ಬಿರಿಯಾನಿ ತಿನ್ನಲು ಮೋದಿ ಪಾಕಿಸ್ತಾನಕ್ಕೆ ಹೋಗಿದ್ದರು: ಪ್ರಿಯಾಂಕಾ ಗಾಂಧಿ
Recommended Video

ಅಯೋಧ್ಯಾ, ಮಾರ್ಚ್ 30: ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ವಾಗ್ದಾಳಿ ಮುಂದುವರಿಸಿರುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ, 'ಬಿರಿಯಾನಿ ತಿನ್ನುವ ಸಲುವಾಗಿ ಮೋದಿ ಅವರು ಪಾಕಿಸ್ತಾನಕ್ಕೆ ತೆರಳಿದ್ದರು' ಎಂದು ವ್ಯಂಗ್ಯವಾಡಿದ್ದಾರೆ.
ಲೋಕಸಭಾ ಚುನಾವಣೆ 2019 : ವಿಶೇಷ ಪುಟ | ಗ್ಯಾಲರಿ
ಇಡೀ ದೇಶ ಇಂದು ಧ್ವನಿಯಲ್ಲಿ ಮಾತನಾಡಿದರೆ, ಕಾಂಗ್ರೆಸ್ ಬೇರೆಯದೇ ಧ್ವನಿಯಲ್ಲಿ ಮಾತನಾಡುತ್ತಿದೆ. ಬಾಲಕೋಟ್‌ನಲ್ಲಿ ಭಯೋತ್ಪಾದಕರ ಮೇಲೆ ಭಾರತ ದಾಳಿ ನಡೆಸಿದ ಬಳಿಕ ದೇಶದ ಪರವಾಗಿ ಇಲ್ಲದ ಹೇಳಿಕೆಗಳನ್ನು ಕಾಂಗ್ರೆಸ್ ನಾಯಕರು ನೀಡುತ್ತಿದ್ದಾರೆ. ಪಾಕಿಸ್ತಾನವನ್ನು ಹೊಗಳುವ ಅಂತಹ ಭಾಷೆಯನ್ನು ಭಾರತೀಯ ನಾಗರಿಕರು ಹೇಗೆ ಒಪ್ಪಿಕೊಳ್ಳುತ್ತಾರೆ? ಎಂದು ನರೇಂದ್ರ ಮೋದಿ ಅವರು ಪ್ರಶ್ನಿಸಿದ್ದರು.

ಪಾಕಿಸ್ತಾನವು ಭಾರತದಲ್ಲಿ ಕಾಂಗ್ರೆಸ್ ಚುನಾವಣೆಯಲ್ಲಿ ಗೆದ್ದು ಅಧಿಕಾರಕ್ಕೆ ಬರುವುದನ್ನು ಬಯಸುತ್ತಿದೆ ಎಂದು ಬಿಜೆಪಿ ಹೇಳಿತ್ತು. ಇದಕ್ಕೆ ಪ್ರತಿಕ್ರಿಯೆ ನೀಡಿದ್ದ ಪ್ರಿಯಾಂಕಾ, ಪ್ರಧಾನಿ ಮೋದಿ ಅವರು ಬಿರಿಯಾನಿ ತಿನ್ನಲು ಪಾಕಿಸ್ತಾನಕ್ಕೆ ಹೋಗಿದ್ದರು ಎಂದು ಟೀಕಿಸಿದರು.
BRK: “Pakistan main biryani khane ke liye toh woh gaye the na”: @priyankagandhi replies while replying to a Q on charge that Pakistan will celeberate if Congress wins pic.twitter.com/jWhT7HB1cs
— Rohan Dua (@rohanduaTOI) 29 March 2019
ರೈತರ ಸಾಲ ಮನ್ನಾ ಮಾಡುವುದಾಗಿ ಕಾಂಗ್ರೆಸ್ ಭರವಸೆ ನೀಡಿತ್ತು. ರಾಜಸ್ಥಾನ, ಮಧ್ಯಪ್ರದೇಶ ಮತ್ತು ಛತ್ತೀಸಗಡಗಳಲ್ಲಿ ಅಧಿಕಾರಕ್ಕೆ ಬಂದ ಹತ್ತು ದಿನಗಳಲ್ಲಿ ಹೇಳಿದ್ದನ್ನು ಮಾಡಿ ತೋರಿಸಿತು. ಆದರೆ, ಬಿಜೆಪಿ ಅನೇಕ ಭರವಸೆಗಳನ್ನು ನೀಡಿತ್ತು. ಆದರೆ, ಅವುಗಳನ್ನು ಜಾರಿಗೊಳಿಸಿಲ್ಲ ಎಂದು ಪ್ರಿಯಾಂಕಾ ಆರೋಪಿಸಿದರು.
ಪಕ್ಷ ಎಲ್ಲಿ ನಿರ್ಧರಿಸುತ್ತದೆಯೋ ಆ ಕ್ಷೇತ್ರದಿಂದ ಸ್ಪರ್ಧಿಸುವುದಾಗಿ ಅವರು ತಿಳಿಸಿದರು.












Click it and Unblock the Notifications