ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

'ಇವಿಎಂಗಳನ್ನು ಟ್ಯಾಂಪರಿಂಗ್ ಮಾಡುವ ಪ್ರಶ್ನೆಯೇ ಇಲ್ಲ' CEC ಸುಶೀಲ್ ಚಂದ್ರ

|
Google Oneindia Kannada News

ಲಕ್ನೋ ಮಾರ್ಚ್ 10: ಭಾರತದ ಚುನಾವಣಾ ಆಯೋಗ ಐದು ರಾಜ್ಯಗಳಲ್ಲಿ ಯಾವುದೇ ಎಲೆಕ್ಟ್ರಾನಿಕ್ ಮತಯಂತ್ರಗಳನ್ನು (ಇವಿಎಂ) ಟ್ಯಾಂಪರಿಂಗ್ ಮಾಡುವ ಪ್ರಶ್ನೆಯೇ ಇಲ್ಲ ಎಂದು ಮುಖ್ಯ ಚುನಾವಣಾ ಆಯುಕ್ತ ಸುಶೀಲ್ ಚಂದ್ರ ಅವರು ಸ್ಪಷ್ಟಪಡಿಸಿದ್ದಾರೆ. ವಿಧಾನಸಭಾ ಚುನಾವಣೆಯ ಮತ ಎಣಿಕೆಯ ಸಂದರ್ಭದಲ್ಲಿ ಭಾರತೀಯ ಚುನಾವಣಾ ಆಯೋಗ ಗುರುವಾರ ಈ ಹೇಳಿಕೆಯನ್ನು ನೀಡಿದೆ.

"2004 ರಿಂದ ಇವಿಎಂಗಳನ್ನು ನಿರಂತರವಾಗಿ ಬಳಸಲಾಗುತ್ತಿದೆ, 2019 ರ ವೇಳೆಗೆ ನಾವು ಪ್ರತಿ ಮತಗಟ್ಟೆಯಲ್ಲಿ ಮತದಾರರ-ಪರಿಶೀಲಿಸಿದ ಪೇಪರ್ ಆಡಿಟ್ ಟ್ರಯಲ್ (ವಿವಿಪಿಎಟಿ) ಅನ್ನು ನಿರ್ವಹಿಸಲು ಪ್ರಾರಂಭಿಸಿದ್ದೇವೆ. ನಂತರ ಎಲ್ಲಾ ಉನ್ನತ ಸಿಬ್ಬಂದಿಗಳ ಸಮ್ಮುಖದಲ್ಲಿ ಇವಿಎಂಗಳನ್ನು ಸೀಲ್ ಮಾಡಲಾಗುತ್ತದೆ ಮತ್ತು ಅವರ ಸಹಿಯನ್ನು ತೆಗೆದುಕೊಳ್ಳಲಾಗುತ್ತದೆ. ನಂತರ ಡೀಲರ್ ಇವಿಎಂಗಳನ್ನು ಮೂರು ಹಂತದ ಭದ್ರತೆಯಲ್ಲಿ ಸ್ಟ್ರಾಂಗ್ ರೂಮ್‌ನಲ್ಲಿ ಇರಿಸಲಾಗುತ್ತದೆ. ಜೊತೆಗೆ ಸ್ಟ್ರಾಂಗ್ ರೂಮ್‌ನಲ್ಲಿ 24x7 ಕಣ್ಗಾವಲುಗಾಗಿ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ. ರಾಜಕೀಯ ಪಕ್ಷಗಳ ಏಜೆಂಟರು ಕೂಡ ಸ್ಟ್ರಾಂಗ್ ರೂಮ್‌ನ ಮೇಲೆ ಕಣ್ಣಿಟ್ಟಿರುತ್ತಾರೆ. ಆದ್ದರಿಂದ ಯಾವುದೇ ರೀತಿಯ ಟ್ಯಾಂಪರಿಂಗ್ ಮಾಡುವ ಪ್ರಶ್ನೆಯೇ ಇಲ್ಲ. ಇವಿಎಂಗಳನ್ನು ಟ್ಯಾಂಪರಿಂಗ್ ಮಾಡುವುದು ಮತ್ತು ಯಾವುದೇ ಇವಿಎಂ ಅನ್ನು ಸ್ಟ್ರಾಂಗ್ ರೂಮ್‌ನಿಂದ ಹೊರತೆಗೆಯಲು ಸಾಧ್ಯವಿಲ್ಲ" ಎಂದು ಮುಖ್ಯ ಚುನಾವಣಾ ಆಯುಕ್ತರು ಹೇಳಿದ್ದಾರೆ.

