ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಪಂಚರಾಜ್ಯ ಚುನಾವಣೆ ಹೊಸ್ತಿಲಿನಲ್ಲೇ ಕಾಂಗ್ರೆಸ್‌ಗೆ ಕೈ ಕೊಡಲು ಅಣಿಯಾದ ಮತ್ತಷ್ಟು ನಾಯಕರು!?

|
Google Oneindia Kannada News

ನವದೆಹಲಿ, ಜನವರಿ 27: ಉತ್ತರ ಪ್ರದೇಶ ಸೇರಿದಂತೆ ಐದು ರಾಜ್ಯಗಳ ವಿಧಾನಸಭೆ ಚುನಾವಣೆ ಹೊಸ್ತಿಲಿನಲ್ಲಿ ಪಕ್ಷಾಂತರ ಪರ್ವ ಶುರುವಾಗಿದೆ. ಕಾಂಗ್ರೆಸ್ ಪಕ್ಷಕ್ಕೆ ಮತ್ತಷ್ಟು ನಾಯಕರು ಆಘಾತ ನೀಡಲು ತುದಿಗಾಲ ಮೇಲೆ ನಿಂತಿದ್ದು ಪಕ್ಷದಿಂದ ಹೊರ ಹೋಗಲಿದ್ದಾರೆ ಎಂದು ಮೂಲಗಳಿಂದ ತಿಳಿದು ಬಂದಿದೆ.

ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್ ತೊರೆದಿರುವ ಮಾಜಿ ಕೇಂದ್ರ ಸಚಿವ ಮತ್ತು ಪ್ರಧಾನ ಕಾರ್ಯದರ್ಶಿ ಆರ್‌ಪಿಎನ್ ಸಿಂಗ್ ಮತ್ತಷ್ಟು ನಾಯಕರನ್ನು ತಮ್ಮೊಂದಿಗೆ ಕರೆದುಕೊಂಡು ಹೋಗಲು ಪ್ಲ್ಯಾನ್ ಮಾಡುತ್ತಿದ್ದಾರೆ. ಕಾಂಗ್ರೆಸ್ ಪಕ್ಷದಲ್ಲಿ ಮೂಲೆಗುಂಪು ಆಗಿರುವ ನಾಯಕರ ಪಟ್ಟಿ ಮೇಲೆ ಕಣ್ಣಿಟ್ಟಿದ್ದಾರೆ. ಪಂಚರಾಜ್ಯಗಳ ಚುನಾವಣೆ ಸಂದರ್ಭದಲ್ಲಿ ಪಕ್ಷದ ಕಾರ್ಯಕ್ಷಮತೆ ಬಗ್ಗೆ ಕಾದು ನೋಡುತ್ತಿರುವ ಸ್ವಪಕ್ಷೀಯ ನಾಯಕರು ಫಲಿತಾಂಶದ ಮೇಲೆ ಲಕ್ಷ್ಯ ವಹಿಸಿದ್ದಾರೆ.

ಯುಪಿ: 89 ಅಭ್ಯರ್ಥಿಗಳ ಕಾಂಗ್ರೆಸ್ ಮೂರನೇ ಪಟ್ಟಿ ಬಿಡುಗಡೆಯುಪಿ: 89 ಅಭ್ಯರ್ಥಿಗಳ ಕಾಂಗ್ರೆಸ್ ಮೂರನೇ ಪಟ್ಟಿ ಬಿಡುಗಡೆ

