1.25 ಕೋಟಿ ಉದ್ಯೋಗ ಯೋಜನೆಗೆ ಚಾಲನೆ ನೀಡಿದ ಪ್ರಧಾನಿ ಮೋದಿ
ಲಕ್ನೌ, ಜೂನ್ 26: ಲಾಕ್ಡೌನ್ನಿಂದ ಕೆಲಸ ಕಳೆದುಕೊಂಡಿರುವ ಲಕ್ಷಾಂತರ ಜನರಿಗೆ ಉದ್ಯೋಗವಕಾಶ ಕಲ್ಪಿಸುವ ಉದ್ದೇಶದಿಂದ 'ಆತ್ಮ ನಿರ್ಭರ್ ಉತ್ತರ ಪ್ರದೇಶ ರೋಜ್ಗರ್ ಅಭಿಯಾನ್'ಗೆ ಇಂದು ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಿದರು.
Recommended Video
ಶುಕ್ರವಾರ ಬೆಳಿಗ್ಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಮೋದಿ ಉದ್ಘಾಟನೆ ಮಾಡಿದರು. ಈ ವೇಳೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸಹ ಉಪಸ್ಥಿತರಿದ್ದರು.
Prime Minister Narendra Modi launches ‘Atma Nirbhar Uttar Pradesh Rojgar Abhiyan' through video-conference in the presence of Chief Minister Yogi Adityanath pic.twitter.com/21x7BrAeia
— ANI UP (@ANINewsUP) June 26, 2020
ಕೊರೊನಾ ವೈರಸ್ ಲಾಕ್ಡೌನ್ನಿಂದ ಕೆಲಸ ಕಳೆದುಕೊಂಡ ಹಾಗೂ ಇತರೆ ಪ್ರಮುಖ ನಗರಗಳಿಂದ ಉತ್ತರ ಪ್ರದೇಶಕ್ಕೆ ಹಿಂತಿರುಗಿದ ಕಾರ್ಮಿಕರನ್ನು ಒಳಗೊಂಡಂತೆ 125 ದಿನದಲ್ಲಿ ಸುಮಾರು 1.25 ಕೋಟಿ ಕಾರ್ಮಿಕರಿಗೆ ಉದ್ಯೋಗ ಕಲ್ಪಿಸುವ ಯೋಜನೆ ಇದಾಗಿದೆ.

ಲಾಕ್ಡೌನ್ ಸಮಯದಲ್ಲಿ ಸುಮಾರು 30 ಲಕ್ಷ ಕಾರ್ಮಿಕರು ಉತ್ತರ ಪ್ರದೇಶಕ್ಕೆ ಹಿಂತಿರುಗಿದ್ದಾರೆ ಎಂಬ ಮಾಹಿತಿ ಇದೆ. ಆತ್ಮ ನಿರ್ಭರ್ ಉತ್ತರ ಪ್ರದೇಶ ರೋಜ್ಗರ್ ಅಭಿಯಾನ್ ಅಡಿಯಲ್ಲಿ ಉತ್ತರ ಪ್ರದೇಶದ 31 ಜಿಲ್ಲೆಗಳು ಒಳಗೊಂಡಿದ್ದು, ಎಲ್ಲರಿಗೂ ಕೆಲಸ ಒದಗಿಸುವ ಪ್ರಯತ್ನ ಮಾಡಲಾಗುವುದು.
ಆತ್ಮನಿರ್ಭರ್ ಯುಪಿ ರೋಜರ್ ಅಭಿಯಾನ್ ಅಡಿ ಉದ್ಯೋಗ ಒದಗಿಸುವುದು, ಸ್ಥಳೀಯ ಉದ್ಯಮಶೀಲತೆಯನ್ನು ಉತ್ತೇಜಿಸುವುದು ಮತ್ತು ಕೈಗಾರಿಕಾ ಸಂಘಗಳು ಮತ್ತು ಇತರ ಸಂಸ್ಥೆಗಳೊಂದಿಗೆ ಸಹಭಾಗಿತ್ವವನ್ನು ಸೃಷ್ಟಿಸಿ ಉದ್ಯೋಗಾವಕಾಶಗಳನ್ನು ಸೃಷ್ಟಿಸುವತ್ತ ಗಮನಹರಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಅಂದ್ಹಾಗೆ, ಆತ್ಮ ನಿರ್ಭರ್ ಉತ್ತರ ಪ್ರದೇಶ ರೋಜ್ಗರ್ ಅಭಿಯಾನ್ ಯೋಜನೆಯೂ ಜೂನ್ 20 ರಂದು ಪ್ರಧಾನಿ ಪ್ರಾರಂಭಿಸಿದ 'ಗರಿಬ್ ಕಲ್ಯಾಣ್ ರೋಜರ್ ಅಭಿಯಾನ'ದ ಭಾಗವಾಗಿ ಕಾರ್ಯನಿರ್ವಹಿಸಲಿದೆ. ದೇಶದ ಆರು ರಾಜ್ಯಗಳ 116 ಜಿಲ್ಲೆಗಳಿಗೆ ಈ ಯೋಜನೆ ವಿಸ್ತರಿಸಲಾಗಿದೆ.
