ಲೈಂಗಿಕ ಕಿರುಕುಳ ಆರೋಪದಿಂದ ನೊಂದು ಟೆಕ್ಕಿ ಆತ್ಮಹತ್ಯೆ
ಲಕ್ನೋ, ಡಿಸೆಂಬರ್ 21: ಲೈಂಗಿಕ ಆರೋಪದಿಂದ ಮನನೊಂದು ಟೆಕ್ಕಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉತ್ತರಪ್ರದೇಶದ ನೋಯ್ಡಾದಲ್ಲಿ ನಡೆದಿದೆ.
ಸ್ವರೂಪ್‌ರಾಜ್(35) ಆತ್ಮಹತ್ಯೆ ಮಾಡಿಕೊಂಡಿರುವ ಟೆಕ್ಕಿ, ಕೆಲಸ ನಿರ್ವಹಿಸುತ್ತಿರುವ ಸ್ಥಳದಲ್ಲಿ ಅವರ ಮೇಲೆ ಲೈಂಗಿಕ ಕಿರುಕುಳ ಆರೋಪ ಕೇಳಿಬಂದಿತ್ತು. ಅದಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಸ್ವರೂಪ್ ರಾಜ್ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸ್ವರೂಪ್ ನೋಯ್ಡಾಸದ ಜೆನ್‌ಪ್ಯಾಕ್ಟ್ ಸಾಫ್ಟ್ ವೇರ್ ಕಂಪನಿಯ ಉಪಾಧ್ಯಕ್ಷರಾಗಿ ಕಾರ್ಯ ನಿರ್ವಹಿಸುತ್ತಿದ್ದರು.

ಕಂಪನಿಯಲ್ಲಿ ಇಬ್ಬರು ಮಹಿಳಾ ಸಹೋದ್ಯೋಗಿಗಳ ಅವರ ಮೇಲೆ ಲೈಂಗಿಕ ಕಿರುಕುಳ ಆರೋಪ ಮಾಡಿದ್ದರು. ಅದರಿಂದ ಮನನೊಂದಿದ್ದ ಟೆಕ್ಕಿ ಈ ನಿರ್ಧಾರ ತೆಗೆದುಕೊಂಡಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಒಳಪಡಿಸಲಾಗಿದೆ. ಘಟನೆ ಕುರಿತು ಪೊಲೀಸರು ಸ್ವಯಂಕೃತ ದೂರು ದಾಖಲಿಸಿಕೊಂಡಿದ್ದು ತನಿಖೆ ಆರಂಭಿಸಿದ್ದಾರೆ.
ಆತ್ಮಹತ್ಯೆಗೂ ಮುನ್ನ ಸ್ವರೂಪ್ ತನ್ನ ಪತ್ನಿಗೆ ಪತ್ರ ಬರೆದಿದ್ದರು ಅದರಲ್ಲಿ ನನ್ನ ಕಂಪನಿಯಲ್ಲಿ ಇಬ್ಬರು ಸಹೋದ್ಯೋಗಿಗಳು ನನ್ನ ಮೇಲೆ ಲೈಂಗಿಕ ಕಿರುಕುಳ ಆರೋಪ ಮಾಡಿದ್ದಾರೆ.
ನಿನ್ನನ್ನು ನಾನು ಎಷ್ಟು ಪ್ರೀತಿಸುತ್ತೇನೆ ಎನ್ನುವುದು ನಿನಗೆ ಗೊತ್ತು, ನನ್ನನ್ನು ನಂಬು ನಾನು ಯಾವತ್ತೂ ಆ ರೀತಿ ನಡೆದುಕೊಂಡಿಲ್ಲ, ಆದರೆ ಸಮಾಜ ನನ್ನೆಡೆಗೆ ಬೆರಳು ಮಾಡಿ ತೋರಿಸುತ್ತಿದೆ. ಒಂದೊಮ್ಮೆ ನಾನು ತಪ್ಪು ಮಾಡಿಲ್ಲ ಎಂದು ಸಾಬೀತಾದರೂ ಕೂಡ ಎಲ್ಲರೂ ನನ್ನನ್ನು ತಪ್ಪಿತಸ್ಥ ಸ್ಥಾನದಲ್ಲಿಯೇ ನಿಲ್ಲಿಸುತ್ತಾರೆ ಅದನ್ನು ಸಹಿಸಿಕೊಳ್ಳಲು ಸಾಧ್ಯವಿಲ್ಲ ಎಂಸು ಬರೆದಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.












Click it and Unblock the Notifications