• search
  • Live TV
ಲಕ್ನೋ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಯಾವುದೇ ರಾಜ್ಯದಲ್ಲಿ ಕಾಂಗ್ರೆಸ್‌ ಜೊತೆ ಮೈತ್ರಿ ಇಲ್ಲ : ಮಾಯಾವತಿ

|

ಲಕ್ನೋ, ಮಾರ್ಚ್ 12 : 'ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಜೊತೆ ಯಾವ ರಾಜ್ಯದಲ್ಲಿಯೂ ಬಿಎಸ್ಪಿ ಮೈತ್ರಿ ಮಾಡಿಕೊಳ್ಳುವುದಿಲ್ಲ' ಎಂದು ಪಕ್ಷದ ಮುಖ್ಯಸ್ಥೆ ಮಾಯಾವತಿ ಹೇಳಿದ್ದಾರೆ.

ಮಧ್ಯಪ್ರದೇಶದಲ್ಲಿ ಮೂವರು ಬಿಎಸ್ಪಿ ನಾಯಕರು ಕಾಂಗ್ರೆಸ್ ಸೇರಿದ ಎರಡು ದಿನಗಳ ಬಳಿಕ ಮಾಯಾವತಿ ಅವರು ಈ ಕುರಿತು ಪ್ರತಿಕ್ರಿಯೆ ನೀಡಿದ್ದಾರೆ. 'ಯಾವುದೇ ರಾಜ್ಯದಲ್ಲಿ ಕಾಂಗ್ರೆಸ್‌ ಜೊತೆ ಲೋಕಸಭಾ ಚುನಾವಣೆಯಲ್ಲಿ ಮೈತ್ರಿ ಮಾಡಿಕೊಳ್ಳುವುದಿಲ್ಲ' ಎಂದು ಸ್ಪಷ್ಟಪಡಿಸಿದ್ದಾರೆ.

ಬಿಜೆಪಿಗೂ ಕಾಂಗ್ರೆಸ್‌ಗೂ ವ್ಯತ್ಯಾಸವೇನಿದೆ? ಮತ್ತೆ ಕಿಡಿಕಾರಿದ ಮಾಯಾವತಿ

ಉತ್ತರ ಪ್ರದೇಶದ ಪಶ್ಚಿಮ ಭಾಗದ ಕಾಂಗ್ರೆಸ್ ಉಸ್ತುವಾರಿ ಜ್ಯೋತಿರಾಧಿತ್ಯ ಸಿಂಧ್ಯಾ ಅವರು, 'ಉತ್ತರ ಪ್ರದೇಶದಲ್ಲಿ ನಾವು ಯಾರ ಜೊತೆಗೂ ಮೈತ್ರಿ ಮಾಡಿಕೊಳ್ಳುವುದಿಲ್ಲ. ಎಸ್ಪಿ ಮತ್ತು ಬಿಎಸ್ಪಿಗಿಂತ ಕಾಂಗ್ರೆಸ್ ದಾರಿ ಬೇರೆಯಾಗಿದೆ' ಎಂದು ಹೇಳಿದ್ದರು.

ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಗೆ ಕಂಟಕವಾಗಲಿರುವ ತೀನ್ ದೇವಿಯಾ!

ಉತ್ತರ ಪ್ರದೇಶದಲ್ಲಿ ಎಸ್ಪಿ ಮತ್ತು ಬಿಎಸ್ಪಿ ಮೈತ್ರಿ ಮಾಡಿಕೊಂಡು ಲೋಕಸಭಾ ಚುನಾವಣೆಯನ್ನು ಎದುರಿಸುತ್ತಿವೆ. ಬಿಎಸ್ಪಿ 38 ಕ್ಷೇತ್ರಗಳಲ್ಲಿ, ಎಸ್ಪಿ 37ಕ್ಷೇತ್ರಗಳಲ್ಲಿ ಕಣಕ್ಕಿಳಿಯಲಿವೆ. ಆರ್‌ಎಲ್‌ಡಿ ಉಳಿದ ಮೂರು ಕ್ಷೇತ್ರಗಳನ್ನು ಪಡೆದಿದೆ.

ಚುನಾವಣೆ ಎಫೆಕ್ಟ್: ಟ್ವಿಟ್ಟರ್‌ಗೆ ಬಂದ ಬಿಎಸ್‌ಪಿ ನಾಯಕಿ ಮಾಯಾವತಿ

ರಾಹುಲ್ ಗಾಂಧಿ ಪ್ರತಿನಿಧಿಸುವ ಅಮೇಥಿ ಮತ್ತು ಸೋನಿಯಾ ಗಾಂಧಿ ಪ್ರತಿನಿಧಿಸುವ ರಾಯ್‌ ಬರೇಲಿ ಕ್ಷೇತ್ರವನ್ನು ಯಾವುದೇ ಮೈತ್ರಿ ಇಲ್ಲದೇ ಕಾಂಗ್ರೆಸ್ ಪಕ್ಷಕ್ಕೆ ಬಿಟ್ಟುಕೊಡಲಾಗಿದೆ.

English summary
BSP supremo Mayawati ruled out any alliance with the Congress in any state for the Lok Sabha elections 2019. The BSP and SP had already announced an alliance in uttar pradesh.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X