• search
  • Live TV
ಲಕ್ನೋ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಊರಿಗೆ ಹೊರಟ ವಲಸೆ ಕಾರ್ಮಿಕ ತಿಂಡಿಗಾಗಿ ಕುಳಿತಾಗ ಕಾರು ಡಿಕ್ಕಿ, ಸಾವು

|

ಲಕ್ನೋ, ಮೇ 11: ಉತ್ತರ ಪ್ರದೇಶಕ್ಕೆ ಹೊರಟಿದ್ದ ವಲಸೆ ಕಾರ್ಮಿಕ ಮಾರ್ಗಮಧ್ಯೆ ಬೆಳಗಿನ ತಿಂಡಿಗೆಂದು ಕುಳಿತಿದ್ದಾಗ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದು ಆತ ಸ್ಥಳದಲ್ಲೇ ಮೃತಪಟ್ಟಿದ್ದಾನೆ.

ಲಾಕ್ ಡೌನ್ ಹಿನ್ನಲೆಯಲ್ಲಿ ಕೆಲಸವಿಲ್ಲದೇ ಸಾವಿರಾರು ಕಾರ್ಮಿಕರು ನಡೆದುಕೊಂಡು, ಸೈಕಲ್ ಮೂಲಕ ತಮ್ಮ ತಮ್ಮ ಗ್ರಾಮಗಳಿಗೆ ಮರಳುತ್ತಿದ್ದಾರೆ. ಇದೇ ರೀತಿ ಉತ್ತರ ಪ್ರದೇಶದಲ್ಲಿ ಕಾರ್ಮಿಕನೊಬ್ಬ ಸೈಕಲ್ ಮೂಲಕ ತನ್ನೂರಿಗೆ ಹೋಗುತ್ತಿದ್ದಾಗ ಕಾರು ಡಿಕ್ಕಿ ಹೊಡೆದು ಮೃತಪಟ್ಟಿದ್ದಾನೆ.

ಹರಿಯಾಣಕ್ಕೆ ಬರಲು ಅರ್ಜಿ ಸಲ್ಲಿಸಿದ 1 ಲಕ್ಷ ವಲಸೆ ಕಾರ್ಮಿಕರು

ಮೃತ ಕಾರ್ಮಿಕನನ್ನು ಸಘೀರ್ ಅನ್ಸಾರಿ (26 ವರ್ಷ) ಎಂದು ಗುರುತಿಸಲಾಗಿದೆ. ಅನ್ಸಾರಿಗೆ ಮದುವೆಯಾಗಿ ಮೂವರು ಮಕ್ಕಳಿದ್ದಾರೆ.

ದೆಹಲಿಯಿಂದ ಬಿಹಾರದ ತನ್ನ ಚಂಪಾರಣ್ ಗ್ರಾಮಕ್ಕೆ ಅನ್ಸಾರಿ ಮತ್ತು ಆತನ ಸ್ನೇಹಿತರು ಹೋಗುತ್ತಿದ್ದರು. ಆದರೆ ಲಖನೌ ನಲ್ಲಿ ತಿಂಡಿ ಮಾಡುತ್ತಿದ್ದಾಗ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದಿದೆ. ಈ ವೇಳೆ ತೀವ್ರವಾಗಿ ಗಾಯಗೊಂಡಿದ್ದ ಅನ್ಸಾರಿ ಸಾವನ್ನಪ್ಪಿದ್ದಾರೆ.

ಇನ್ನು ಅಪಘಾತದ ಬಳಿಕ ತಕ್ಷಣ ಕಾರು ಚಾಲಕ ಕಾರಿನಿಂದ ಇಳಿದು ಅವರಿಗೆ ಪರಿಹಾರವಾಗಿ ಹಣವನ್ನು ನೀಡಲು ಮುಂದಾಗಿದ್ದಾನೆ. ಆದರೆ ಅನ್ಸಾರಿ ಸ್ನೇಹಿತರು ಹಣ ತೆಗೆದುಕೊಳ್ಳಲು ನಿರಾಕರಿಸಿದ್ದಾರೆ. ನಂತರ ಅನ್ಸಾರಿಯನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅನ್ಸಾರಿ ಮೃತಪಟ್ಟಿದ್ದಾರೆ.

ಸದ್ಯಕ್ಕೆ ಪೊಲೀಸರು ಚಾಲಕನ ಅಜಾಗರುಕತೆಯಿಂದ ಅಪಘಾತ ಸಂಭವಿಸಿದೆ ಎಂದು ಅಪರಿಚಿತ ಚಾಲಕನ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.ಕೊರೊನಾ ಲಾಕ್‌ಡೌನ್‌ನಿಂದ ಕೆಲಸ ಇಲ್ಲದೆ ತನ್ನ ಏಳು ಸ್ನೇಹಿತರೊಂದಿಗೆ ಸೈಕಲ್ ಮೂಲಕ ತನ್ನೂರಿಗೆ ಹೋಗಲು ಅನ್ಸಾರಿ ನಿರ್ಧರಿಸಿದ್ದರು.

ಅದರಂತೆಯೇ ಎಲ್ಲರೂ ದೆಹಲಿಯಿಂದ ಮೇ 5 ರಂದು ತಮ್ಮ ಊರಿಗೆ ಸೈಕಲ್ ಮೂಲಕ ಹೊರಟಿದ್ದರು. ಐದು ದಿನಗಳ ನಂತರ ಕಾರ್ಮಿಕರು ಲಖನೌ ತಲುಪಿದ್ದಾರೆ. ಐದು ದಿನಗಳಲ್ಲಿ 1,000 ಕಿಲೋ ಮೀಟರ್ ದೂರ ಸೈಕಲ್ ಮೂಲಕ ಬಂದಿದ್ದರು.

English summary
A migrant worker, trying to cycle over 1,000 kilometres from Delhi to his hometown East Champaran in Bihar, died on Saturday in Lucknow after being hit by a car. He is survived by his wife and three children.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X