ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಲೈಂಗಿಕ ಕಿರುಕುಳ ಆರೋಪದಿಂದ ನೊಂದು ಟೆಕ್ಕಿ ಆತ್ಮಹತ್ಯೆ

|
Google Oneindia Kannada News

ಲಕ್ನೋ, ಡಿಸೆಂಬರ್ 21: ಲೈಂಗಿಕ ಆರೋಪದಿಂದ ಮನನೊಂದು ಟೆಕ್ಕಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉತ್ತರಪ್ರದೇಶದ ನೋಯ್ಡಾದಲ್ಲಿ ನಡೆದಿದೆ.

ಸ್ವರೂಪ್‌ರಾಜ್(35) ಆತ್ಮಹತ್ಯೆ ಮಾಡಿಕೊಂಡಿರುವ ಟೆಕ್ಕಿ, ಕೆಲಸ ನಿರ್ವಹಿಸುತ್ತಿರುವ ಸ್ಥಳದಲ್ಲಿ ಅವರ ಮೇಲೆ ಲೈಂಗಿಕ ಕಿರುಕುಳ ಆರೋಪ ಕೇಳಿಬಂದಿತ್ತು. ಅದಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಟೆಕ್ಕಿ ಅಜಿತಾಬ್ ನಾಪತ್ತೆ ಪ್ರಕರಣ ಸಿಬಿಐ ತನಿಖೆಗೆ ಹೈಕೋರ್ಟ್ ಆದೇಶ ಟೆಕ್ಕಿ ಅಜಿತಾಬ್ ನಾಪತ್ತೆ ಪ್ರಕರಣ ಸಿಬಿಐ ತನಿಖೆಗೆ ಹೈಕೋರ್ಟ್ ಆದೇಶ

ಸ್ವರೂಪ್ ರಾಜ್ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸ್ವರೂಪ್ ನೋಯ್ಡಾಸದ ಜೆನ್‌ಪ್ಯಾಕ್ಟ್ ಸಾಫ್ಟ್ ವೇರ್ ಕಂಪನಿಯ ಉಪಾಧ್ಯಕ್ಷರಾಗಿ ಕಾರ್ಯ ನಿರ್ವಹಿಸುತ್ತಿದ್ದರು.

Noida Techie Defended Self Against Sexaul Harassment Charges In Suicide Note

ಕಂಪನಿಯಲ್ಲಿ ಇಬ್ಬರು ಮಹಿಳಾ ಸಹೋದ್ಯೋಗಿಗಳ ಅವರ ಮೇಲೆ ಲೈಂಗಿಕ ಕಿರುಕುಳ ಆರೋಪ ಮಾಡಿದ್ದರು. ಅದರಿಂದ ಮನನೊಂದಿದ್ದ ಟೆಕ್ಕಿ ಈ ನಿರ್ಧಾರ ತೆಗೆದುಕೊಂಡಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಒಳಪಡಿಸಲಾಗಿದೆ. ಘಟನೆ ಕುರಿತು ಪೊಲೀಸರು ಸ್ವಯಂಕೃತ ದೂರು ದಾಖಲಿಸಿಕೊಂಡಿದ್ದು ತನಿಖೆ ಆರಂಭಿಸಿದ್ದಾರೆ.

ಗೆಳತಿಯೊಂದಿಗೆ ಕಲಹ: ಲಿವಿಂಗ್ ಟುಗೆದರ್ ನಲ್ಲಿದ್ದ ಟೆಕ್ಕಿ ಆತ್ಮಹತ್ಯೆ ಗೆಳತಿಯೊಂದಿಗೆ ಕಲಹ: ಲಿವಿಂಗ್ ಟುಗೆದರ್ ನಲ್ಲಿದ್ದ ಟೆಕ್ಕಿ ಆತ್ಮಹತ್ಯೆ

ಆತ್ಮಹತ್ಯೆಗೂ ಮುನ್ನ ಸ್ವರೂಪ್ ತನ್ನ ಪತ್ನಿಗೆ ಪತ್ರ ಬರೆದಿದ್ದರು ಅದರಲ್ಲಿ ನನ್ನ ಕಂಪನಿಯಲ್ಲಿ ಇಬ್ಬರು ಸಹೋದ್ಯೋಗಿಗಳು ನನ್ನ ಮೇಲೆ ಲೈಂಗಿಕ ಕಿರುಕುಳ ಆರೋಪ ಮಾಡಿದ್ದಾರೆ.

ಮಾಜಿ ಪ್ರೇಯಸಿಯನ್ನು ಬೆದರಿಸಿ ರೇಪ್ ಮಾಡಿದ ಸಾಫ್ಟ್ ವೇರ್ ಎಂಜಿನಿಯರ್ ಮಾಜಿ ಪ್ರೇಯಸಿಯನ್ನು ಬೆದರಿಸಿ ರೇಪ್ ಮಾಡಿದ ಸಾಫ್ಟ್ ವೇರ್ ಎಂಜಿನಿಯರ್

ನಿನ್ನನ್ನು ನಾನು ಎಷ್ಟು ಪ್ರೀತಿಸುತ್ತೇನೆ ಎನ್ನುವುದು ನಿನಗೆ ಗೊತ್ತು, ನನ್ನನ್ನು ನಂಬು ನಾನು ಯಾವತ್ತೂ ಆ ರೀತಿ ನಡೆದುಕೊಂಡಿಲ್ಲ, ಆದರೆ ಸಮಾಜ ನನ್ನೆಡೆಗೆ ಬೆರಳು ಮಾಡಿ ತೋರಿಸುತ್ತಿದೆ. ಒಂದೊಮ್ಮೆ ನಾನು ತಪ್ಪು ಮಾಡಿಲ್ಲ ಎಂದು ಸಾಬೀತಾದರೂ ಕೂಡ ಎಲ್ಲರೂ ನನ್ನನ್ನು ತಪ್ಪಿತಸ್ಥ ಸ್ಥಾನದಲ್ಲಿಯೇ ನಿಲ್ಲಿಸುತ್ತಾರೆ ಅದನ್ನು ಸಹಿಸಿಕೊಳ್ಳಲು ಸಾಧ್ಯವಿಲ್ಲ ಎಂಸು ಬರೆದಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

English summary
An IT firm executive, who was suspended temporarily over allegations of sexual harassment at workplace, was found dead at his home in Noida.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X