ಹತ್ರಾಸ್ ಅತ್ಯಾಚಾರ ಆರೋಪಿಗಳ ಮನೆಗೆ ವಕೀಲ ಎ.ಪಿ ಸಿಂಗ್

ಲಕ್ನೋ, ಅಕ್ಟೋಬರ್.10: ಉತ್ತರ ಪ್ರದೇಶ ಹತ್ರಾಸ್ ನಲ್ಲಿ 19 ವರ್ಷದ ಯುವತಿ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದ ಆರೋಪಿಗಳನ್ನು ರಕ್ಷಿಸುವುದಾಗಿ ಘೋಷಿಸಿದ ವಕೀಲ ಎ.ಪಿ. ಸಿಂಗ್ ಆರೋಪಿಗಳ ಗ್ರಾಮಕ್ಕೆ ಭೇಟಿ ನೀಡಿದರು.

ಆಕಾಲಿ ಭಾರತೀಯ ಕ್ಷತ್ರೀಯ ಮಹಾಸಭಾ ಸದಸ್ಯರು ಮತ್ತು ಮಾಜಿ ಕೇಂದ್ರ ಸಚಿವ ಮನ್ವೆಂದ್ರ್ ಸಿಂಗ್ ಜೊತೆಗೆ ವಕೀಲ ಎ.ಪಿ. ಸಿಂಗ್, ಹತ್ರಾಸ್ ಪ್ರಕರಣದ ನಾಲ್ವರು ಆರೋಪಿಗಳ ಕುಟುಂಬ ಸದಸ್ಯರನ್ನು ಭೇಟಿ ಮಾಡಿ ಚರ್ಚಿಸಿದ್ದಾರೆ ಎಂದು ವರದಿಯಾಗಿದೆ.

ಹದ್ರಾಸ್ ಸಾಮೂಹಿಕ ಅತ್ಯಾಚಾರ-ಕೊಲೆ ಪ್ರಕರಣದ ನಾಲ್ವರು ಆರೋಪಿಗಳನ್ನು ರಕ್ಷಿಸಲು ಮೇಲ್ಜಾತಿಯ ಅಂಗವಾದ ಅಖಿಲ್ ಭಾರತೀಯ ಕ್ಷತ್ರಿಯ ಮಹಾಸಭಾ ಈ ಹಿಂದೆ ಎಪಿ ಸಿಂಗ್ ಅವರನ್ನು ಸಂಪರ್ಕಿಸಿತ್ತು. ಈ ಮಹಾಸಭಾ ರಾಷ್ಟ್ರೀಯ ಅಧ್ಯಕ್ಷ ರಾಜ ಮನ್ವೇಂದ್ರ ಸಿಂಗ್ ಅವರು ಈ ನಿರ್ಧಾರ ತೆಗೆದುಕೊಂಡಿದ್ದರು. 2012ರ ನವದೆಹಲಿ ನಿರ್ಭಯಾ ಅತ್ಯಾಚಾರ ಪ್ರಕರಣದ ಆರೋಪಿಗಳ ಪರವಾಗಿ ಇದೇ ವಕೀಲ ಎ.ಪಿ ಸಿಂಗ್ ಅವರು ವಾದ ಮಂಡಿಸಿದ್ದರು.

ಹತ್ರಾಸ್ ಪ್ರಕರಣದಲ್ಲೇ ರಾಜಕೀಯ ಪಿತೂರಿಯ ಸಂಚು

ಹತ್ರಾಸ್ ಪ್ರಕರಣದಲ್ಲೇ ರಾಜಕೀಯ ಪಿತೂರಿಯ ಸಂಚು

ಹತ್ರಾಸ್ ಸಾಮೂಹಿಕ ಅತ್ಯಾಚಾರ ಪ್ರಕರಣದ ಬೆನ್ನಲ್ಲೇ ಜನಾಂಗೀಯ ಗಲಭೆ ಸಂಘಟಿಸುವ ಉದ್ದೇಶವಿದೆ. ಅದರ ಸಲುವಾಗಿ ಘಟನೆಯನ್ನು ರಾಜಕೀಯಗೊಳಿಸುವ ಮೂಲಕ ಪಿತೂರಿ ನಡೆಸಲಾಗುತ್ತಿದೆ ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಆರೋಪಿಸಿದ್ದರು. ಯುಪಿ ಪೊಲೀಸರು ಈ ಸಂಬಂಧ ಲಕ್ನೋದಲ್ಲಿ ಐಪಿಸಿ ಸೆಕ್ಷನ್ ‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದರು.

ಪ್ರಾಥಮಿಕ ವರದಿ ಆಧರಿಸಿ ಅಧಿಕಾರಿಗಳ ಅಮಾನತು

ಪ್ರಾಥಮಿಕ ವರದಿ ಆಧರಿಸಿ ಅಧಿಕಾರಿಗಳ ಅಮಾನತು

ಹತ್ರಾಸ್ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡವು ಸಲ್ಲಿಸಿದ ಪ್ರಾಥಮಿಕ ವರದಿಯನ್ನು ಆಧರಿಸಿ ಹಲವು ಅಧಿಕಾರಿಗಳನ್ನು ಅಮಾನತುಗೊಳಿಸಲಾಗಿತ್ತು. ಹತ್ರಾಸ್ ಸೂಪರಿಟೆಂಡೆಂಟ್ ಆಫ್ ಪೊಲೀಸ್, ಡೆಪ್ಯುಟಿ ಸೂಪರಿಟೆಂಡೆಂಟ್ ಆಫ್ ಪೊಲೀಸ್, ಠಾಣೆಯ ಇನ್ಸ್ ಪೆಕ್ಟರ್ ಸೇರಿದಂತೆ ಹಲವು ಅಧಿಕಾರಿಗಳನ್ನು ಅಮಾನತುಗೊಳಿಸಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಆದೇಶ ಹೊರಡಿಸಿದ್ದರು.

