ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ರಾಹುಲ್‌ ಸ್ವಂತ ಮನೆ ಮೊದಲು ಸರಿಪಡಿಸಿಕೊಳ್ಳಲಿ: ಮಾಯಾವತಿ ವಾಗ್ದಾಳಿ

|
Google Oneindia Kannada News

ಲಕ್ನೋ, ಏಪ್ರಿಲ್‌ 10: ಉತ್ತರ ಪ್ರದೇಶ ಚುನಾವಣೆಯಲ್ಲಿ ಒಟ್ಟಾಗಿ ಸ್ಪರ್ಧಿಸುವ ಕಾಂಗ್ರೆಸ್ ಪ್ರಸ್ತಾಪಕ್ಕೆ ಬಹುಜನ ಸಮಾಜ ಪಕ್ಷದ(ಬಿಎಸ್‌ಪಿ) ಮುಖ್ಯಸ್ಥೆ ಮಾಯಾವತಿ ಒಪ್ಪಿಗೊಂಡಿಲ್ಲ ಚುನಾವಣೆಗೆ ಸ್ಪರ್ಧಿಸಿಲ್ಲ ಎಂದು ಹೇಳಿದ್ದ ಕಾಂಗ್ರೆಸ್ ನಾಯಕ, ವಯನಾಡು ಸಂಸದ ರಾಹುಲ್ ಗಾಂಧಿ ವಿರುದ್ಧ ಮಾಯಾವತಿ ವಾಗ್ದಾಳಿ ನಡೆಸಿದ್ದಾರೆ. ಮೊದಲು ರಾಹುಲ್ ಗಾಂಧಿ ತಮ್ಮ ಸ್ವಂತ ಮನೆಯನ್ನು ಸರಿ ಮಾಡಿಕೊಳ್ಳಲಿ ಎಂದಿದ್ದಾರೆ.

ಮಾಯಾವತಿ ಅವರು ಮೈತ್ರಿಗಾಗಿ ಪಕ್ಷದ ಪ್ರಸ್ತಾಪವನ್ನು ತಿರಸ್ಕರಿಸಿದ್ದಾರೆ ಎಂದು ಕಾಂಗ್ರೆಸ್ ಪಕ್ಷದ ರಾಹುಲ್ ಗಾಂಧಿ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ದಲಿತ ನಾಯಕಿ ಮಾಯಾವತಿ ರಾಹುಲ್ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. "ಸ್ವಂತ ಮನೆಯನ್ನು ಸರಿಯಾಗಿ ನೋಡಿಕೊಳ್ಳಲು ಸಾಧ್ಯವಾಗದ ರಾಹುಲ್ ಗಾಂಧಿ ಬಿಎಸ್‌ಪಿ ಬಗ್ಗೆ ಮಾತನಾಡುತ್ತಾರೆ," ಎಂದು ಕಿಡಿಕಾರಿದರು.

 ರಾಷ್ಟ್ರಪತಿ ಹುದ್ದೆ ಪ್ರಸ್ತಾಪ ಒಪ್ಪಿಕೊಳ್ಳಲ್ಲ ಎಂದ ಮಾಯಾವತಿ ರಾಷ್ಟ್ರಪತಿ ಹುದ್ದೆ ಪ್ರಸ್ತಾಪ ಒಪ್ಪಿಕೊಳ್ಳಲ್ಲ ಎಂದ ಮಾಯಾವತಿ

ಹಾಗೆಯೇ ರಾಹುಲ್ ಗಾಂಧಿ ಹೇಳಿದ್ದು ಸಂಪೂರ್ಣವಾಗಿ ಸುಳ್ಳು ಎಂದು ಪ್ರತಿಪಾದಿಸಿದ ಮಾಯಾವತಿ, ಈ ಸಣ್ಣ ವಿಷಯಗಳಿಗಿಂತ ಯುಪಿ ಚುನಾವಣೆಯಲ್ಲಿನ ಸೋಲಿನ ಮೇಲೆ ಈಗ ಗಮನ ಹರಿಸಬೇಕು ಎಂದು ಹೇಳಿದರು.

