ಬಿಜೆಪಿ ನಾಯಕಿ ಜಯಪ್ರದಾ ವಿರುದ್ಧ ಜಾಮೀನು ರಹಿತ ವಾರೆಂಟ್ ಜಾರಿ
ರಾಮ್‌ಪುರ, ಮಾರ್ಚ್ 7: ಬಿಜೆಪಿ ನಾಯಕಿ ಹಾಗೂ ಹಿರಿಯ ನಟಿ ಜಯಪ್ರದಾ ವಿರುದ್ಧ ಜಾಮೀನು ರಹಿತ ವಾರೆಂಟ್ ಜಾರಿಯಾಗಿದೆ.
ಚುನಾವಣಾ ಮಾದರಿ ನೀತಿ ಸಂಹಿತೆ ಉಲ್ಲಂಘನೆ ಮಾಡಿದ ಆರೋಪದಲ್ಲಿ ಜಯಪ್ರದಾ ವಿರುದ್ಧ ಉತ್ತರ ಪ್ರದೇಶ ನ್ಯಾಯಾಲಯವು ವಾರೆಂಟ್ ನೀಡಿದೆ.
ಲೋಕಸಭಾ ಚುನಾವಣೆಯಲ್ಲಿ ಜಯಪ್ರದಾ ಅವರು ಸಮಾಜವಾದಿ ಪಕ್ಷದ ಪ್ರತಿಸ್ಪರ್ಧಿ ಅಜಂಖಾನ್ ವಿರುದ್ಧ ಸುಮಾರು 1 ಲಕ್ಷಕ್ಕೂ ಹೆಚ್ಚು ಮತಗಳಿಂದ ಸೋಲು ಅನುಭವಿಸಿದ್ದರು.

ಕಳೆದ ವರ್ಷ ನಡೆದ ಲೋಕಸಭಾ ಚುನಾವಣೆಯಲ್ಲಿ 57 ವರ್ಷದ ಜಯಪ್ರದಾ ಅವರು ಉತ್ತರ ಪ್ರದೇಶದ ರಾಮ್‌ಪುರದಿಂದ ಕಣಕ್ಕಿಳಿದಿದ್ದರು. ಚುನಾವಣಾ ವೇಳೆ ಮಾದರಿ ನೀತಿ ಸಂಹಿತೆ ಉಲ್ಲಂಘಿಸಿದ್ದಾರೆ ಎಂದು ಆರೋಪಿಸಿ ದೂರು ನೀಡಲಾಗಿತ್ತು. ಇದೀಗ ವಾರೆಂಟ್ ಹೊರಡಿಸಿದ್ದು, ಏಪ್ರಿಲ್ 20 ರಂದು ವಿಚಾರಣೆ ನಡೆಯಲಿದೆ.











Click it and Unblock the Notifications