"ಕಾಂಗ್ರೆಸ್ಸಿನ ಬಹುತೇಕ ನಾಯಕರು ಈಗಾಗಲೇ ಹಲವು ಪಕ್ಷಗಳೊಂದಿಗೆ ಸಂಪರ್ಕ ಸಾಧಿಸಿಕೊಂಡಿದ್ದಾರೆ. ಮುಂದಿನ ದಿನಗಳಲ್ಲಿ ಪಕ್ಷಾಂತರ ಪರ್ವ ಆರಂಭವಾಗುವುದನ್ನು ನಾವು ಎದುರು ನೋಡುತ್ತಿದ್ದೇವೆ. ಸದ್ಯ ಪಂಚ ರಾಜ್ಯಗಳ ಪೈಕಿ ಗೋವಾ, ಪಂಜಾಬ್ ಮತ್ತು ಉತ್ತರಾಖಂಡದಲ್ಲಿ ಕಾಂಗ್ರೆಸ್ ಗೆಲುವು ತೀರು ಅಗತ್ಯವಾಗಿದೆ. ಒಂದು ವೇಳೆ ಪಂಜಾಬಿನಲ್ಲಿ ಕಾಂಗ್ರೆಸ್ ಸೋಲು ಕಂಡರೆ ಪಕ್ಷಕ್ಕೆ ತೀವ್ರ ಹಿನ್ನಡೆ ಆಗಲಿದೆ," ಎಂದು ಪಕ್ಷದ ಹಿರಿಯ ನಾಯಕರೊಬ್ಬರು ಹೇಳಿದ್ದಾರೆ.

ರಾಹುಲ್, ಪ್ರಿಯಾಂಕಾ ಆಪ್ತರಿಂದಲೇ ಪಕ್ಷಾಂತರ

ರಾಹುಲ್, ಪ್ರಿಯಾಂಕಾ ಆಪ್ತರಿಂದಲೇ ಪಕ್ಷಾಂತರ

ಕಾಂಗ್ರೆಸ್ ಪಕ್ಷ ಈಗ ಬದಲಾಗಿದೆ. ಜನರ ಕಲ್ಯಾಣಕ್ಕಾಗಿ ಕೆಲಸ ಮಾಡಲು ನಾಯಕತ್ವದ ಕೊರತೆಯಿದೆ. ಈ ಬಗ್ಗೆ ಆರೋಪಿಸುತ್ತಿರುವ ಪಕ್ಷದ ಹಿರಿಯ ನಾಯಕರೇ ಕಾಂಗ್ರೆಸ್ಸಿನಿಂದ ವಿಮುಖರಾಗುತ್ತಿದ್ದಾರೆ. ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಆಪ್ತ ವಲಯದಲ್ಲಿ ಗುರುತಿಸಿಕೊಂಡಿರುವ ಕಾಂಗ್ರೆಸ್ ನಾಯಕರೇ ಪಕ್ಷವನ್ನು ತೊರೆದು ಬೇರೆ ಕಡೆಗೆ ಹೋಗುತ್ತಿದ್ದಾರೆ. ಪಕ್ಷದ ಹಿರಿಯ ನಾಯಕ ಗುಲಾಂ ನಬಿ ಆಜಾದ್, ಮತ್ತೊಬ್ಬ ಯುವ ನಾಯಕ ಮಿಲಿಂದ್ ದಿಯೋರಾ ಕೂಡ ತಮ್ಮ ಹಳಿ ಬದಲಾಯಿಸುವ ಸುಳಿವು ಸಿಕ್ಕಿದೆ. ಜಮ್ಮು ಮತ್ತು ಕಾಶ್ಮೀರದಲ್ಲಿ ಕೆಲಸ ಮಾಡುತ್ತಿರುವ ಗುಲಾಂ ನಬಿ ಆಜಾದ್, ಚುನಾವಣೆಗೆ ಮುಂಚಿತವಾಗಿ ಹೊಸ ಪಕ್ಷದ ಕಡೆಗೆ ವಾಲುವ ಸುದ್ದಿ ಹರಿದಾಡುತ್ತಿದೆ.

