ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಸಿಎಂ ಯೋಗಿ ಸರ್ಕಾರದ ವಿರುದ್ಧ ತಿರುಗಿಬಿದ್ದ ಬಿಜೆಪಿ ಸಂಸದ ವರುಣ್ ಗಾಂಧಿ

|
Google Oneindia Kannada News

ಲಕ್ನೋ, ಅಕ್ಟೋಬರ್ 22: ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿ ಸಮಿತಿಯಿಂದ ವರುಣ್ ಗಾಂಧಿ ಮತ್ತು ಅವರ ತಾಯಿ ಮನೇಕಾ ಗಾಂಧಿಯವರನ್ನು ಕೈಬಿಡಲಾಗಿದೆ. ಇದರ ಬೆನ್ನಲ್ಲೇ ಬಿಜೆಪಿ ಮತ್ತು ಕೇಂದ್ರ ಸರ್ಕಾರದ ವಿರುದ್ಧ ವರುಣ್ ಗಾಂಧಿ ತಿರುಗಿ ಬೀಳುತ್ತಿದ್ದಾರೆ.

ಉತ್ತರಪ್ರದೇಶದ ಪಿಲಿಭಿತ್​ನ ಬಿಜೆಪಿ ಸಂಸದ ವರುಣ್​ ಗಾಂಧಿ ಇತ್ತೀಚಿಗೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಸರ್ಕಾರದ ವಿರುದ್ಧ ಹೆಚ್ಚಾಗಿ ಮಾತನಾಡುತ್ತಿದ್ದಾರೆ.

ಇತ್ತೀಚೆಗೆ ಉತ್ತರಪ್ರದೇಶದ ಲಖೀಂಪುರ ಖೇರಿಯಲ್ಲಿ ರೈತರ ಮೇಲೆ ನಡೆದ ಹಿಂಸಾಚಾರವನ್ನು ಖಂಡಿಸಿ, ರೈತರ ಪರ ಮಾತನಾಡಿದ್ದರು. ಈ ವೇಳೆ ರಾಜ್ಯ ಬಿಜೆಪಿ ಸರ್ಕಾರವನ್ನು ಪರೋಕ್ಷವಾಗಿಯೇ ವಿರೋಧಿಸಿದ್ದರು. ಇದೀಗ ಪಿಲಿಭಿತ್​ ಮತ್ತು ರಾಯ್‌ಬರೇಲಿಗಳಲ್ಲಿ ವಿಪರೀತ ಮಳೆ ಸುರಿಯುತ್ತಿದ್ದು, ಪ್ರವಾಹ ಪರಿಸ್ಥಿತಿ ಎದುರಾಗಿದೆ. ಇದರ ಬಗ್ಗೆಯೂ ಈಗ ವರುಣ್​ ಗಾಂಧಿ ರಾಜ್ಯ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ.

MP Varun Gandhi Slammed Again The Uttar Pradesh BJP Government

ಫಿಲಿಭಿತ್ ಮತ್ತು ರಾಯ್‌ಬರೇಲಿಗಳಲ್ಲಿ ಬಹುತೇಕ ತಗ್ಗು ಪ್ರದೇಶಗಳಲ್ಲಿ ನೀರು ತುಂಬಿ ನಿಂತಿದೆ. ಈ ವಿಪತ್ತು ಮುಗಿಯುವವರಿಗೆ ಯಾರೂ ಹಸಿವಿನಿಂದ ಇರಬಾರದು ಎಂದು ಆಹಾರ ಪದಾರ್ಥಗಳನ್ನು ನೀಡಲಾಗುತ್ತಿದೆ. ಸಂಕಷ್ಟದಲ್ಲಿರುವ ಸಾಮಾನ್ಯ ಜನರು ವ್ಯವಸ್ಥೆಯಿಂದ ಸಹಾಯವನ್ನು ಬಯಸುತ್ತಾರೆ. ಆದರೆ ಅವರು ತಮ್ಮ ರಕ್ಷಣೆಗೆ ತಾವೇ ಗುದ್ದಾಡುವ ಪರಿಸ್ಥಿತಿ ಇದೆ. ಹೀಗೆ ವೈಯಕ್ತಿಕವಾಗಿಯೇ ಎಲ್ಲವನ್ನೂ ಮಾಡಿಕೊಳ್ಳಬೇಕು ಎಂದಾದರೆ ಆಡಳಿತ ಇರುವುದು ಯಾತಕ್ಕೆ? ಅದರ ಅರ್ಥವೇನು? ಎಂದು ಬಿಜೆಪಿ ಸಂಸದ ವರುಣ್​ ಗಾಂಧಿ ಟ್ವೀಟ್​ ಮಾಡಿದ್ದಾರೆ.