UP Election Result 2022: ಹಲವು ಕ್ಷೇತ್ರಗಳಲ್ಲಿ ಬಿಜೆಪಿ ಮುನ್ನಡೆUP Election Result 2022: ಹಲವು ಕ್ಷೇತ್ರಗಳಲ್ಲಿ ಬಿಜೆಪಿ ಮುನ್ನಡೆ

ಪಂಜಾಬ್, ಗೋವಾ, ಮಣಿಪುರ, ಉತ್ತರಾಖಂಡ ಮತ್ತು ಉತ್ತರಪ್ರದೇಶದಲ್ಲಿ ಫೆಬ್ರವರಿ 10 ಮತ್ತು ಮಾರ್ಚ್ 7 ರ ನಡುವೆ ಏಳು ಹಂತಗಳಲ್ಲಿ ನಡೆದಿದೆ. ಮತ ಎಣಿಕೆಯು ಸುಮಾರು 12,000 ಎಣಿಕೆ ಹಾಲ್‌ಗಳಲ್ಲಿ ಬೆಳಿಗ್ಗೆ 8 ರಿಂದ ಆರಂಭವಾಗಿದೆ. ಜೊತೆಗೆ ವಿಧಾನಸಭೆ ಚುನಾವಣೆ ನಡೆದ ಐದು ರಾಜ್ಯಗಳ ಮತ ಎಣಿಕೆ ಕೇಂದ್ರಗಳಿಗೆ 50 ಸಾವಿರಕ್ಕೂ ಹೆಚ್ಚು ಅಧಿಕಾರಿಗಳನ್ನು ನಿಯೋಜಿಸಲಾಗಿದೆ.

No Question Of Tampering With EVMs, Avers CEC Sushil Chandra clarified

ಸಮಾಜವಾದಿ ಪಕ್ಷದ ಆರೋಪ

ಸಮಾಜವಾದಿ ಮುಖ್ಯಸ್ಥ ಅಖಿಲೇಶ್ ಯಾದವ್ ಅವರು ಅಭ್ಯರ್ಥಿಗಳಿಗೆ ಯಾವುದೇ ಮಾಹಿತಿಯಿಲ್ಲದೆ ಇವಿಎಂಗಳನ್ನು ಟ್ಯಾಂಪರಿಂಗ್ ಮಾಡುವ ಬಗ್ಗೆ ಆರೋಪ ಮಾಡಿದ್ದರು. ಜೊತೆಗೆ "ವಾರಣಾಸಿಯಲ್ಲಿ ಇವಿಎಂಗಳನ್ನು ಸಾಗಿಸುತ್ತಿದ್ದಾರೆ ನಾವು ಎಚ್ಚರದಿಂದಿರಬೇಕು. ಇದು ಮತಗಳ ಕಳ್ಳತನ. ನಾವು ನಮ್ಮ ಮತಗಳನ್ನು ಉಳಿಸಬೇಕಾಗಿದೆ. ನಾವು ಇದರ ವಿರುದ್ಧ ನ್ಯಾಯಾಲಯಕ್ಕೆ ಹೋಗಬೇಕು. ಆದರೆ ಅದಕ್ಕೂ ಮೊದಲು ಪ್ರಜಾಪ್ರಭುತ್ವವನ್ನು ಉಳಿಸಲು ನಾನು ಜನರಲ್ಲಿ ಮನವಿ ಮಾಡಲು ಬಯಸುತ್ತೇನೆ" ಎಂದು ಎಸ್ಪಿ ನಾಯಕ ಅಖಿಲೇಶ್ ಯಾದವ್ ಟ್ವೀಟ್ ಮಾಡಿದ್ದರು. ಅಖಿಲೆಶ್ ಅವರ ಟ್ವೀಟ್ ಬೆನ್ನಲ್ಲೇ ಹಲವಾರು ಎಸ್‌ಪಿ ಕಾರ್ಯಕರ್ತರು ಇವಿಎಂಗಳ ಕಳ್ಳತನದ ವಿರುದ್ಧ ಪ್ರತಿಭಟನೆ ನಡೆಸಿದರು. ಇದರು ರಾಜಕೀಯ ಕದನಕ್ಕೆ ಕಾರಣವಾಯಿತು.