ಮನಸು ನೋಯಿಸಿದರೆ ಕಾಂಗ್ರೆಸ್ಸಿಗೆ ಬಾಯ್

ಮನಸು ನೋಯಿಸಿದರೆ ಕಾಂಗ್ರೆಸ್ಸಿಗೆ ಬಾಯ್

2022ರಲ್ಲಿ ಪಂಚರಾಜ್ಯಗಳಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಇದರ ಮುಂದಿನ ವರ್ಶದಲ್ಲೇ ಗುಜರಾತ್ ವಿಧಾನಸಭೆಗೆ ಚುನಾವಣೆ ನಡೆಯಲಿದ್ದು, ಅದಕ್ಕಾಗಿ ಈಗಿನಿಂದಲೇ ಕಾಂಗ್ರೆಸ್ಸಿನ ಹಲವು ನಾಯಕರು ಇತರೆ ಪಕ್ಷಗಳೊಂದಿಗೆ ಸಂಪರ್ಕ ಸಾಧಿಸಿಕೊಂಡಿದ್ದಾರೆ. ಭವಿಷ್ಯದಲ್ಲಿ ಕಾಂಗ್ರೆಸ್ ತಮ್ಮನ್ನು ಕಡೆಗಣಿಸಿದರೆ ಅಥವಾ ಮೂಲಗುಂಪು ಮಾಡಲು ಪ್ರಯತ್ನಿಸದರೆ ಚುನಾವಣೆ ಹೊಸ್ತಿಲಿನಲ್ಲೇ ಕೈ ಪಕ್ಷಕ್ಕೆ ಕೈ ಕೊಟ್ಟು ಹೋಗಲು ಎಲ್ಲ ರೀತಿ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ ಎಂದು ಮತ್ತೊಬ್ಬ ಕಾಂಗ್ರೆಸ್ ನಾಯಕರು ಹೇಳಿದ್ದಾರೆ.

ಬುಧವಾರ ಯುಪಿಯಲ್ಲಿ 3ನೇ ಕಾಂಗ್ರೆಸ್ ಅಭ್ಯರ್ಥಿ ಪಟ್ಟಿ

ಬುಧವಾರ ಯುಪಿಯಲ್ಲಿ 3ನೇ ಕಾಂಗ್ರೆಸ್ ಅಭ್ಯರ್ಥಿ ಪಟ್ಟಿ

ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ನೇತೃತ್ವದಲ್ಲಿ ಕಾಂಗ್ರೆಸ್‌ಗೆ ಸಂಪೂರ್ಣ ಬಲ ಬಂದಿದೆ. ಬುಧವಾರ ಪಕ್ಷವು ಅಭ್ಯರ್ಥಿಗಳ ಮೂರನೇ ಪಟ್ಟಿ ಬಿಡುಗಡೆ ಮಾಡಿದ್ದು, 89 ನಾಯಕರಿಗೆ ಟಿಕೆಟ್ ಘೋಷಿಸಲಾಗಿದೆ. ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್ ಈಗಾಗಲೇ 225 ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದೆ. ಮೊದಲ ಪಟ್ಟಿಯಲ್ಲಿ 125 ಅಭ್ಯರ್ಥಿಗಳು, ಎರಡನೇ ಪಟ್ಟಿಯಲ್ಲಿ 41 ಅಭ್ಯರ್ಥಿಗಳು ಹಾಗೂ ಮೂರನೇ ಪಟ್ಟಿಯಲ್ಲಿ 89 ಅಭ್ಯರ್ಥಿಗಳ ಹೆಸರನ್ನು ಅಂತಿಮಗೊಳಿಸಲಾಗಿದೆ. ಕಾಂಗ್ರೆಸ್ ಮೂರನೇ ಪಟ್ಟಿಯಲ್ಲಿ 37 ಮಹಿಳೆಯರಿಗೆ ಅವಕಾಶ ನೀಡಲಾಗಿದ್ದು, ಮೊದಲ ಪಟ್ಟಿಯಲ್ಲಿ 50 ಹಾಗೂ ಎರಡನೇ ಪಟ್ಟಿಯಲ್ಲಿ 16 ಮಹಿಳೆಯರಿಗೆ ಟಿಕೆಟ್ ನೀಡಲಾಗಿತ್ತು. ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್ ತನ್ನ ಅಭ್ಯರ್ಥಿಗಳ ಪಟ್ಟಿಯಲ್ಲಿ ಶೇ.40ರಷ್ಟು ಸ್ಥಾನಗಳನ್ನು ಮಹಿಳೆಯರಿಗೆ ಮೀಸಲು ಇರಿಸುವುದಾಗಿ ಪ್ರಿಯಾಂಕಾ ಗಾಂಧಿ ಈ ಮೊದಲೇ ಭರವಸೆ ನೀಡಿದ್ದರು.

ಕಾಂಗ್ರೆಸ್ಸಿನಲ್ಲಿ ಉಳಿಯುವವರ ಬಗ್ಗೆ ಅಜಯ್ ಕುಮಾರ್ ಲಲ್ಲು ಹೇಳಿಕೆ

ಕಾಂಗ್ರೆಸ್ಸಿನಲ್ಲಿ ಉಳಿಯುವವರ ಬಗ್ಗೆ ಅಜಯ್ ಕುಮಾರ್ ಲಲ್ಲು ಹೇಳಿಕೆ

ಮಾಜಿ ಕೇಂದ್ರ ಸಚಿವ ಆರ್ ಪಿ ಎನ್ ಸಿಂಗ್ ಕಾಂಗ್ರೆಸ್ ತೊರೆದಿರುವ ಬಗ್ಗೆ ಉತ್ತರ ಪ್ರದೇಶದ ಕಾಂಗ್ರೆಸ್ ಅಧ್ಯಕ್ಷ ಅಜಯ್ ಕುಮಾರ್ ಲಲ್ಲು ಪ್ರತಿಕ್ರಿಯೆ ನೀಡಿದ್ದಾರೆ. ಅವರು ರಾಜ-ಮಹಾರಾಜ', ನನ್ನಂತಹ ಬಡವರು ಕಾಂಗ್ರೆಸ್‌ನ ರಾಜ್ಯಾಧ್ಯಕ್ಷರಾಗಿರುವುದು ಅವರಿಗೆ ಇಷ್ಟವಾಗಲಿಲ್ಲ ಮತ್ತು ಬಹುಶಃ ಅವರು ಪಕ್ಷವನ್ನು ತ್ಯಜಿಸಲು ಇದೇ ಕಾರಣವಾಗಿದೆ. ಇದು ಹೊಸ ಕಾಂಗ್ರೆಸ್ ಪಕ್ಷವಾಗಿದ್ದು, ಜನರ ಪರ ಕೆಲಸ ಮಾಡುವವರು ಮಾತ್ರ ಪಕ್ಷದಲ್ಲಿ ಉಳಿಯುತ್ತಾರೆ ಹಾಗೂ ಬೆಳೆಯುತ್ತಾರೆ. ಉತ್ತರ ಪ್ರದೇಶದ ಸಾಮಾನ್ಯ ಜನರಿಗೆ ಸಂಬಂಧಿಸಿದ ಸಮಸ್ಯೆಗಳ ನಿವಾರಣೆಗಾಗಿ ನಡೆಸಿದ ಹೋರಾಟದಲ್ಲಿ ಸಾವಿರಾರು ಕಾರ್ಯಕರ್ತರು ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ವಾದ್ರಾ ಜೊತೆಗೆ ನಿಂತುಕೊಂಡರು. ಪೊಲೀಸರ ಲಾಠಿ ಏಟು ತಿಂದರು, ಜೈಲಿಗೆ ಹೋದರು. ನಾನು ಕೂಡ ಹಲವು ಬಾರಿ ಜೈಲು ಪಾಲಾಗಿದ್ದೇನೆ, ಆದರೆ, ಆರ್‌ಪಿಎನ್ ಸಿಂಗ್‌ ಯಾವ ಪ್ರತಿಭಟನೆಯಲ್ಲೂ ಕಾಣಿಸಿಕೊಂಡಿರಲಿಲ್ಲ ಎಂದು ಅಜಯ್ ಕುಮಾರ್ ಲಲ್ಲು ಕುಟುಕಿದ್ದಾರೆ.