Mayawati Slams Rahul Gandhi On Poll Comment

ಟೀಕೆಗಳಿಗೂ ಮುನ್ನ ನೂರು ಬಾರಿ ಯೋಚಿಸಿ ಎಂದ ಮಾಯಾವತಿ

"ಕಾಂಗ್ರೆಸ್ ಇಂತಹ ಟೀಕೆಗಳನ್ನು ಮಾಡುವ ಮೊದಲು 100 ಬಾರಿ ಯೋಚಿಸಬೇಕು. ಅವರು ಬಿಜೆಪಿ ವಿರುದ್ಧ ಗೆಲ್ಲಲು ಸಾಧ್ಯವಾಗಲಿಲ್ಲ ಆದರೆ ಈ ಬೂಟಾಟಿಕೆಗಳನ್ನು ಮಾತ್ರ ಬಿಡಲ್ಲ. ಕಾಂಗ್ರೆಸ್ ಅಧಿಕಾರದಲ್ಲಿದ್ದರೂ ಮತ್ತು ಅಧಿಕಾರದ ಹೊರಗಿರುವಾಗಲೂ ಏನನ್ನೂ ಮಾಡಿಲ್ಲ," ಎಂದು ಟೀಕೆ ಮಾಡಿದರು.

ಸಿಎಂ ಯೋಗಿ, ಮಾಯಾವತಿ ವಿರುದ್ಧ ಆಕ್ಷೇಪಾರ್ಹ ಪೋಸ್ಟ್: ವ್ಯಕ್ತಿ ಬಂಧನ ಸಿಎಂ ಯೋಗಿ, ಮಾಯಾವತಿ ವಿರುದ್ಧ ಆಕ್ಷೇಪಾರ್ಹ ಪೋಸ್ಟ್: ವ್ಯಕ್ತಿ ಬಂಧನ

ರಾಹುಲ್ ಗಾಂಧಿ ಹೇಳಿದ್ದು ಏನು?

"ಕಾಂಗ್ರೆಸ್ ಮೈತ್ರಿ ಮಾಡಿಕೊಳ್ಳಲು ಮುಂದಾಗಿದೆ. ಮಾಯಾವತಿ ಅವರನ್ನು ಮುಖ್ಯಮಂತ್ರಿ ಮಾಡಲಾಗುವುದು ಎಂದು ಕೂಡಾ ಭರವಸೆ ನೀಡಿದೆ. ಆದರೆ ಮಾಯಾವತಿ ಅವರು ನಮ್ಮೊಂದಿಗೆ ಮಾತನಾಡಿಲ್ಲ," ಎಂದು ರಾಹುಲ್ ಗಾಂಧಿ ಈ ಹಿಂದೆ ಹೇಳಿಕೆ ನೀಡಿದ್ದರು.

ಬಿಎಸ್‌ಪಿ ಮುಖ್ಯಸ್ಥರ ವಿರುದ್ಧ ವಾಗ್ದಾಳಿ ನಡೆಸಿದ ಮಾಜಿ ಕಾಂಗ್ರೆಸ್ ಅಧ್ಯಕ್ಷ, ಮಾಯಾವತಿ ಅವರು "ಸಿಬಿಐ, ಇಡಿ ಮತ್ತು ಪೆಗಾಸಸ್" ಯಿಂದಾಗಿ ರಾಜ್ಯದಲ್ಲಿ ಆಡಳಿತಾರೂಢ ಬಿಜೆಪಿಗೆ ಸ್ಪಷ್ಟ ಮಾರ್ಗವನ್ನು ನೀಡಿದ್ದಾರೆ ಎಂದು ಆರೋಪಿಸಿದರು.

