ಸಮೀಕ್ಷೆ: ಎಸ್‌ಪಿ-ಬಿಎಸ್‌ಪಿ ಮೈತ್ರಿಯಿಂದ ಉ.ಪ್ರದೇಶದಲ್ಲಿ ಬಿಜೆಪಿಗೆ ಹಿನ್ನಡೆ

ಲಖನೌ, ಏಪ್ರಿಲ್ 08: ಕಳೆದ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಗೆ ಭಾರಿ ಫಸಲು ಕೊಟ್ಟಿದ್ದ ಉತ್ತರ ಪ್ರದೇಶ ರಾಜ್ಯದಲ್ಲಿ ಈ ಬಾರಿ ಬಿಜೆಪಿಗೆ ಭಾರಿ ಹಿನ್ನಡೆ ಆಗುವ ಸಾಧ್ಯತೆ ಇದೆ ಎಂದು ನ್ಯೂಸ್‌ ನೇಷನ್ ಸಮೀಕ್ಷೆ ಹೇಳುತ್ತಿದೆ.

ಲೋಕಸಭಾ ಚುನಾವಣೆ 2019 : ವಿಶೇಷ ಪುಟ | ಗ್ಯಾಲರಿ

ಉತ್ತರ ಪ್ರದೇಶದಲ್ಲಿ ಅಖಿಲೇಶ್ ಯಾದವ್ ಮತ್ತು ಮಾಯಾವತಿ ಅವರು ಒಂದಾಗಿರುವುದು ಬಿಜೆಪಿಗೆ ಬಹುದೊಡ್ಡ ಹೊಡೆತ ಬೀಳಲಿದ್ದು, ಕಳೆದ ಲೋಕಸಭೆ ಚುನಾವಣೆಯಲ್ಲಿ 73 ಕ್ಷೇತ್ರ ಗೆದ್ದು ಇತಿಹಾಸ ಸೃಷ್ಟಿಸಿದ್ದ ಬಿಜೆಪಿ ಈ ಬಾರಿ 37-35 ಕ್ಕೆ ಇಳಿಯಲಿದೆ ಎನ್ನಲಾಗುತ್ತಿದೆ.

ಉತ್ತರ ಪ್ರದೇಶದಲ್ಲಿ ದೇಶದಲ್ಲೇ ಅತಿ ಹೆಚ್ಚು (80) ಲೋಕಸಭಾ ಕ್ಷೇತ್ರಗಳಿದ್ದು, ಇದು ಬಿಜೆಪಿ ಬಾಹುಳ್ಯದ ರಾಜ್ಯವಾಗಿದೆ. ಬಿಜೆಪಿಯು ಉ.ಪ್ರದೇಶದಲ್ಲಿ ಕಡಿಮೆ ಕ್ಷೇತ್ರಗಳಲ್ಲಿ ಗೆದ್ದರೆ ಅದು ಅದರ ಒಟ್ಟಾರೆ ಸೀಟಿನ ಮೇಲೆ ಪ್ರಭಾವ ಬೀರಲಿದೆ.

News Nation opinion poll: BJP crumble in Uttar Pradesh

ಎಸ್‌-ಬಿಎಸ್‌ಪಿ-ಆರ್‌ಜೆಡಿ ಮೈತ್ರಿಯು ಉ.ಪ್ರದೇಶದಲ್ಲಿ ಅತಿ ಹೆಚ್ಚು ಅಂದರೆ 41 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲಿದೆ ಎನ್ನಲಾಗುತ್ತಿದೆ. ಕಳೆದ ಲೋಕಸಭಾ ಚುನಾವಣೆಯಲ್ಲಿ ಎಸ್‌ಪಿ, ಬಿಎಸ್‌ಪಿ ಎರಡೂ ಪಕ್ಷಗಳು ಒಂದೂ ಸೀಟನ್ನು ಗೆದ್ದಿರಲಿಲ್ಲ, ಆದರೆ ಈ ಬಾರಿ ಮೈತ್ರಿ ದೆಸೆಯಿಂದಾಗಿ ಹೆಚ್ಚು ಸೀಟು ಗೆಲ್ಲುವ ಸಾಧ್ಯತೆ ಇದೆ.

ಕಾಂಗ್ರೆಸ್‌ ಈ ಚುನಾವಣೆಯಲ್ಲಿಯೂ ಉತ್ತರ ಪ್ರದೇಶದಲ್ಲಿ ವಿಶೇಷ ಸಾಧನೆ ಮಾಡುವುದಿಲ್ಲವೆಂದು ಸಮೀಕ್ಷೆ ಹೇಳುತ್ತಿದೆ. ಕಾಂಗ್ರೆಸ್ ಈ ಬಾರಿಯೂ ರಾಜ್ಯದಲ್ಲಿ ಎರಡು ಕ್ಷೇತ್ರಗಳಲ್ಲಿ ಮಾತ್ರವೇ ಗೆಲ್ಲುತ್ತದೆ ಎನ್ನಲಾಗಿದೆ. ಅದೂ ಬಹುಷಃ ರಾಹುಲ್ ಗಾಂಧಿ ಮತ್ತು ಸೋನಿಯಾ ಗಾಂಧಿ ಅವರ ಕ್ಷೇತ್ರಗಳಾಗಿವೆ.

ಉತ್ತರ ಪ್ರದೇಶದಲ್ಲಿ ಏಪ್ರಿಲ್ 11 ರಿಂದ ಮತದಾನ ಪ್ರಾರಂಭವಾಗುತ್ತಿದ್ದು, ಎಲ್ಲ ಏಳು ಹಂತದಲ್ಲೂ ಉತ್ತರ ಪ್ರದೇಶದಲ್ಲಿ ಮತದಾನವಾಗಲಿದೆ. ಮತ ಎಣಿಕೆ ಮೇ 23 ರಂದು ನಡೆಯಲಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+