ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ವೀರಶೈವ ಧರ್ಮಕ್ಕೆ ಜೈ ಎಂದ ಪ್ರಧಾನಿ ನರೇಂದ್ರ ಮೋದಿ? ನಾಳೆ ಧರ್ಮಗ್ರಂಥ ಬಿಡುಗಡೆ!

|
Google Oneindia Kannada News

Recommended Video

ವೀರಶೈವ ಧರ್ಮಗ್ರಂಥ ಬಿಡುಗಡೆ ಮಾಡಲಿರುವ ಪ್ರಧಾನಿ ಮೋದಿ | Oneindia Kannada

ಬೆಂಗಳೂರು, ಫೆ. 15: ಹಿಂದೆ ಮಾಜಿ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಪ್ರತ್ಯೇಕ ಲಿಂಗಾಯತ ಧರ್ಮದ ವಿಚಾರ ತೀವ್ರ ವಿವಾದಕ್ಕೆ ಈಡಾಗಿತ್ತು. ಆಗ ಪ್ರತ್ಯೇಕ ಲಿಂಗಾಯತ ಧರ್ಮ ಹೋರಾಟವನ್ನು ಬಿಜೆಪಿ ವಿರೋಧಿಸಿತ್ತು. ಇದೀಗ ವೀರಶೈವ ಧರ್ಮಗ್ರಂಥವೆಂದೆ ಕರೆಯಲಾಗುವ 'ಸಿದ್ದಾಂತ ಶಿಖಾಮಣಿ'ಯನ್ನು ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡುತ್ತಿರುವುದು ತೀವ್ರ ಕುತೂಹಲ ಮೂಡಿಸಿದೆ.

ನಾಳೆ ನಡೆಯುವ ಸಮಾರಂಭದಲ್ಲಿ ಭಾಗವಹಿಸಲು ಇಂದು ಸಂಜೆ 4 ಗಂಟೆಗೆ ಬೆಂಗಳೂರಿನಿಂದ ಉತ್ತರಪ್ರದೇಶದ ವಾರಾಣಸಿಗೆ ಸಿಎಂ ಬಿ.ಎಸ್. ಯಡಿಯೂರಪ್ಪ ತೆರಳಿದ್ದಾರೆ.

ಇಂದು ವಾರಾಣಸಿಯಲ್ಲಿಯೆ ವಾಸ್ತವ್ಯ ಮಾಡಲಿರುವ ಯಡಿಯೂರಪ್ಪ ಅವರು, ನಾಳೆ ಭಾನುವಾರ ವಾರಾಣಸಿಯಲ್ಲಿ ಶ್ರೀಜಗದ್ಗುರು ವಿಶ್ವಾರಾಧ್ಯ ಗುರುಕುಲದ ಶತಮಾನೋತ್ಸವ ಸಮಾರಂಭದಲ್ಲಿ ಭಾಗವಹಿಸಿಲಿದ್ದಾರೆ.

Modi to release Veerashaiva scripture Shiddanta Shikamani in Varanasi.

ವಾರಾಣಸಿಯಲ್ಲಿ ನಾಳೆ ಬೆಳಗ್ಗೆ 11ಕ್ಕೆ ನಡೆಯಲಿರುವ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಭಾಗವಹಿಸಲಿದ್ದಾರೆ. 18 ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಭಾಷೆಗಳಲ್ಲಿ ಭಾಷಾಂತರಗೊಂಡ ಸಿದ್ಧಾಂತ ಶಿಖಾಮಣಿ ಕೃತಿಯನ್ನು ಪ್ರಧನಿ ನರೇಂದ್ರ ಮೋದಿ ಬಿಡುಗಡೆ ಮಾಡಲಿದ್ದಾರೆ. ಸಿದ್ಧಾಂತ ಶಿಖಾಮಣಿ, ವೀರಶೈವ ಧರ್ಮದ ಧರ್ಮಗ್ರಂಥವಾಗಿದೆ. ಪ್ರಧಾನಿ ನರೇಂದ್ರ ಮೋದಿ ಮತ್ತು ಸಿಎಂ ಯಡಿಯೂರಪ್ಪ ಅವರು ಮತ್ತೆ ಒಂದೇ ವೇದಿಕೆಯಲ್ಲಿ ಕಾಣಿಸಿಕೊಳ್ಳಲಿದ್ದಾರೆ.

English summary
Prime Minister Narendra Modi to release Veerashaiva scripture Shiddanta Shikamani in Varanasi.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X