MP Varun Gandhi Slammed Again The Uttar Pradesh BJP Government

ಎರಡೂ ಜಿಲ್ಲೆಗಳಲ್ಲಿ ವಿಪರೀತ ಮಳೆಯಿಂದಾಗಿ ಮೂವರು ಮೃತಪಟ್ಟಿದ್ದಾರೆ. 100ಕ್ಕೂ ಹೆಚ್ಚು ಜನರು ಸಂಕಷ್ಟಕ್ಕೀಡಾಗಿದ್ದಾರೆ. ಶಾರದಾ ಮತ್ತು ದೇವೋಹ ನದಿಗಳು ತುಂಬಿ ಹರಿಯುತ್ತಿದ್ದು, ನದಿ ದಡದ ಜನರ ಸ್ಥಳಾಂತರವಾಗಿದೆ. ಈ ಸಮಯದಲ್ಲೇ ವರುಣ್​ ಗಾಂಧಿ ರಾಜ್ಯ ಆಡಳಿತವನ್ನು ಟೀಕಿಸಿ ಟ್ವೀಟ್​ ಮಾಡಿದ್ದಾರೆ. ಪ್ರವಾಹದಿಂದ ಸಂಕಷ್ಟಕ್ಕೀಡಾದ ಜನರಿಗೆ ಪರಿಹಾರ ನೀಡಲು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​​ರನ್ನು ಆಗ್ರಹಿಸಿದ್ದಾರೆ.

ಲಖಿಂಪುರ ಖೇರಿ ಹಿಂಸಾಚಾರಕ್ಕೆ ಸಂಬಂಧಪಟ್ಟಂತೆ ವಿಡಿಯೋ ಶೇರ್​ ಮಾಡಿಕೊಂಡು ಸರ್ಕಾರದ ವಿರುದ್ಧ ವರುಣ್​ ಗಾಂಧಿ ಎರಡು ಟ್ವೀಟ್​ ಮಾಡಿದ್ದರು. ಅದಾದ ನಂತರ ವರುಣ್​ ಗಾಂಧಿ ಮತ್ತು ಅವರ ತಾಯಿ ಮನೇಕಾ ಗಾಂಧಿಯವರನ್ನು ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸದಸ್ಯರ ಪಟ್ಟಿಯಿಂದ ಕೈಬಿಡಲಾಗಿದೆ.

ಉತ್ತರಪ್ರದೇಶದಲ್ಲಿ ಮುಂದಿನ ವರ್ಷ ವಿಧಾನಸಭೆ ಚುನಾವಣೆ ನಡೆಯಲಿದೆ. ಭಾರತೀಯ ಜನತಾ ಪಕ್ಷದ ಫೈರ್ ಬ್ರ್ಯಾಂಡ್ ಎಂದು ಕರೆಸಿಕೊಳ್ಳುತ್ತಿದ್ದ ವರುಣ್ ಗಾಂಧಿ ಪದೇಪದೇ ಬಿಜೆಪಿ ಸರ್ಕಾರದ ವಿರುದ್ಧ ಮಾತನಾಡುತ್ತಿರುವುದು ಅನುಮಾನ ಹುಟ್ಟಿಸಿದೆ.

MP Varun Gandhi Slammed Again The Uttar Pradesh BJP Government


ಕೃಷಿ ಕಾಯ್ದೆಗಳನ್ನು ವಾಪಸ್ ಪಡೆದುಕೊಳ್ಳುವಂತೆ ಒತ್ತಾಯ
ಉತ್ತರ ಪ್ರದೇಶದ ಲಖಿಂಪುರ್ ಖೇರಿ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತ ರೈತರಿಗೆ ನ್ಯಾಯ ಒದಗಿಸುವಂತೆ ಆಗ್ರಹಿಸಿದ್ದ ವರುಣ್ ಗಾಂಧಿ, ರೈತರ ಕಣ್ಣು ಕೆಂಪಾಗಿಸಿರುವ ವಿವಾದಿತ ಕೃಷಿ ಕಾಯ್ದೆಗಳನ್ನು ವಾಪಸ್ ಪಡೆದುಕೊಳ್ಳುವಂತೆ ಒತ್ತಾಯಿಸಿದ್ದರು. ಆ ಮೂಲಕ ರೈತರ ವಿಷಯದಲ್ಲಿ ತಮ್ಮ ನಿಲುವು ಬದಲಿಸುವ ಪ್ರಶ್ನೆಯೇ ಇಲ್ಲ ಎಂಬ ಸಂದೇಶವನ್ನು ತಮ್ಮದೇ ಪಕ್ಷದ ಕೇಂದ್ರ ಸರ್ಕಾರಕ್ಕೆ ರವಾನಿಸಿದ್ದಾರೆ.

