ಮೋಸ್ಟ್ ವಾಂಟೆಡ್ ಕ್ರಿಮಿನಲ್ ವಿಕಾಸ್ ದುಬೆಯ ರಾಜಕೀಯ ಗುರುವಿನ ಹೆಸರು ಬಹಿರಂಗ
ಲಕ್ನೋ, ಜುಲೈ 6: ಎಂಟು ಪೊಲೀಸರ ಹತ್ಯೆ ನಡೆಸಿ ತಲೆ ಮರೆಸಿಕೊಂಡಿರುವ ಮೋಸ್ಟ್ ವಾಂಟೆಡ್ ಕ್ರಿಮಿನಲ್ ವಿಕಾಸ್ ದುಬೆಯನ್ನು ಬಂಧಿಸಲು 25 ತಂಡಗಳನ್ನು ರಚನೆ ಮಾಡಲಾಗಿದೆ. ಕಾನ್ಪುರದ ಐಜಿ ಮೋಹಿತ್ ಅಗರ್ವಾಲ್ ಸೋಮವಾರ ಈ ಬಗ್ಗೆ ಮಾಹಿತಿ ನೀಡಿದ್ದಾರೆ.
Recommended Video
ಉತ್ತರ ಪ್ರದೇಶದ ಪೊಲೀಸ್ ಇಲಾಖೆ, ವಿಜಯ್ ದುಬೆ ಬಗ್ಗೆ ಸುಳಿವು ಕೊಟ್ಟವರಿಗೆ 2.5 ಲಕ್ಷ ಬಹುಮಾನ ನೀಡುವುದಾಗಿ ಘೋಷಣೆ ಮಾಡಿದೆ. ಈ ನಡುವೆ, ವಿಕಾಸ್ ದುಬೆಯ ಸಂದರ್ಶನದ ವಿಡಿಯೋವೊಂದು ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದೆ.
ಈ ಸಂದರ್ಶನ ಯಾವತ್ತು ನಡೆದದ್ದು ಎನ್ನುವುದರ ಬಗ್ಗೆ ಮಾಹಿತಿಯಿಲ್ಲದಿದ್ದರೂ, ತನ್ನ ರಾಜಕೀಯ ಗುರು ಯಾರು ಎನ್ನುವುದನ್ನು ವಿಕಾಸ್ ದುಬೆ ಸಂದರ್ಶನದಲ್ಲಿ ಬಾಯಿಬಿಟ್ಟಿದ್ದಾನೆ.

"ತಾನು ರಾಜಕೀಯಕ್ಕೆ ಪ್ರವೇಶಿಸಲು, ಉತ್ತರ ಪ್ರದೇಶದ ಮಾಜಿ ಸ್ಪೀಕರ್, ಸಮಾಜವಾದಿ ಪಕ್ಷದ ಮುಖಂಡ ಹರಿಕೃಷ್ಣ ಶ್ರೀವಾಸ್ತವ ಕಾರಣ. ಇವರೇ ನನ್ನ ರಾಜಕೀಯ ಗುರು"ಎಂದು ವಿಕಾಸ್ ದುಬೆ ಹೇಳಿದ್ದಾನೆ. ದಿ.ಹರಿಕೃಷ್ಣ ಶ್ರೀವಾಸ್ತವ, ಮುಲಾಯಂ ಸಿಂಗ್ ಸರಕಾರದ ಅವಧಿಯಲ್ಲಿ ಸ್ಪೀಕರ್ ಆಗಿದ್ದರು ಮತ್ತು ಹಲವು ಖಾತೆಯನ್ನೂ ನಿಭಾಯಿಸಿದ್ದವರು.
"I am politician Not a criminal" Statement of "Terrorist" #VikashDubey year- 2006.
— Brajesh Misra (@brajeshlive) July 5, 2020
Where is this Terrorist ? Demolition of his house is not solution. It's frustration. Catch him if you can @Uppolice @kanpurnagarpol pic.twitter.com/1pMGfb8i4S
"ನನ್ನನ್ನು ರಾಜಕೀಯಕ್ಕೆ ಕರೆತಂದವರು ಹರಿಕೃಷ್ಣ ಶ್ರೀವಾಸ್ತವ. ನನಗೆ ಅಪರಾಧಿಗಳು ಮತ್ತು ಅಪರಾಧದ ಜಗತ್ತಿನ ನಡುವೆ ನೇರ ಸಂಬಂಧವಿಲ್ಲ. ರಾಜಕೀಯದಲ್ಲಿ ನನ್ನ ಬೆಳವಣಿಗೆ ಕಂಡು, ಹೊಟ್ಟೆಕಿಚ್ಚು ಪಟ್ಟವರೇ ಹೆಚ್ಚು. ಹಾಗಾಗಿಯೇ ನನ್ನ ವಿರುದ್ದ ಪ್ರಕರಣಗಳು ದಾಖಲಾಗಿವೆ"ಎಂದು ವಿಕಾಸ್ ದುಬೆ ಸಂದರ್ಶನದಲ್ಲಿ ಹೇಳಿದ್ದಾನೆ.
-
Karnataka Train: ಕಲಬುರಗಿ - ಕಲ್ಯಾಣ ಕರ್ನಾಟಕದಲ್ಲಿ ರೈಲು ಪ್ರಯಾಣಿಕರ ನಿತ್ಯ ಪರದಾಟ: ಸಿದ್ದು ಮಠಪತಿ ಬರಹ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
ಸೌದಿ ಅರೇಬಿಯಾದಲ್ಲಿ ಪಾಕಿಸ್ತಾನಿ ಸೇನಾಪಡೆ ನಿಯೋಜನೆ: ಮಿತ್ರ ರಾಷ್ಟ್ರಕ್ಕೆ 13,000 ಸೈನಿಕರು, ಯುದ್ಧ ವಿಮಾನಗಳ ರವಾನೆ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ -
Bhagyalakshmi Serial: ಕೊನೆಗೂ ಭಾಗ್ಯಲಕ್ಷ್ಮೀ - ಆದಿ ಮದುವೆ, ಮೂರು ಕುಟುಂಬಗಳನ್ನು ಒಂದು ಮಾಡುವ ಟಾಸ್ಕ್ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
Banana Price: ತಮಿಳುನಾಡು ಬಿಸಿಗಾಳಿ ಎಫೆಕ್ಟ್ಗೆ ಕುಸಿದ ಬಾಳೆಹಣ್ಣು ಧಾರಣೆ: ಬೆಂಗಳೂರಿನಲ್ಲಿ ಕೆ.ಜಿಗೆ 7 ರೂಪಾಯಿ -
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
Asha Bosle Net Worth: ದೇಶ-ವಿದೇಶಗಳಲ್ಲಿ ರೆಸ್ಟೊರೆಂಟ್ಸ್, ನೂರಾರು ಕೋಟಿ ಒಡತಿ ಆಶಾ ಭೋಸ್ಲೆ ಒಟ್ಟು ಆಸ್ತಿ ವಿವರ ಹೀಗಿದೆ -
Summer Specail Train: ಮೈಸೂರಿನಿಂದ ಇಲ್ಲಿಗೆ ವಿಶೇಷ ಎಕ್ಸ್ಪ್ರೆಸ್ ರೈಲು, 3 ರಾಜ್ಯಗಳಿಗೆ ಅನುಕೂಲ












Click it and Unblock the Notifications