ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

1.25 ಕೋಟಿ ಉದ್ಯೋಗ ಯೋಜನೆಗೆ ಚಾಲನೆ ನೀಡಿದ ಪ್ರಧಾನಿ ಮೋದಿ

|
Google Oneindia Kannada News

ಲಕ್ನೌ, ಜೂನ್ 26: ಲಾಕ್‌ಡೌನ್‌ನಿಂದ ಕೆಲಸ ಕಳೆದುಕೊಂಡಿರುವ ಲಕ್ಷಾಂತರ ಜನರಿಗೆ ಉದ್ಯೋಗವಕಾಶ ಕಲ್ಪಿಸುವ ಉದ್ದೇಶದಿಂದ 'ಆತ್ಮ ನಿರ್ಭರ್ ಉತ್ತರ ಪ್ರದೇಶ ರೋಜ್ಗರ್ ಅಭಿಯಾನ್'ಗೆ ಇಂದು ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಿದರು.

Recommended Video

ನಾನು ಇಂದಿರಾಗಾಂಧಿ ಮೊಮ್ಮೊಗಳು ಯಾವ ಕ್ರಮ ಬೇಕಾದ್ರು ಕೈಗೊಳ್ಳಿ | Priyanka Gandhi | Oneindia Kannada

ಶುಕ್ರವಾರ ಬೆಳಿಗ್ಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಮೋದಿ ಉದ್ಘಾಟನೆ ಮಾಡಿದರು. ಈ ವೇಳೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸಹ ಉಪಸ್ಥಿತರಿದ್ದರು.

ಚೀನಾಗೆ ತಕ್ಕ ಪಾಠ: ಭಾರತೀಯರಿಗೆ ಸುಳ್ಳು ಹೇಳಿದರಾ ಪ್ರಧಾನಿ ಮೋದಿ?ಚೀನಾಗೆ ತಕ್ಕ ಪಾಠ: ಭಾರತೀಯರಿಗೆ ಸುಳ್ಳು ಹೇಳಿದರಾ ಪ್ರಧಾನಿ ಮೋದಿ?

ಕೊರೊನಾ ವೈರಸ್ ಲಾಕ್‌ಡೌನ್‌ನಿಂದ ಕೆಲಸ ಕಳೆದುಕೊಂಡ ಹಾಗೂ ಇತರೆ ಪ್ರಮುಖ ನಗರಗಳಿಂದ ಉತ್ತರ ಪ್ರದೇಶಕ್ಕೆ ಹಿಂತಿರುಗಿದ ಕಾರ್ಮಿಕರನ್ನು ಒಳಗೊಂಡಂತೆ 125 ದಿನದಲ್ಲಿ ಸುಮಾರು 1.25 ಕೋಟಿ ಕಾರ್ಮಿಕರಿಗೆ ಉದ್ಯೋಗ ಕಲ್ಪಿಸುವ ಯೋಜನೆ ಇದಾಗಿದೆ.

Narendra Modi launches Atma Nirbhar Uttar Pradesh Rozgar Abhiyan

ಲಾಕ್‌ಡೌನ್‌ ಸಮಯದಲ್ಲಿ ಸುಮಾರು 30 ಲಕ್ಷ ಕಾರ್ಮಿಕರು ಉತ್ತರ ಪ್ರದೇಶಕ್ಕೆ ಹಿಂತಿರುಗಿದ್ದಾರೆ ಎಂಬ ಮಾಹಿತಿ ಇದೆ. ಆತ್ಮ ನಿರ್ಭರ್ ಉತ್ತರ ಪ್ರದೇಶ ರೋಜ್ಗರ್ ಅಭಿಯಾನ್ ಅಡಿಯಲ್ಲಿ ಉತ್ತರ ಪ್ರದೇಶದ 31 ಜಿಲ್ಲೆಗಳು ಒಳಗೊಂಡಿದ್ದು, ಎಲ್ಲರಿಗೂ ಕೆಲಸ ಒದಗಿಸುವ ಪ್ರಯತ್ನ ಮಾಡಲಾಗುವುದು.

ಆತ್ಮನಿರ್ಭರ್ ಯುಪಿ ರೋಜರ್ ಅಭಿಯಾನ್ ಅಡಿ ಉದ್ಯೋಗ ಒದಗಿಸುವುದು, ಸ್ಥಳೀಯ ಉದ್ಯಮಶೀಲತೆಯನ್ನು ಉತ್ತೇಜಿಸುವುದು ಮತ್ತು ಕೈಗಾರಿಕಾ ಸಂಘಗಳು ಮತ್ತು ಇತರ ಸಂಸ್ಥೆಗಳೊಂದಿಗೆ ಸಹಭಾಗಿತ್ವವನ್ನು ಸೃಷ್ಟಿಸಿ ಉದ್ಯೋಗಾವಕಾಶಗಳನ್ನು ಸೃಷ್ಟಿಸುವತ್ತ ಗಮನಹರಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಅಂದ್ಹಾಗೆ, ಆತ್ಮ ನಿರ್ಭರ್ ಉತ್ತರ ಪ್ರದೇಶ ರೋಜ್ಗರ್ ಅಭಿಯಾನ್ ಯೋಜನೆಯೂ ಜೂನ್ 20 ರಂದು ಪ್ರಧಾನಿ ಪ್ರಾರಂಭಿಸಿದ 'ಗರಿಬ್ ಕಲ್ಯಾಣ್ ರೋಜರ್ ಅಭಿಯಾನ'ದ ಭಾಗವಾಗಿ ಕಾರ್ಯನಿರ್ವಹಿಸಲಿದೆ. ದೇಶದ ಆರು ರಾಜ್ಯಗಳ 116 ಜಿಲ್ಲೆಗಳಿಗೆ ಈ ಯೋಜನೆ ವಿಸ್ತರಿಸಲಾಗಿದೆ.

English summary
Prime Minister Narendra Modi along with Uttar Pradesh CM Yogi Adityanath launches 'Atma Nirbhar Uttar Pradesh Rozgar Abhiyan'.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X