-
ಬೆಂಗಳೂರು ನಾಯಂಡಳ್ಳಿಯಲ್ಲಿ ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಕಂದಮ್ಮ -
SSLC Hindi: ಅಂಕ ಬದಲು ಗ್ರೇಡಿಂಗ್ ವಿರೋಧಿಸಿ ಅರ್ಜಿ ಸಲ್ಲಿಸಿದ ಅರ್ಜಿದಾರರಿಗೆ 1 ಲಕ್ಷ ರೂ. ದಂಡ: ಕರವೇ ಹೇಳಿದ್ದೇನು -
Bengaluru: ಬೆಂಗಳೂರು ನಗರದಲ್ಲಿ ಸ್ವಿಗ್ಗಿ, ಜೊಮ್ಯಾಟೋ ಡೆಲಿವರಿ ಬಾಯ್ಸ್ಗೆ ಸಂಕಷ್ಟ, ಅಮಾನವೀಯ ಲಿಫ್ಟ್ ಸಂಸ್ಕೃತಿ -
ಚಿಕ್ಕಮಗಳೂರಲ್ಲಿ ನಾಪತ್ತೆಯಾಗಿದ್ದ ಕೇರಳದ ಬಾಲಕಿ ಶ್ರಿನಂದಾ ಸಾವು: 2 ಸಾವಿರ ಅಡಿ ಪ್ರಪಾತದಲ್ಲಿ ಶವ ಪತ್ತೆ -
Copra: ತಿಪಟೂರು ಎಪಿಎಂಸಿ ಮಾರುಕಟ್ಟೆಯಲ್ಲಿ ಮತ್ತೆ ದಾಖಲೆ ಬೆಲೆಗೆ ಮಾರಾಟವಾದ ಕೊಬ್ಬರಿ: ನಿರ್ಮಾಣವಾಯ್ತು ಹೊಸ ಇತಿಹಾಸ -
Mona Lisa: ಮಹಾಕುಂಭ ಮೇಳದ ಫೇಮಸ್ ಮೊನಾಲಿಸಾ ಪತಿಗೆ ಕಾನೂನು ಸಂಕಷ್ಟ: ಫರ್ಮಾನ್ ಖಾನ್ ಮೇಲೆ ಪೋಕ್ಸೋ ಪ್ರಕರಣ -
2nd PUC: ಬೆಂಗಳೂರು - ಪಿಯುಸಿಯಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ 260 ವಿದ್ಯಾರ್ಥಿಗಳಿಗೆ 35,000 ರೂ. -
RBI New Rule: ಇನ್ಮುಂದೆ ಆನ್ಲೈನ್ ವಹಿವಾಟಿನಲ್ಲಿ ದೊಡ್ಡ ಬದಲಾವಣೆ: 10,000 ರೂ. ಹಣ ವರ್ಗಾವಣೆಗೂ ಹೊಸ ನಿಯಮ -
Gold Rate April 10: ಚಿನ್ನ - ಬೆಳ್ಳಿ ಬೆಲೆಯಲ್ಲಿ ಅಚ್ಚರಿಯ ಬೆಳವಣಿಗೆ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
ದ್ವಿತೀಯ PUC ರಿಪೀಟರ್ಸ್ ಗಮನಕ್ಕೆ: ತಾಂತ್ರಿಕ ದೋಷ ಸರಿಪಡಿಸಿ ಪರಿಷ್ಕೃತ ಫಲಿತಾಂಶ ಪ್ರಕಟಿಸಿದ ಮಂಡಳಿ -
ಸಾಮಾಜಿಕ ಜಾಲತಾಣದ ಕರೆಗೆ ಓಗೊಟ್ಟ ಹೆಚ್.ಡಿ.ಕುಮಾರಸ್ವಾಮಿ: ನಂಜನಗೂಡಿನ ಹುಲ್ಲಳ್ಳಿಯ ನೊಂದ ಕುಟುಂಬಕ್ಕೆ ಅಭಯ -
ಡಿವಿಜಿ ಒಡನಾಡಿ,ರಾಷ್ಟ್ರೋತ್ಥಾನದ ಮಾಜಿ ಅಧ್ಯಕ್ಷ ಎಸ್ಆರ್ ರಾಮಸ್ವಾಮಿ ನಿಧನ












Click it and Unblock the Notifications