• search
  • Live TV
ಲಕ್ನೋ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಕೃಷಿ ಕಾಯ್ದೆಗಳು ರೈತರ ಪಾಲಿಗೆ "ಡೆತ್ ವಾರೆಂಟ್": ಸಿಎಂ ಕೇಜ್ರಿವಾಲ್

|

ಲಕ್ನೋ, ಫೆಬ್ರವರಿ.21: ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಮೂರು ವಿವಾದಿತ ಕೃಷಿ ಕಾಯ್ದೆಗಳು "ರೈತರ ಪಾಲಿನ ಡೆತ್ ವಾರೆಂಟ್" ಆಗಿರುತ್ತದೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಆರೋಪಿಸಿದ್ದಾರೆ.

ಪಶ್ಚಿಮ ಉತ್ತರಪ್ರದೇಶದ ವಿಧಾನಸಭಾ ಬಳಿ ಪ್ರತಿಭಟನಾನಿರತ ರೈತರ ಬಗ್ಗೆ ಸಿಎಂ ಅರವಿಂದ್ ಕೇಜ್ರಿವಾಲ್ ಮಾತಾನಾಡಿದ್ದಾರೆ. ರೈತರ ಜೊತೆಗೆ ಕಪ್ಪು ಕೃಷಿ ಕಾಯ್ದೆಗಳ ಬಗ್ಗೆ ವಿಸ್ತೃತವಾಗಿ ಚರ್ಚೆ ನಡೆಸಲಾಗುತ್ತಿದ್ದು, ಈ ಕಾಯ್ದೆಗಳು ರೈತರ ಪಾಲಿಗೆ ಡೆತ್ ವಾರೆಂಟ್ ನಂತಿದೆ. ಒಂದು ವೇಳೆ ಈ ಕಾಯ್ದೆಗಳು ಜಾರಿಗೊಳಿಸಿದ್ದಲ್ಲಿ ರೈತರು ಕಾರ್ಪೋರೇಟರ್ ಗಳ ಕೈಯಲ್ಲಿರಬೇಕಾಗುತ್ತದೆ ಎಂದು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ದೂಷಿಸಿದ್ದಾರೆ.

ಕೊರೊನಾ ಸೋಂಕು ಹೆಚ್ಚಳ: ಮಹಾರಾಷ್ಟ್ರದಲ್ಲಿ ರಾತ್ರಿ ಕರ್ಫ್ಯೂಗೆ ನಿರ್ಧಾರ

ಕೇಂದ್ರ ಸರ್ಕಾರ ಜಾರಿಗೊಳಿಸಿರುವ ವಿವಾದಿತ ಕಾಯ್ದೆಗಳ ವಿರುದ್ಧ ರೈತರು ಉತ್ತರ ಪ್ರದೇಶದ ಮೀರತ್ ನಲ್ಲಿ ಫೆಬ್ರವರಿ.28ರಂದು ಕಿಸಾನ್ ಮಹಾ ಪಂಚಾಯತ್ ನಡೆಸಲಾಗುತ್ತದೆ. ಕೃಷಿ ಸಂಬಂಧಿತ ಕಾಯ್ದೆಗಳ ವಿರುದ್ಧ ನಡೆಸುತ್ತಿರುವ ರೈತ ಪ್ರತಿಭಟನೆಯಲ್ಲಿ ಮುಖ್ಯಮಂತ್ರಿ ಅರವಿದ್ ಕೇಜ್ರಿವಾಲ್ ಭಾಗವಹಿಸಲಿದ್ದಾರೆ.

ದೆಹಲಿಯ ಮೂರು ಗಡಿಯಲ್ಲಿ ರೈತರ ಹೋರಾಟ:

ವಿವಾದಿತ ರೈತರ ಉತ್ಪಾದನೆ ವ್ಯಾಪಾರ ಮತ್ತು ವಾಣಿಜ್ಯ (ಪ್ರಚಾರ ಮತ್ತು ಸೌಲಭ್ಯ) ಕಾಯ್ದೆ, ಬೆಲೆ ಭರವಸೆ ಮತ್ತು ಕೃಷಿ ಸೇವೆಗಳ ಕಾಯ್ದೆ (ಸಬಲೀಕರಣ ಮತ್ತು ಸಂರಕ್ಷಣೆ) ಒಪ್ಪಂದ ಹಾಗೂ ಅಗತ್ಯ ಸರಕುಗಳ (ತಿದ್ದುಪಡಿ) ಕಾಯ್ದೆಗಳ ವಿರುದ್ಧ ಕಳೆದ ನವಂಬರ್.26 ರಿಂದ ಪ್ರತಿಭಟನೆ ನಡೆಸಲಾಗುತ್ತಿದೆ. ನವದೆಹಲಿಯ ಸಿಂಘು ಗಡಿ, ಟಿಕ್ರಿ ಗಡಿ ಮತ್ತು ಘಾಜಿಪುರ್ ಗಡಿ ಪ್ರದೇಶಗಳಲ್ಲಿ ಕೇಂದ್ರ ಸರ್ಕಾರದ ವಿರುದ್ಧ 82 ದಿನಗಳಿಂದಲೂ ರೈತರು ಹೋರಾಟ ನಡೆಸುತ್ತಿದ್ದಾರೆ. ರೈತರ ಹೋರಾಟವನ್ನು ಬೆಂಬಲಿಸುವ ನಿಟ್ಟಿನಲ್ಲಿ ಹರಿಯಾಣ, ಪಂಜಾಬ್, ಉತ್ತರ ಪ್ರದೇಶ, ರಾಜಸ್ಥಾನ ಸೇರಿದಂತೆ ಹಲವು ರಾಜ್ಯಗಳಲ್ಲಿ ಕಿಸಾನ್ ಮಹಾ ಪಂಚಾಯತ್ ಸಭೆಗಳನ್ನು ನಡೆಸಲಾಗುತ್ತಿದೆ.

English summary
New Farm Laws Are Like 'Death Warrant' For Farmers, Said Delhi CM Arvind Kejriwal.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X