ಮುಸ್ಲಿಮರು ಮತ ನೀಡದಿದ್ದರೂ ಕೆಲಸ ಮಾಡಿಕೊಡುತ್ತೇನೆ ಎಂದ ವರುಣ್ ಗಾಂಧಿ
ಪಿಲಿಬಿಟ್, ಏ.22: ದೇಶದೆಲ್ಲೆಡೆ ಚುನಾವಣಾ ಕಾವು ಹೆಚ್ಚಾಗಿದೆ. ಒಂದೆಡೆ ಮುಸ್ಲಿಮರು ಮತ ನೀಡದಿದ್ದರೆ ಅವರ ಕೆಲಸ ಮಾಡಿಕೊಡುವುದಿಲ್ಲ ಎಂದು ತಾಯಿ ಹೇಳಿದರೆ ಇನ್ನೊಂದೆಡೆ ಮತ ನೀಡದಿದ್ದರೂ ಕೂಡ ನಾನು ನಿಮ್ಮ ಕೆಲಸ ಮಾಡಿಕೊಡುತ್ತೇನೆ ಎಂದು ವರುಣ್ ಗಾಂಧಿ ಭರವಸೆ ನೀಡಿದ್ದಾರೆ.
ಮುಸ್ಲಿಮರು ಮತ ನೀಡದಿದ್ದರೆ ಕೆಲಸ ಮಾಡಿಕೊಡುವುದಿಲ್ಲ ಎಂದಿದ್ದ ಕೇಂದ್ರ ಸಚಿವೆ ಮನೇಕ ಗಾಂಧಿಗೆ ಅವರ ಹೇಳಿಕೆಗೆ ವ್ಯತಿರಿಕ್ತವಾದ ಹೇಳಿಕೆಯನ್ನು ವರುಣ್ ಗಾಂಧಿ ನೀಡಿದ್ದಾರೆ.
#WATCH BJP's Varun Gandhi in Pilibhit, earlier today: Bas mein ek cheez Muslim bhai ko bolna chahta hun ki agar aapne mujhe vote diya toh mujhe bahut accha lagega, agar aapne mujhe vote nahi diya, koi baat nahi, tab bhi mujh se kaam le le na, koi dikat ki baat nahi. pic.twitter.com/xMLzreAJ1k
— ANI UP (@ANINewsUP) April 21, 2019
''ನನಗೆ ನೀವು ಮತನೀಡದಿದ್ದರೂ ಕೂಡ ನಾನು ನಿಮ್ಮ ಕಲಸವನ್ನು ಮಾಡಿಕೊಡುತ್ತೇನೆ''ಎಂದು ಹೇಳಿರುವುದು ಆಶ್ಚರ್ಯ ಮೂಡಿಸಿದೆ. ಕಟ್ಟ ಹಿಂದುತ್ವವಾದಿ ಎಂದು ಕರೆಸಿಕೊಂಡಿದ್ದ ವರುಣ್ ಗಾಂಧಿ ಉತ್ತರ ಪ್ರದೇಶದಲ್ಲಿ ತೀವ್ರ ಕುತೂಹಲ ಮೂಡಿಸಿದೆ.

ಇತ್ತೀಚೆಗೆ ಪ್ರಚಾರ ಸಭೆಯಲ್ಲಿ ಪಾಲ್ಗೊಂಡಿದ್ದ ಮನೇಕ ಗಾಂಧಿ ಮುಸ್ಲಿಮರು ಮತನೀಡದಿದ್ದರೆ ಅವರ ಕೆಲಸ ಮಾಡಿಕೊಡುವುದಿಲ್ಲ ಎಂದು ಎಚ್ಚರಿಸಿದ್ದರು. ಈ ಹೇಳಿಕೆ ಕುರಿತು ಚುನಾವಣಾ ಆಯೋಗವು ಮನೇಕ ಗಾಂಧಿಗೆ 48 ಗಂಟೆಗಳ ನಿರ್ಬಂಧವನ್ನು ಹೇರಿತ್ತು.
ಲೋಕಸಭಾ ಚುನಾವಣೆ 2019 : ವಿಶೇಷ ಪುಟ | ಗ್ಯಾಲರಿ
ಉತ್ತರಪ್ರದೇಶದಲ್ಲಿ ನಡೆದ ಪ್ರಚಾರ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಮುಸಲ್ಮಾನ ಸಹೋದರರೆ ನೀವು ನನಗೆ ಮತ ಹಾಕಿದರೆ ಸಂತೋಷ, ಒಂದೊಮ್ಮೆ ಮತ ಹಾಕದಿದ್ದರೂ ಕೂಡ ನಿಮ್ಮ ಕೆಲಸವನ್ನು ಮಾಡಿಕೊಡುತ್ತೇನೆ' ಎನ್ನುವ ಮೂಲಕ ಎಲ್ಲರೂ ಅವರ ಕಡೆ ಚಿತ್ತ ನೆಡುವ ಹಾಗೆ ಮಾಡಿದ್ದಾರೆ.
-
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
KSRTC: ಸಾರಿಗೆ ಲೋಕಕ್ಕೆ 'ಪಲ್ಲಕ್ಕಿ' ಮೆರುಗು: ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ 115 ಹೊಸ ಬಸ್ಗಳ ಲೋಕಾರ್ಪಣೆ -
ಬೆಂಗಳೂರಲ್ಲಿ ಗ್ಯಾಸ್ ಏಜೆನ್ಸಿಗಳ ಭರ್ಜರಿ ದಂಧೆ: ಸಿಲಿಂಡರ್ ಸಿಗದೇ ಗ್ರಾಹಕರು ಕಂಗಾಲು; ಕಾಳಸಂತೆಯಲ್ಲಿ ₹3,000ಕ್ಕೆ ಮಾರಾಟ -
LPG Gas: ಎಲ್ಪಿಜಿ ನಿಯಮಗಳಲ್ಲಿ ಭಾರೀ ಬದಲಾವಣೆ; ಗ್ರಾಹಕರು ದೂರು ನೀಡಲು ಸಹಾಯವಾಣಿ ಸಂಖ್ಯೆಗಳ ಬಿಡುಗಡೆ -
Gold Rate March 13: ಸತತ 3ನೇ ದಿನವೂ ಚಿನ್ನ - ಬೆಳ್ಳಿ ಬೆಲೆ ಭರ್ಜರಿ ಕುಸಿತ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
Resort: ಕರ್ನಾಟಕದಲ್ಲಿ ಶುರುವಾಯ್ತು ರೆಸಾರ್ಟ್ ರಾಜಕೀಯ: ‘ಅವರು ನಮ್ಮ ಅತಿಥಿಗಳು’ ಎಂದ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ -
Horoscope March 13: ಈ ರಾಶಿಯವರ ಬದುಕಲ್ಲಿ ಸಕಾರಾತ್ಮಕ ಬೆಳವಣಿಗೆ, ಅಧಿಕ ಲಾಭ; ದಿನ ಭವಿಷ್ಯ












Click it and Unblock the Notifications