ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮಾಯಾವತಿ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ: ಸತೀಶ್‌ಚಂದ್ರ

|
Google Oneindia Kannada News

ಲಕ್ನೋ, ಜನವರಿ 11: ಬಿಎಸ್​​​​ಪಿ ನಾಯಕಿ ಮಾಯಾವತಿ ಮುಂಬರಲಿರುವ ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಬಿಎಸ್‌ಪಿ ಪ್ರಧಾನ ಕಾರ್ಯದರ್ಶಿ ಸತೀಶ್‌ಚಂದ್ರ ಮಿಶ್ರಾ ಹೇಳಿದ್ದಾರೆ.

ಶೀಘ್ರದಲ್ಲೇ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡುತ್ತಾರೆ ಎಂದು ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸತೀಶ್​ ಚಂದ್ರ ಮಿಶ್ರಾ ಹೇಳಿದ್ದಾರೆ. ಇದೇ ವೇಳೆ ಮಾತನಾಡಿದ ಅವರು ತಾವು ಮತ್ತು ಮಾಯಾವತಿ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಘೋಷಿಸಿದರು.

Breaking News: ಉತ್ತರ ಪ್ರದೇಶದಲ್ಲಿ 7 ಹಂತಗಳಲ್ಲಿ ಮತದಾನBreaking News: ಉತ್ತರ ಪ್ರದೇಶದಲ್ಲಿ 7 ಹಂತಗಳಲ್ಲಿ ಮತದಾನ

ಉತ್ತರಪ್ರದೇಶದಲ್ಲಿ ವಿಧಾನಸಭೆ ಚುನಾವಣಾ ಕಣ ರಂಗೇರಿದೆ. ವಿವಿಧ ಪಕ್ಷಗಳು ತಮ್ಮ ಅಭ್ಯರ್ಥಿಗಳನ್ನು ಆಯ್ಕೆ ಮಾಡುವಲ್ಲಿ ನಿರತವಾಗಿವೆ. ಅತ್ತ ಬಿಎಸ್​​​​ಪಿ ಮುಖ್ಯಸ್ಥೆ ಮಾಯಾವತಿ ನಿರಂತರ ಪರಿಶೀಲನಾ ಸಭೆಗಳಲ್ಲಿ ನಿರತರಾಗಿದ್ದಾರೆ. ಪಕ್ಷದ ಗೆಲುವಿಗಾಗಿ ಪ್ರಬಲ ಸ್ಪರ್ಧಿಗಳಿಗಾಗಿ ಸ್ಕ್ರೀನಿಂಗ್ ನಡೆಸುತ್ತಿದ್ದಾರೆ.

Mayawati Will Not Contest 2022 UP Election: BSP MP Satish Chandra Misra

ಪಕ್ಷದ ಅಧ್ಯಕ್ಷರು ಶೀಘ್ರದಲ್ಲೇ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡುತ್ತಾರೆ ಎಂದು ಅವರು ಇದೇ ವೇಳೆ ಹೇಳಿದರು. ಇದೇ ವೇಳೆ, ಸತೀಶ್​ ಚಂದ್ರ ಅವರು, ಎಸ್‌ಪಿ ಅಧ್ಯಕ್ಷ ಅಖಿಲೇಶ್ ಯಾದವ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.

ಅಖಿಲೇಶ್​ ಯಾದವ್​ ಅವರು 400 ಸ್ಥಾನಗಳಲ್ಲಿ ಗೆಲುವು ಸಾಧಿಸುತ್ತೇವೆ ಎಂದು ಹಗಲುಗನಸು ಕಾಣುತ್ತಿದ್ದಾರೆ ಎಂದು ಲೇವಡಿ ಮಾಡಿದರು. ಯುಪಿಯಲ್ಲಿ ಬಿಎಸ್‌ಪಿ ಸರ್ಕಾರ ರಚಿಸಲಿದೆ ಎಂದು ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸತೀಶ್ ಚಂದ್ರ ಅವರು ವಿಶ್ವಾಸ ವ್ಯಕ್ತಪಡಿಸಿದರು.