ಇನ್ನು ಮಾಜಿ ಪ್ರಧಾನಿ ಮತ್ತು ರಾಹುಲ್ ಗಾಂಧಿ ಅವರ ತಂದೆ ದಿವಂಗತ ರಾಜೀವ್ ಗಾಂಧಿ ಕೂಡ ತಮ್ಮ ಬಹುಜನ ಸಮಾಜ ಪಕ್ಷದ ಮಾನಹಾನಿ ಮಾಡಲು ಪ್ರಯತ್ನಿಸಿದರು ಎಂದು ಮಾಯಾವತಿ ಹೇಳಿದರು. "ಈಗ ಪ್ರಿಯಾಂಕಾ ಗಾಂಧಿ ಕೂಡ ನಾನು ಇಡಿ ಮತ್ತು ಇತರ ತನಿಖಾ ಸಂಸ್ಥೆಗಳಿಗೆ ಹೆದರುತ್ತೇನೆ ಎಂದು ಹೇಳುವ ಮೂಲಕ ಅದೇ ರೀತಿ ಮಾಡುತ್ತಿದ್ದಾರೆ. ಇದೆಲ್ಲವೂ ನಿಜವಲ್ಲ. ನಾವು ಈ ಎಲ್ಲಾ ಸಮಸ್ಯೆಗಳನ್ನು ಸುಪ್ರೀಂ ಕೋರ್ಟ್‌ನಲ್ಲಿ ಹೋರಾಡಿ ಗೆದ್ದಿದ್ದೇವೆ ಎಂದು ಅವರು ತಿಳಿದುಕೊಳ್ಳಬೇಕು," ಎಂದರು.

Recommended Video

ಮುಸ್ಲಿಂ ವ್ಯಾಪಾರಿಯ ಕಲ್ಲಂಗಡಿ ನಾಶ ಮಾಡಿದ ಹಿಂದೂ ಯುವಕರ ಮೇಲೆ HDK ಕೆಂಡಾಮಂಡಲ | Oneindia Kannada

ಉತ್ತರ ಪ್ರದೇಶದಲ್ಲಿ ಇತ್ತೀಚೆಗೆ ನಡೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಏಕಾಂಗಿಯಾಗಿ ಕಣಕ್ಕಿಳಿದಿತ್ತು. 2017 ರ ಚುನಾವಣೆಯಲ್ಲಿ ಕಾಂಗ್ರೆಸ್ ಜೊತೆಗಿನ ಮೈತ್ರಿಯ ವಿನಾಶಕಾರಿ ಪ್ರದರ್ಶನದ ನಂತರ, ಸಮಾಜವಾದಿ ಮುಖ್ಯಸ್ಥ ಅಖಿಲೇಶ್ ಯಾದವ್ ಕಾಂಗ್ರೆಸ್ ಜೊತೆ ಮೈತ್ರಿ ಮಾಡಿಕೊಂಡಿಲ್ಲ. ಬದಲಿಗೆ ಸಣ್ಣ ಪಕ್ಷಗಳೊಂದಿಗೆ ಒಕ್ಕೂಟ ರಚನೆ ಮಾಡಿದವು. ಬಿಎಸ್‌ಪಿಯ ಸಾಧನೆ ಕಾಂಗ್ರೆಸ್‌ಗಿಂತ ಸ್ವಲ್ಪ ಮಾತ್ರ ಉತ್ತಮವಾಗಿತ್ತು. ಬಿಎಸ್‌ಪಿ ಕೇವಲ ಒಂದು ಸ್ಥಾನವನ್ನು ಗಳಿಸಿತು ಮತ್ತು ಸುಮಾರು 13 ಶೇಕಡಾ ಮತಗಳನ್ನು ಗಳಿಸಿತು. ಕಾಂಗ್ರೆಸ್ ಪಕ್ಷವು 403 ರಲ್ಲಿ ಕೇವಲ ಎರಡು ಸ್ಥಾನಗಳನ್ನು ಗೆದ್ದು ಶೇಕಡಾ 2.5 ಕ್ಕಿಂತ ಕಡಿಮೆ ಮತಗಳನ್ನು ಗಳಿಸುವ ಮೂಲಕ ತನ್ನ ಅತ್ಯಂತ ಕಳಪೆ ಪ್ರದರ್ಶನವನ್ನು ದಾಖಲಿಸಿದೆ. 97 ರಷ್ಟು ಕಾಂಗ್ರೆಸ್ ಅಭ್ಯರ್ಥಿಗಳು ತಮ್ಮ ಭದ್ರತಾ ಠೇವಣಿ ಕಳೆದುಕೊಂಡಿದ್ದಾರೆ.

English summary
"Can't Set Own House In Order": Mayawati On Rahul Gandhi's Poll Comment.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X