ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಉತ್ತರಪ್ರದೇಶದ ಹಳ್ಳಿಯಲ್ಲಿ ನಿಗೂಢ ಸ್ಪೋಟ: ಕಟ್ಟಡ ಕುಸಿದು 7 ಸಾವು

|
Google Oneindia Kannada News

ಲಕ್ನೋ, ಜೂನ್ 2: ಉತ್ತರ ಪ್ರದೇಶದ ಗೊಂಡಾ ಜಿಲ್ಲೆಯ ಹಳ್ಳಿಯೊಂದರಲ್ಲಿ ಮಂಗಳವಾರ ರಾತ್ರಿ ನಿಗೂಢ ಸ್ಪೋಟ ಸಂಭವಿಸಿದ್ದು ಏಳು ಜನರ ಸಾವಿಗೆ ಕಾರಣವಾಗಿದೆ. ಸ್ಪೋಟದ ತೀವ್ರತೆಗೆ ಎರಡು ಮಹಡಿಯ ಕಟ್ಟಡವೊಂದು ಕುಸಿದು ಬಿದ್ದು ಈ ದುರಂತ ನಡೆದಿದೆ. ಮೃತಪಟ್ಟವರಲ್ಲಿ ಮೂವರು 5 ರಿಂದ 12 ವಯಸ್ಸಿನ ಮಕ್ಕಳಾಗಿದ್ದಾರೆ. ಏಳು ಮಂದಿಗೆ ಗಂಭೀರ ಪ್ರಮಾಣದ ಗಾಯಗಳಾಗಿದೆ.

ಸದ್ಯ ಪೊಲೀಸರು ಸ್ಪೋಟಕ್ಕೆ ಕಾರಣವೇನೆಂದು ಪತ್ತೆಹಚ್ಚುವ ಕಾರ್ಯದಲ್ಲಿ ತೊಡಗಿದ್ದಾರೆ. ಆರಂಭಿಕ ತನಿಖೆಯಲ್ಲಿ ಎಲ್‌ಪಿಜಿ ಸಿಲಿಂಡರ್ ಸ್ಪೋಟಗೊಂಡಿರುವುದು ಘಟನೆಗೆ ಕಾರಣವಾಗಿರಬಹುದು ಎಂದು ಅಂದಾಜಿಸಲಾಗಿದೆ. ನಿಖರ ಕಾರಣವನ್ನು ಕಂಡುಹಿಡಿಯಲು ಹೆಚ್ಚಿನ ತನಿಖೆಯನ್ನು ನಡೆಸಲಾಗುತ್ತಿದೆ.

ಉತ್ತರ ಪ್ರದೇಶದಲ್ಲಿ ಕೊರೊನಾ ರೋಗಿ ದೇಹವನ್ನು ನದಿಗೆ ಎಸೆದ ಇಬ್ಬರ ಬಂಧನಉತ್ತರ ಪ್ರದೇಶದಲ್ಲಿ ಕೊರೊನಾ ರೋಗಿ ದೇಹವನ್ನು ನದಿಗೆ ಎಸೆದ ಇಬ್ಬರ ಬಂಧನ

ಈ ಘಟನೆಯ ಬಗ್ಗೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಪ್ರತಿಕ್ರಿಯೆ ನೀಡಿದ್ದು ಘಟನೆಗೆ ಬೇಸರವನ್ನು ವ್ಯಕ್ತಪಡಿಸಿದ್ದಾರೆ. ಗಾಯಗೊಂಡವರಿಗೆ ಸೂಕ್ತ ಚಿಕಿತ್ಸೆಯನ್ನು ನೀಡುವಂತೆ ಮತ್ತು ಮೃತಪಟ್ಟವರ ಕುಟುಂಬಕ್ಕೆ ನೆರವಾಗುವಂತೆ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಸ್ಪೋಟಕ್ಕೆ ಸ್ಪಷ್ಟಕಾರಣವನ್ನು ಪತ್ತೆ ಹಚ್ಚಲು ಸಮಗ್ರ ತನಿಖೆ ನಡೆಸುವಂತೆಯೂ ತನಿಖಾಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.

Mysterious blast in Uttar Pradesh Village, 7 people died

ಗೊಂಡಾ ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿ ಸಂತೋಷ್ ಕುಮಾರ್ ಮಿಶ್ರಾ ಘಟನೆ ಬಗ್ಗೆ ಮಾಹಿತಿಗಳನ್ನು ನೀಡಿದ್ದು ವಾಜೀರ್‌ಗಂಜ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿರುವ ತಥೆರ್ಕಾಪುರ್ವಾ ಪ್ರದೇಶದಲ್ಲಿ ಈ ಘಟನೆ ನಡೆದಿದೆ ಎಂದು ತಿಳಿಸಿದ್ದಾರೆ.

ಈ ಸ್ಪೋಟದ ಶಬ್ಧಕ್ಕೆ ಸ್ಥಳೀಯರು ಬೆಚ್ಚಿ ಮನೆಹಿಂದ ಹೊರಗೆ ಓಡಿ ಬಂದಿದ್ದಾರೆ. ನಂತರ ಕುಸಿದು ಬಿದ್ದ ಕಟ್ಟಡದ ಕೆಳಗೆ ಸಿಲುಕಿದ ಜನರನ್ನು ರಕ್ಷಣೆಗೆ ಮುಂದಾಗಿದ್ದು ಬಳಿಕ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಯಲ್ಲಿ ಏಳು ಮಂದಿ ಮೃತಪಟ್ಟಿದ್ದಾರೆ ಎಂದು ಘೋಷಿಸಲಾಗಿದ್ದು ಏಳು ಮಂದಿಗೆ ಗಂಭೀರ ಗಾಯಗಳಾಗಿದೆ ಎಂದು ಸಂತೋಷ್ ಕುಮಾರ್ ಮಿಶ್ರಾ ಮಾಹಿತಿ ನೀಡಿದ್ದಾರೆ. ವಿಧಿವಿಜ್ಞಾನ ತಜ್ಞರು ಹಾಗೂ ಬಾಂಬ್ ಸ್ಕ್ವಾಡ್‌ಗೂ ಘಟನೆಯ ಬಗ್ಗೆ ಮಾಹಿತಿ ನೀಡಲಾಗಿದೆ. ಶೀಘ್ರದಲ್ಲಿ ಆಗಮಿಸಿ ಪರೀಕ್ಷೆಯನ್ನು ನಡೆಸಿ ವರದಿ ನೀಡಲಿದ್ದಾರೆ ಎಂದು ಎಸ್‌ಪಿ ತಿಳಿಸಿದ್ದಾರೆ.

English summary
Mysterious blast in Uttar Pradesh Village, 7 people killed and seven others were seriously injured in a building collapse.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X