ಇದೇ ವೇಳೆ ಬಿಜೆಪಿ ಮತ್ತು ಎಸ್‌ಪಿ ರಾಜ್ಯದ ಜನತೆಗೆ ಏನನ್ನೂ ಮಾಡಿಲ್ಲ ಎಂದು ಆರೋಪಿಸಿದರು. ಮತದಾರರು ಈಗ ಬಿಎಸ್‌ಪಿಯಲ್ಲಿ ನಂಬಿಕೆ ಇಟ್ಟಿದ್ದು, ಬಿಎಸ್‌ಪಿ ಯಾವಾಗಲೂ ಸಾಮಾಜಿಕ ನ್ಯಾಯ ಮತ್ತು ಸಮಾನತೆಗೆ ಪ್ರಾಮುಖ್ಯತೆ ನೀಡುತ್ತಿದೆ ಎಂದು ಭರವಸೆ ನೀಡಿದರು.

ಏತನ್ಮಧ್ಯೆ ಪಕ್ಷದ ಪ್ರಧಾನ ಕಾರ್ಯದರ್ಶಿ ಸತೀಶ್​ ಚಂದ್ರ ಮಿಶ್ರಾ, ನಾನು ಮತ್ತು ಬಿಎಸ್‌ಪಿ ಮುಖ್ಯಸ್ಥೆ ಮಾಯಾವತಿ ಇನ್ನು ಮುಂದೆ ಚುನಾವಣೆಯಲ್ಲಿ ಸ್ಪರ್ಧಿಸದಿರಲು ನಿರ್ಧರಿಸಿದ್ದೇವೆ ಎಂದು ಘೋಷಿಸಿದ್ದಾರೆ.

ಭಾರತದಲ್ಲಿ ತೀವ್ರ ಕುತೂಹಲ ಕೆರಳಿಸಿರುವ ಉತ್ತರ ಪ್ರದೇಶ ಸೇರಿದಂತೆ ಪಂಚರಾಜ್ಯಗಳ ವಿಧಾನಸಭೆ ಚುನಾವಣೆಗೆ ಕೇಂದ್ರ ಚುನಾವಣಾ ಆಯೋಗವು ದಿನಾಂಕವನ್ನು ಪ್ರಕಟಿಸಿದೆ.

ನವದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಕೇಂದ್ರ ಚುನಾವಣಾ ಆಯೋಗದ ಮುಖ್ಯಸ್ಥ ಸುಶೀಲ್ ಚಂದ್ರ, ಪಂಚರಾಜ್ಯಗಳ ಚುನಾವಣೆ, ನಾಮಪತ್ರ ಸಲ್ಲಿಕೆ, ನಾಮಪತ್ರ ಮರುಪರಿಶೀಲನೆ, ನಾಮಪತ್ರ ವಾಪಸ್, ಮತದಾನ ಹಾಗೂ ಫಲಿತಾಂಶದ ದಿನಾಂಕವನ್ನು ಪ್ರಕಟಿಸಿದ್ದಾರೆ. ಪಂಚರಾಜ್ಯಗಳ ಪೈಕಿ 403 ವಿಧಾನಸಭೆ ಕ್ಷೇತ್ರಗಳನ್ನು ಹೊಂದಿರುವ ಉತ್ತರ ಪ್ರದೇಶದಲ್ಲಿ ಏಳು ಹಂತಗಳಲ್ಲಿ ವಿಧಾನಸಭೆಗೆ ಚುನಾವಣೆ ನಡೆಯಲಿದೆ.