ಮೇಲ್ವರ್ಗದ ಜನರಿಂದ ಜೀವ ಬೆದರಿಕೆ ಆರೋಪ

ಮೇಲ್ವರ್ಗದ ಜನರಿಂದ ಜೀವ ಬೆದರಿಕೆ ಆರೋಪ

ಉತ್ತರ ಪ್ರದೇಶ ಹತ್ರಾಸ್ ಅತ್ಯಾಚಾರ ಸಂತ್ರಸ್ತೆ ಕುಟುಂಬಕ್ಕೆ ರಾಜ್ಯದಲ್ಲಿ ಮೇಲ್ವರ್ಗದ ಸಮುದಾಯ ಎಂದು ಗುರುತಿಸಿಕೊಂಡಿರುವ "ಠಾಕೂರ್"ಗಳಿಂದ ಜೀವ ಬೆದರಿಕೆಯಿದೆ ಎಂದು ಆರೋಪಿಸಲಾಗಿದೆ. ಈ ಹಿನ್ನೆಲೆ ಕುಟುಂಬ ಸದಸ್ಯರಿಗೆ ಬಿಗಿ ಭದ್ರತೆ ಒದಗಿಸಲಾಗಿದೆ ಎಂದು ಸರ್ಕಾರದ ಗೃಹ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಅವನಿಶ್ ಕುಮಾರ್ ಅವಸ್ಥಿ ತಿಳಿಸಿದ್ದರು. ಹತ್ರಾಸ್ ಅತ್ಯಾಚಾರ ಸಂತ್ರಸ್ತೆ ಕುಟುಂಬ ಸದಸ್ಯರ ಭದ್ರತೆಗಾಗಿ ಅವರ ನಿವಾಸದ ಸುತ್ತ 12 ರಿಂದ 15 ಮಂದಿ ಪೊಲೀಸರನ್ನು ನಿಯೋಜಿಸಲಾಗಿದೆ. ದಿನದ 24 ಗಂಟೆ ಪೊಲೀಸ್ ಕಣ್ಗಾವಲು ಹಾಕಲಾಗಿದೆ ಎಂದು ಹತ್ರಾಸ್ ಪೊಲೀಸರು ಸ್ಪಷ್ಟನೆ ನೀಡಿದ್ದಾರೆ. ಮೂವರು ಎಸ್ಎಚ್ಓ, ಒಬ್ಬ ಡೆಪ್ಯುಟಿ ಸೂಪರಿಟೆಂಡೆಂಟ್ ಆಫ್ ಪೊಲೀಸ್ ಶ್ರೇಣಿಯ ಅಧಿಕಾರಿ ಮತ್ತು ಪೊಲೀಸ್ ಕಾನ್ಸ್ ಟೇಬಲ್ ರನ್ನು ನಿಯೋಜಿಸಲಾಗಿದೆ.

ಹತ್ರಾಸ್ ಸಾಮೂಹಿಕ ಅತ್ಯಾಚಾರ ಪ್ರಕರಣ

ಹತ್ರಾಸ್ ಸಾಮೂಹಿಕ ಅತ್ಯಾಚಾರ ಪ್ರಕರಣ

ಕಳೆದ ಸಪ್ಟೆಂಬರ್.14ರಂದು ಉತ್ತರ ಪ್ರದೇಶದ ಹತ್ರಾಸ್ ನಲ್ಲಿ ಹುಲ್ಲು ಕತ್ತರಿಸುತ್ತಿದ್ದ ಯುವತಿಯನ್ನು ಠಾಕೂರ್ ಸಮುದಾಯದ ನಾಲ್ವರು ದುಷ್ಕರ್ಮಿಗಳು ಅಪಹರಿಸಿ ಅತ್ಯಾಚಾರ ನಡೆಸಿದ್ದರು. ಇಷ್ಟಕ್ಕೆ ಸುಮ್ಮನಾಗದೇ ಯುವತಿ ಕತ್ತು ಹಿಸುಕಿ, ನಾಲಗೆ ಕತ್ತರಿಸುವ ಮೂಲಕ ಕ್ರೌರ್ಯ ಮೆರೆದಿದ್ದರು. ಎರಡು ವಾರ ಸಾವು ಬದುಕಿನ ನಡುವೆ ಹೋರಾಟ ನಡೆಸಿದ ದಲಿತ ಯುವತಿ ಸಪ್ಟೆಂಬರ್.29ರಂದು ನವದೆಹಲಿಯ ಸಫ್ದರ್ ಜಂಗ್ ಆಸ್ಪತ್ರೆದಲ್ಲಿ ಕೊನೆಯುಸಿರೆಳೆದಿದ್ದಳು. ಸಪ್ಟೆಂಬರ್.30ರ ಮಧ್ಯರಾತ್ರಿ 2.30ರ ಸಂದರ್ಭದಲ್ಲಿ ಪೊಲೀಸರೇ ಯುವತಿಯ ಅಂತ್ಯ ಸಂಸ್ಕಾರವನ್ನು ನೆರವೇರಿಸಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+