Get Updates
Get notified of breaking news, exclusive insights, and must-see stories!

ಯುಪಿ ಮಹಿಳೆಯರಿಗಾಗಿ ಮಾಡಿದ ಕಾರ್ಯ ಇಡೀ ದೇಶ ಗಮನಿಸು‌ತ್ತಿದೆ: 2 ಲಕ್ಷ ಮಹಿಳೆಯರ ಸಮ್ಮುಖದಲ್ಲಿ ಪ್ರಧಾನಿ

ಲಕ್ನೋ, ಡಿಸೆಂಬರ್‌ 21: ಪ್ರಧಾನಮಂತ್ರಿ ನರೇಂದ್ರ ಮೋದಿ ಇಂದು ಪ್ರಯಾಗ್‌ರಾಜ್‌ನಲ್ಲಿ ಸುಮಾರು 2 ಲಕ್ಷ ಮಹಿಳೆಯರು ಭಾಗವಹಿಸಿಲಿರುವ ಒಂದು ವಿನೂತನ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದು, ಹಲವು ಯೋಜನೆಗಳಿಗೆ ಚಾಲನೆ ನೀಡಿದ್ದಾರೆ. ಈ ಬಳಿಕ ಮಾತನಾಡಿದ ಪ್ರಧಾನ ಮಂತ್ರಿ ನರೇದ್ರ ಮೋದಿ, "ಮಹಿಳೆಯರ ಸಬಲೀಕರಣಕ್ಕೆ ಉತ್ತರ ಪ್ರದೇಶ ರಾಜ್ಯ ಏನು ಮಾಡಿದೆ ಎಂಬುವುದು ಇಡೀ ವಿಶ್ವಕ್ಕೆ ತಿಳಿದಿದೆ. ಈ ರಾಜ್ಯವು ಮಹಿಳಾ ಸಬಲೀಕರಣಕ್ಕಾಗಿ ಕೆಲಸ ಮಾಡಿದೆ," ಎಂದು ಉತ್ತರ ಪ್ರದೇಶ ಸರ್ಕಾರವನ್ನು ಶ್ಲಾಘಿಸಿದರು.

ಮುಂದಿನ ವರ್ಷ ಉತ್ತರ ಪ್ರದೇಶದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಈ ಹಿನ್ನೆಲೆ ವಿರೋಧ ಪಕ್ಷಗಳು ಪ್ರಚಾರ ಕಾರ್ಯದಲ್ಲಿ ತೊಡಗಿರುವಾಗ ಉತ್ತರ ಪ್ರದೇಶದ ಆಡಳಿತಾರೂಢ ಬಿಜೆಪಿ ಸರ್ಕಾರವು ಹಲವಾರು ಯೋಜನೆಗಳನ್ನು ಆರಂಭ ಮಾಡುವ ಮೂಲಕ ಜನರ ಮತದ ಮೇಲೆ ಕಣ್ಣಿರಿಸಿದೆ. ಮಂಗಳವಾರ ಪ್ರಧಾನ ಮಂತ್ರಿ ನರೇಂದ್ರ ಮೋದಿ ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ಹಲವಾರು ಯೋಜನೆಗಳಿಗೆ ಚಾಲನೆ ನೀಡಿದ್ದಾರೆ.

ಪ್ರಧಾನ ಮಂತ್ರಿಯವರು ವಿವಿಧ ಸ್ವಸಹಾಯ ಸಂಘಗಳ ಬ್ಯಾಂಕ್ ಖಾತೆಗಳಿಗೆ ರೂ 1000 ಕೋಟಿಗಳನ್ನು ವರ್ಗಾವಣೆ ಮಾಡಿದ್ದಾರೆ. ಹಾಗೆಯೇ ಹೆಣ್ಣು ಮಗುವಿಗೆ ಸಹಾಯ ಮಾಡುವ ಮುಖ್ಯ ಮಂತ್ರಿ ಕನ್ಯಾ ಸುಮಂಗಲಾ ಯೋಜನೆಯ 1 ಲಕ್ಷಕ್ಕೂ ಹೆಚ್ಚು ಫಲಾನುಭವಿಗಳಿಗೆ ಹಣವನ್ನು ವರ್ಗಾವಣೆ ಮಾಡಿದ್ದಾರೆ. 202 ಪೂರಕ ಪೌಷ್ಟಿಕಾಂಶ ಉತ್ಪಾದನಾ ಘಟಕಗಳಿಗೆ ಶಂಕುಸ್ಥಾಪನೆಯನ್ನು ಕೂಡಾ ಪ್ರಧಾನ ಮಂತ್ರಿ ನರೇಂದ್ರ ಮೋದಿ ಮಾಡಿದರು.

Nation knows how UP is empowering women Says Prime Minister Narendra Modi

ಈ ಬಳಿಕ ಮಾತನಾಡಿದ ಪ್ರಧಾನ ಮಂತ್ರಿ ನರೇಂದ್ರ ಮೋದಿ, "ನಮ್ಮ ದೇಶದಲ್ಲಿ ಸಾವಿರಾರು ವರ್ಷಗಳಿಂದ ತಾಯಿಯ ಶಕ್ತಿಯ ಪ್ರತೀಕವಾಗಿರುವ ಮೂರು ನದಿಗಳಾದ ಗಂಗಾ, ಯಮುನಾ ಮತ್ತು ಸರಸ್ವತಿಯನ್ನು ಹೊಂದಿರುವ ಪ್ರದೇಶ ಪ್ರಯಾಗ್‌ರಾಜ್‌ ಆಗಿದೆ. ಇಂದು ಈ ಪವಿತ್ರ ನಗರವು ಮಹಿಳಾ ಶಕ್ತಿಗೆ ಸಾಕ್ಷಿಯಾಗಿದೆ," ಎಂದು ಹೇಳಿದರು.