ಪಂಚರಾಜ್ಯ ವಿಧಾನಸಭೆ ಚುನಾವಣೆ ವೇಳೆ ಕೊವಿಡ್-19 ಹೊಸ ಶಿಷ್ಟಾಚಾರ ಮತ್ತು ನಿಯಮಗಳ ಪಾಲನೆಗೆ ಸೂಚಿಸಲಾಗಿದೆ. ಪಂಚರಾಜ್ಯ ಚುನಾವಣಾ ಸಂದರ್ಭದಲ್ಲಿ ಎಲ್ಲಾ ಚುನಾವಣಾ ಅಧಿಕಾರಿಗಳು ಮತ್ತು ನೌಕರರನ್ನು ಮುಂಚೂಣಿಯ ಕಾರ್ಯಕರ್ತರು ಎಂದು ಪರಿಗಣಿಸಲಾಗುತ್ತದೆ. ಎಲ್ಲಾ ಅರ್ಹ ಅಧಿಕಾರಿಗಳಿಗೆ 'ಮುನ್ನೆಚ್ಚರಿಕೆಯ ಡೋಸ್' ಲಸಿಕೆ ನೀಡಲಾಗುತ್ತದೆ ಎಂದಿದ್ದಾರೆ.

ಉತ್ತರ ಪ್ರದೇಶದಲ್ಲಿ ಏಳು ಹಂತಗಳಲ್ಲಿ ಚುನಾವಣೆ:

- ಮೊದಲ ಹಂತದಲ್ಲಿ ಫೆಬ್ರವರಿ 10ರಂದು ಮತದಾನ

- ಎರಡನೇ ಹಂತದಲ್ಲಿ ಫೆಬ್ರವರಿ 14ರಂದು ಮತದಾನ

- ಮೂರನೇ ಹಂತದಲ್ಲಿ ಫೆಬ್ರವರಿ 20ರಂದು ಮತದಾನ

- ನಾಲ್ಕನೇ ಹಂತದಲ್ಲಿ ಫೆಬ್ರವರಿ 23ರಂದು ಮತದಾನ

- ಐದನೇ ಹಂತದಲ್ಲಿ ಫೆಬ್ರವರಿ 27ರಂದು ಮತದಾನ

- ಆರನೇ ಹಂತದಲ್ಲಿ ಮಾರ್ಚ್ 3ರಂದು ಮತದಾನ

- ಏಳನೇ ಹಂತದಲ್ಲಿ ಮಾರ್ಚ್ 7ರಂದು ಮತದಾನ

ದೇಶದಲ್ಲಿ ಅತಿಹೆಚ್ಚು ವಿಧಾನಸಭೆ ಕ್ಷೇತ್ರಗಳನ್ನು ಹೊಂದಿರುವ ಉತ್ತರ ಪ್ರದೇಶದಲ್ಲಿ ಅಧಿಕಾರದ ಗದ್ದುಗೆ ಹಿಡಿಯುವುದಕ್ಕೆ ಬಿಜೆಪಿ, ಸಮಾಜವಾದಿ ಮತ್ತು ಬಹುಜನ ಸಮಾಜವಾದಿ ಸೇರಿದಂತೆ ಪ್ರಾದೇಶಿಕ ಪಕ್ಷಗಳ ನಡುವೆ ಪೈಪೋಟಿ ನಡೆಯುತ್ತಿದೆ. ಅತಿಹೆಚ್ಚು ಕ್ಷೇತ್ರಗಳನ್ನು ಹೊಂದಿರುವ ರಾಜ್ಯದ ಮತದಾರರ ಮನ ಗೆಲ್ಲುವುದಕ್ಕಾಗಿ ಇತ್ತೀಚಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಹಲವು ಬಾರಿ ರಾಜ್ಯಕ್ಕೆ ಭೇಟಿ ನೀಡಿ ಸಾಕಷ್ಟು ಯೋಜನೆಗಳಿಗೆ ಚಾಲನೆ ನೀಡಿದ್ದರು.

Recommended Video

Little Kashmir Girl Turns Reporter: ಹದಗೆಟ್ಟ ರಸ್ತೆ ಬಗ್ಗೆ ಈ ಪುಟಾಣಿ ಏನ್ ಹೇಳ್ತಿದ್ದಾಳೆ ನೋಡಿ | Oneindia

English summary
Bahujan Samaj Party (BSP) supremo and former chief minister Mayawati will not contest the 2022 Uttar Pradesh Election, her party colleague and MP Satish Chandra Misra said.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X