ಉತ್ತರ ಪ್ರದೇಶದಲ್ಲಿ ಏಳು ಹಂತಗಳಲ್ಲಿ ಮತದಾನ

ಉತ್ತರ ಪ್ರದೇಶದಲ್ಲಿ ಏಳು ಹಂತಗಳಲ್ಲಿ ಮತದಾನ

ಉತ್ತರ ಪ್ರದೇಶದಲ್ಲಿ ಫೆಬ್ರವರಿ 10, ಫೆಬ್ರವರಿ 14, ಫೆಬ್ರವರಿ 20, ಫೆಬ್ರವರಿ 23, ಫೆಬ್ರವರಿ 27, ಮಾರ್ಚ್ 3 ಮತ್ತು ಮಾರ್ಚ್ 7ರಂದು ಒಟ್ಟು ಏಳು ಹಂತಗಳಲ್ಲಿ ಮತದಾನ ನಡೆಯಲಿದೆ. ಅಂತಿಮವಾಗಿ ಮಾರ್ಚ್ 10ರಂದು ಉತ್ತರ ಪ್ರದೇಶ ಸೇರಿದಂತೆ ಐದು ರಾಜ್ಯಗಳಲ್ಲಿ ನಡೆದ ವಿಧಾನಸಭೆ ಚುನಾವಣೆಯ ಫಲಿತಾಂಶ ಪ್ರಕಟವಾಗಲಿದೆ. ಈ ಬಾರಿ ವಿಧಾನಸಭೆ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ, ಅಖಿಲೇಶ್ ಯಾದವ್ ನೇತೃತ್ವದ ಸಮಾಜವಾದಿ ಪಕ್ಷ, ಕಾಂಗ್ರೆಸ್ ಮತ್ತು ಮಾಯಾವತಿ ನೇತೃತ್ವದ ಬಹುಜನ ಸಮಾಜವಾದಿ ಪಕ್ಷದ ನಡುವೆ ಜಿದ್ದಾಜಿದ್ದಿನ ಪೈಪೋಟಿ ನಡೆಯುತ್ತಿದೆ.

ಈ ಹಿಂದೆ 2017ರಲ್ಲಿ ಉತ್ತರ ಪ್ರದೇಶದಲ್ಲಿ 403 ವಿಧಾನಸಭೆಗಳಿಗೆ ನಡೆದ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ ಅತಿಹೆಚ್ಚು ಸ್ಥಾನಗಳನ್ನು ಗೆದ್ದು ಅಧಿಕಾರದ ಗದ್ದುಗೆ ಏರಿತ್ತು. ಒಟ್ಟು 403 ಕ್ಷೇತ್ರಗಳ ಪೈಕಿ ಬಿಜೆಪಿ 312 ಸ್ಥಾನಗಳನ್ನು ಗೆದ್ದಿತ್ತು. ಸಮಾಜವಾದಿ ಪಕ್ಷ 47 ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದರೆ, ಬಹುಜನ ಸಮಾಜವಾದಿ ಪಕ್ಷವು 19 ಕ್ಷೇತ್ರಗಳಲ್ಲಿ ಗೆಲುವಿನ ಬಾವುಟ ಹಾರಿಸಿತ್ತು. ರಾಷ್ಟ್ರೀಯ ಪಕ್ಷ ಕಾಂಗ್ರೆಸ್ ತೀವ್ರ ಹಿನ್ನಡೆ ಅನುಭವಿಸಿದ್ದು, ಕೇವಲ ಏಳು ಕ್ಷೇತ್ರಗಳಲ್ಲಿ ಮಾತ್ರ ಗೆಲುವು ಸಾಧಿಸುವಲ್ಲಿ ಯಶಸ್ವಿಯಾಗಿತ್ತು.

Recommended Video

ಮೈಕ್‌ ಆಫ್‌ ಆಗಿದೆ ಎಂದು ಕೆಟ್ಟ ಶಬ್ದದಿಂದ ಪತ್ರಕರ್ತನಿಗೆ ಬೈದ Joe Biden | Oneindia Kannada

English summary
More Congress Leaders Will exit from party ahead of Five state Assembly Election: Sources.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X