ಯುಪಿಯಲ್ಲಿ ಭಾರತೀಯ ಜನತಾ ಪಕ್ಷವು ಮತ ​​ಕದಿಯಲು ಪ್ರಯತ್ನಿಸುತ್ತಿದೆ ಎಂಬ ಸಮಾಜವಾದಿ ಪಕ್ಷದ ಹೇಳಿಕೆಯನ್ನು ಲೇವಡಿ ಮಾಡಿದ ಕೇಂದ್ರ ಸಚಿವ ಅನುರಾಗ್ ಠಾಕೂರ್ ಅವರು ಮಾರ್ಚ್ 10 ರವರೆಗೆ ಕಾದು ನೋಡಲಿ. ಏಳು ಹಂತಗಳ ಚುನಾವಣೆಯ ಸಂದರ್ಭದಲ್ಲಿ ಎಸ್‌ಪಿ ಬಗ್ಗೆ ಉತ್ತರ ಪ್ರದೇಶದ ಜನರು ಗಂಭೀರವಾಗಿಲ್ಲ ಎಂಬುದು ಸಾಬೀತಾಗುತ್ತದೆ ಎಂದು ಹೇಳಿದ್ದಾರೆ.

No Question Of Tampering With EVMs, Avers CEC Sushil Chandra clarified

ಇವಿಯಂ ಸುರಕ್ಷಿತ ಕೊಠಡಿಗೆ ಅಪರಿಚಿತ ವ್ಯಕ್ತಿ

ಜೊತೆಗೆ ಉತ್ತರಪ್ರದೇಶ ವಿಧಾನಸಭಾ ಚುನಾವಣೆಯ ಬಳಿಕ ವಿದ್ಯುನ್ಮಾನ ಮತಯಂತ್ರಗಳನ್ನು (ಇವಿಎಂ) ಸಿಸಿಟಿವಿ ಕಣ್ಗಾವಲಿನಲ್ಲಿ ಇರಿಸಲಾಗಿದೆ. ಆದರೂ ಯಾವುದೇ ಗುರುತಿನ ಚೀಟಿ ಇಲ್ಲದೆ ಮಥುರಾದಲ್ಲಿ ಇವಿಯಂ ಇಡಲಾಗಿದ್ದ ಸುರಕ್ಷಿತ ಕೊಠಡಿಗೆ ವ್ಯಕ್ತಿಯೊಬ್ಬ ಪ್ರವೇಶಿಸಿದ್ದಾನೆ ಎಂದು ಸಮಾಜವಾದಿ ಪಕ್ಷ (ಎಸ್‌ಪಿ) ಮತ್ತು ಬಹುಜನ ಸಮಾಜ ಪಕ್ಷ (ಬಿಎಸ್‌ಪಿ) ಕಾರ್ಯಕರ್ತರು ವಿರೋಧ ವ್ಯಕ್ತಪಡಿಸಿದ್ದಾರೆ. ಈ ಗದ್ದಲದ ನಡುವೆ ಉತ್ತರಪ್ರದೇಶದಲ್ಲಿ ನಾಳೆ ಮತ ಎಣಿಕೆ ಆರಂಭಗೊಳ್ಳಲಿದ್ದು ರಾಜಕೀಯ ಪಕ್ಷಗಳ ಭವಿಷ್ಯ ನಿರ್ಧಾರವಾಗಲಿದೆ. ವ್ಯಕ್ತಿ ಇವಿಎಂಗಳನ್ನು ಟ್ಯಾಂಪರಿಂಗ್ ಮಾಡುತ್ತಿದ್ದಾನೆ ಎಂದು ಆರೋಪಿಸಿ ಎರಡು ಪಕ್ಷಗಳ ಕಾರ್ಯಕರ್ತರು ಘಟನೆಯ ಬಗ್ಗೆ ತನಿಖೆ ನಡೆಸುವಂತೆ ಒತ್ತಾಯಿಸಿದ್ದಾರೆ. ಮಾಧ್ಯಮದವರೊಂದಿಗೆ ಮಾತನಾಡಿದ ಎಸ್‌ಪಿ ಕಾರ್ಯಕರ್ತ ಸಂಜಯ್ ಲಾಥರ್, ''ಗುರುತಿನ ಚೀಟಿ ಇಲ್ಲದೆ ಯಾರನ್ನೂ ಇಲ್ಲಿಗೆ ಬಿಡುವುದಿಲ್ಲ ಎಂದು ಚುನಾವಣಾ ಆಯೋಗ ಈಗಾಗಲೇ ಹೇಳಿದೆ. ಆದರೆ ವ್ಯಕ್ತಿಯೊಬ್ಬ ಕಂಪ್ಯೂಟರ್ ಹೊಂದಿಸಬೇಕು ಎಂದು ಹೇಳಿ ಒಳಗೆ ಹೋಗಿದ್ದಾನೆ ಎಂದು ನಮಗೆ ತಿಳಿದುಬಂದಿದೆ. ಅಲ್ಲಿನ ವ್ಯವಸ್ಥೆ ಆತನನ್ನು ಪ್ರಶ್ನೆ ಮಾಡಿಲ್ಲ. ಜೊತೆಗೆ ಯಾವುದೇ ಅಧಿಕಾರಿ ಆತನೊಂದಿಗೆ ಜೊತೆಗೆ ಇರಲಿಲ್ಲ. ಕಡೆಪಕ್ಷ ಆ ವ್ಯಕ್ತಿ ಗುರುತಿನ ಚೀಟಿಯನ್ನು ಹೊಂದಿರಲಿಲ್ಲ. ಆ ವ್ಯಕ್ತಿ ನಾಲ್ಕು ಗಂಟೆಗಳ ಕಾಲ ಇವಿಎಂಗಳನ್ನು ಇರಿಸಲಾಗಿದ್ದ ಕೊಠಡಿಯೊಳಗೆ ಇದ್ದನು. ಹೀಗಾಗಿ ಜಿಲ್ಲಾಡಳಿತವು ಈ ಬಗ್ಗೆ ತನಿಖೆ ನಡೆಸಬೇಕು. ಇದು ಇವಿಎಂಗಳನ್ನು ಟ್ಯಾಂಪರಿಂಗ್ ಮಾಡಲು ಕಾರಣವಾಗಬಹುದು'' ಎಂದು ಆರೋಪಿಸಿದ್ದಾರೆ.

ಚುನಾವಣಾ ಫಲಿತಾಂಶವನ್ನು ಪರಿಶೀಲಿಸುವುದು ಹೇಗೆ? ಎಲ್ಲಿ?

ಒನ್ ಇಂಡಿಯಾ ಕನ್ನಡದ ಲೈವ್ ಲಿಂಕ್ ಮೂಲಕ ನೀವು ಪಂಚ ರಾಜ್ಯಗಳ ವಿಧಾನಸಭೆ ಚುನಾವಣಾ ಫಲಿತಾಂಶವನ್ನು ನೀವು ನೋಡಬಹುದು. ಇದನ್ನು ಹೊರತುಪಡಿಸಿ ಚುನಾವಣಾ ಫಲಿತಾಂಶಗಳನ್ನು ಭಾರತೀಯ ಚುನಾವಣಾ ಆಯೋಗದ (ಇಸಿಐ) ವೆಬ್‌ಸೈಟ್ ಅಂದರೆ eciresults.nic.in ನಲ್ಲಿ ಪರಿಶೀಲಿಸಬಹುದು.

English summary
Ahead of the counting of votes of assembly elections, the Election Commission of India issued a statement on Thursday. In a statement with Chief Election Commissioner Sushil Chandra as the undersigned, the Election Commission of India has made clear that there is 'no question' of tampering with the Electronic Voting Machines (EVMs) in any one of the five states.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X