ಮಹಿಳೆಯರಲ್ಲಿ ಭರವಸೆ ಹುಟ್ಟು ಹಾಕಿದೆ ಈ ಯೋಜನೆ: ಮೋದಿ

"ಸುಮಾರು ಒಂದು ಲಕ್ಷಕ್ಕೂ ಅಧಿಕ ಮಂದಿ ಫಲಾನುಭವಿಗಳ ಖಾತೆಗೆ ಹಣವನ್ನು ವರ್ಗಾವಣೆ ಮಾಡುವುದಕ್ಕೆ ನನಗೆ ಹೆಮ್ಮೆ ಎನಿಸುತ್ತಿದೆ. ಬಡವರಲ್ಲಿ, ಯುವತಿಯರಲ್ಲಿ ಹಾಗೂ ಗ್ರಾಮೀಣ ಭಾಗದ ಜನರಲ್ಲಿ ಈ ಯೋಜನೆಯು ಭರವಸೆಯನ್ನು ಹುಟ್ಟು ಹಾಕಿದೆ. ಇಡೀ ದೇಶವೇ ಉತ್ತರ ಪ್ರದೇಶದಲ್ಲಿ ಮಹಿಳೆಯರ ಸಬಲೀಕರಣಕ್ಕಾಗಿ ಮಾಡಿದ ಕಾರ್ಯವನ್ನು ನೋಡುತ್ತಿದೆ," ಎಂದು ಪ್ರಧಾನಿ ಮೋದಿ ಶ್ಲಾಘಿಸಿದರು.

"ಈ ಡಬಲ್‌ ಇಂಜಿನ್‌ ಸರ್ಕಾರ ಯಾವುದೇ ತಾರತಮ್ಯವನ್ನು ಮಾಡದೆಯೇ, ಮಹಿಳೆಯರ ಸಬಲೀಕರಣಕ್ಕಾಗಿ ಕಾರ್ಯ ನಿರ್ವಹಣೆ ಮಾಡುತ್ತಿದೆ. ಫಲಾನುಭವಿ ಮಹಿಳೆಯರ ಪೈಕಿ ಹಲವಾರು ಮಂದಿಗೆ ಈವರೆಗೂ ಬ್ಯಾಂಕ್‌ ಖಾತೆಯೇ ಇರಲಿಲ್ಲ. ಆದರೆ ಇಂದು ಅವರ ಬಳಿಕ ಡಿಜಿಟಲ್‌ ಬ್ಯಾಂಕಿಂಗ್‌ ಎಂಬ ಬಲವಿದೆ. ಈ ಹಿಂದಿನ ಉತ್ತರ ಪ್ರದೇಶ ಸರ್ಕಾರವನ್ನು ಅಧಿಕಾರಕ್ಕೆ ಏರಿಸದಿರಲೂ ಈಗ ಮಹಿಳೆಯರು ನಿರ್ಧಾರ ಮಾಡಿದ್ದಾರೆ," ಎಂದು ಕೂಡಾ ಪ್ರಧಾನಿ ಮೋದಿ ತಿಳಿಸಿದರು.

ವಿವಾಹ ವಯಸ್ಸು ಏರಿಕೆ: ಯಾರಿಂದ ವಿರುದ್ದವೆಂದು ಎಲ್ಲರಿಗೆ ಗೊತ್ತೆಂದ ಮೋದಿ

ಇನ್ನು ಈ ಸಂದರ್ಭದಲ್ಲೇ ಮಹಿಳೆಯರು ವಿವಾವಾಗಲು ಅವಕಾಶ ಕಲ್ಪಿಸುವ ಕನಿಷ್ಠ ವಯಸ್ಸನ್ನು 18 ರಿಂದ 21 ಕ್ಕೆ ಏರಿಕೆ ಮಾಡುವುದಕ್ಕೆ ವಿರೋಧ ಮಾಡುವವರ ವಿರುದ್ಧ ಪ್ರಧಾನ ಮಂತ್ರಿ ನರೇಂದ್ರ ಮೋದಿ ವಾಗ್ದಾಳಿ ನಡೆಸಿದ್ದಾರೆ. "ಮಹಿಳೆಯರ ಮದುವೆಯ ಕನಿಷ್ಠ ವಯೋಮಿತಿಯನ್ನು 18 ರಿಂದ 21 ಕ್ಕೆ ಏರಿಕೆ ಮಾಡಲು ಸಂಸತ್ತು ನಿರ್ಧಾರ ಮಾಡಿದೆ. ಮಹಿಳೆಯರಿಗೆ ವಿದ್ಯಾಭ್ಯಾಸದಲ್ಲಿ ಸಮಾನ ಅವಕಾಶ ಲಭಿಸಬೇಕು ಎಂಬ ನಿಟ್ಟಿನಲ್ಲಿ ನಾವು ಈ ಕ್ರಮವನ್ನು ಕೈಗೊಂಡಿದ್ದೇವೆ. ಆದರೆ ಕೆಲವರಿಗೆ ಇದರಿಂದ ಸಮಸ್ಯೆ ಉಂಟಾಗಿದೆ. ಅದು ಯಾರು ಎಂದು ಎಲ್ಲರಿಗೂ ತಿಳಿದಿದೆ," ಎಂದು ಪ್ರಧಾನಿ ಮೋದಿ ಟೀಕೆ ಮಾಡಿದ್ದಾರೆ. (ಒನ್‌ಇಂಡಿಯಾ ಸುದ್ದಿ)

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+