ ಗಾಂಧಿ ಕೂಡ ತಮ್ಮ ಬಹುಜನ ಸಮಾಜ ಪಕ್ಷದ ಮಾನಹಾನಿ ಮಾಡಲು ಪ್ರಯತ್ನಿಸಿದರು ಎಂದು ಮಾಯಾವತಿ ಹೇಳಿದರು. "ಈಗ ಪ್ರಿಯಾಂಕಾ ಗಾಂಧಿ ಕೂಡ ನಾನು ಇಡಿ ಮತ್ತು ಇತರ ತನಿಖಾ ಸಂಸ್ಥೆಗಳಿಗೆ ಹೆದರುತ್ತೇನೆ ಎಂದು ಹೇಳುವ ಮೂಲಕ ಅದೇ ರೀತಿ ಮಾಡುತ್ತಿದ್ದಾರೆ. ಇದೆಲ್ಲವೂ ನಿಜವಲ್ಲ. ನಾವು ಈ ಎಲ್ಲಾ ಸಮಸ್ಯೆಗಳನ್ನು ಸುಪ್ರೀಂ ಕೋರ್ಟ್‌ನಲ್ಲಿ ಹೋರಾಡಿ ಗೆದ್ದಿದ್ದೇವೆ ಎಂದು ಅವರು ತಿಳಿದುಕೊಳ್ಳಬೇಕು," ಎಂದರು.
ಉತ್ತರ ಪ್ರದೇಶದಲ್ಲಿ ಇತ್ತೀಚೆಗೆ ನಡೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಏಕಾಂಗಿಯಾಗಿ ಕಣಕ್ಕಿಳಿದಿತ್ತು. 2017 ರ ಚುನಾವಣೆಯಲ್ಲಿ ಕಾಂಗ್ರೆಸ್ ಜೊತೆಗಿನ ಮೈತ್ರಿಯ ವಿನಾಶಕಾರಿ ಪ್ರದರ್ಶನದ ನಂತರ, ಸಮಾಜವಾದಿ ಮುಖ್ಯಸ್ಥ ಅಖಿಲೇಶ್ ಯಾದವ್ ಕಾಂಗ್ರೆಸ್ ಜೊತೆ ಮೈತ್ರಿ ಮಾಡಿಕೊಂಡಿಲ್ಲ. ಬದಲಿಗೆ ಸಣ್ಣ ಪಕ್ಷಗಳೊಂದಿಗೆ ಒಕ್ಕೂಟ ರಚನೆ ಮಾಡಿದವು. ಬಿಎಸ್‌ಪಿಯ ಸಾಧನೆ ಕಾಂಗ್ರೆಸ್‌ಗಿಂತ ಸ್ವಲ್ಪ ಮಾತ್ರ ಉತ್ತಮವಾಗಿತ್ತು. ಬಿಎಸ್‌ಪಿ ಕೇವಲ ಒಂದು ಸ್ಥಾನವನ್ನು ಗಳಿಸಿತು ಮತ್ತು ಸುಮಾರು 13 ಶೇಕಡಾ ಮತಗಳನ್ನು ಗಳಿಸಿತು. ಕಾಂಗ್ರೆಸ್ ಪಕ್ಷವು 403 ರಲ್ಲಿ ಕೇವಲ ಎರಡು ಸ್ಥಾನಗಳನ್ನು ಗೆದ್ದು ಶೇಕಡಾ 2.5 ಕ್ಕಿಂತ ಕಡಿಮೆ ಮತಗಳನ್ನು ಗಳಿಸುವ ಮೂಲಕ ತನ್ನ ಅತ್ಯಂತ ಕಳಪೆ ಪ್ರದರ್ಶನವನ್ನು ದಾಖಲಿಸಿದೆ. 97 ರಷ್ಟು ಕಾಂಗ್ರೆಸ್ ಅಭ್ಯರ್ಥಿಗಳು ತಮ್ಮ ಭದ್ರತಾ ಠೇವಣಿ ಕಳೆದುಕೊಂಡಿದ್ದಾರೆ.
Recommended Video
-
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್












Click it and Unblock the Notifications