ಉತ್ತರ ಪ್ರದೇಶ ಲಖೀಂಪುರ್ ಖೇರಿಯಲ್ಲಿ ನಡೆದ ರೈತರ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ರೈತರ ಪರವಾಗಿ ಮಾತನಾಡಿದ ಏಕೈಕ ಬಿಜೆಪಿ ನಾಯಕ ವರುಣ್ ಗಾಂಧಿ. ರೈತರಿಗೆ ಬೆಂಬಲವಾಗಿ ಮಾತನಾಡಿದ್ದು ಅಲ್ಲದೇ, ಮೃತ ರೈತರ ಕುಟುಂಬಕ್ಕೆ ತಲಾ 1 ಕೋಟಿ ರೂಪಾಯಿ ಪರಿಹಾರ ಘೋಷಿಸಬೇಕು. ಹಿಂಸಾಚಾರ ಪ್ರಕರಣವನ್ನು ಸಿಬಿಐಗೆ ವಹಿಸಬೇಕು ಎಂದು ಒತ್ತಾಯಿಸಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ಗೆ ವರುಣ್ ಗಾಂಧಿ ಪತ್ರ ಬರೆದಿದ್ದರು.

ಕೇಂದ್ರ ಸರ್ಕಾರ ಜಾರಿಗೊಳಿಸಲು ಮುಂದಾಗಿರುವ ವಿವಾದಿತ ರೈತರ ಉತ್ಪಾದನೆ ವ್ಯಾಪಾರ ಮತ್ತು ವಾಣಿಜ್ಯ (ಪ್ರಚಾರ ಮತ್ತು ಸೌಲಭ್ಯ) ಕಾಯ್ದೆ, ಬೆಲೆ ಭರವಸೆ ಮತ್ತು ಕೃಷಿ ಸೇವೆಗಳ ಕಾಯ್ದೆ (ಸಬಲೀಕರಣ ಮತ್ತು ಸಂರಕ್ಷಣೆ) ಒಪ್ಪಂದ ಹಾಗೂ ಅಗತ್ಯ ಸರಕುಗಳ (ತಿದ್ದುಪಡಿ) ಕಾಯ್ದೆಗಳನ್ನು ವಾಪಸ್ ಪಡೆಯುವಂತೆ ಸುದೀರ್ಘ ಅವಧಿಯಿಂದ ಪ್ರತಿಭಟನೆ ನಡೆಸುತ್ತಿದ್ದಾರೆ.

ಕಳೆದ 2020ರ ನ.26ರಿಂದ ನವದೆಹಲಿಯ ಸಿಂಘು ಗಡಿ, ಟಿಕ್ರಿ ಗಡಿ ಮತ್ತು ಘಾಜಿಪುರ್ ಗಡಿ ಪ್ರದೇಶಗಳಲ್ಲಿ ರೈತರು ನಿರಂತರವಾಗಿ ಪ್ರತಿಭಟನೆ ನಡೆಸುತ್ತಿದ್ದಾರೆ. ಪಂಜಾಬ್, ಹರಿಯಾಣ, ಮತ್ತು ಉತ್ತರ ಪ್ರದೇಶದ ಸಾವಿರಾರು ರೈತರು ಕೃಷಿ ಕಾಯ್ದೆಗಳ ವಿರುದ್ಧ ಹೋರಾಟ ನಡೆಸುತ್ತಿದ್ದಾರೆ. ರಾಷ್ಟ್ರ ರಾಜಧಾನಿಯ ಮೂರು ಗಡಿಗಳಲ್ಲಿ ನಡೆಯುತ್ತಿರುವ ಹೋರಾಟಕ್ಕೆ ಬಿಜೆಪಿ ನಾಯಕ ವರುಣ್ ಗಾಂಧಿ ಕೂಡ ಬೆಂಬಲ ವ್ಯಕ್ತಪಡಿಸಿದ್ದರು.

Recommended Video

India vs Pakistan ಪಂದ್ಯದ ಬಗ್ಗೆ ಯಾರು ಏನು ಹೇಳಿದರು | Oneindia Kannada

English summary
Varun Gandhi has urged Chief Minister Yogi Adityanath to provide relief to people affected by floods in Uttar Pradesh.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X