ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಹತ್ರಾಸ್ ಅತ್ಯಾಚಾರ ಘಟನೆ ಬೆನ್ನಲ್ಲೇ ಸಿಎಂ ಯೋಗಿ ಟ್ವೀಟ್

|
Google Oneindia Kannada News

ಲಕ್ನೋ, ಅಕ್ಟೋಬರ್.02: ಉತ್ತರ ಪ್ರದೇಶದ ಹತ್ರಾಸ್ ನಲ್ಲಿ ನಡೆದ ಸಾಮೂಹಿಕ ಅತ್ಯಾಚಾರ ಘಟನೆಗೆ ಸಂಬಂಧಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸ್ಪಷ್ಟನೆ ನೀಡಿದ್ದಾರೆ. ರಾಜ್ಯದಲ್ಲಿರುವ ತಾಯಂದಿರು ಮತ್ತು ಸಹೋದರಿಯರ ಸುರಕ್ಷತೆಗೆ ಸರ್ಕಾರ ಬದ್ಧವಾಗಿದೆ ಎಂದಿದ್ದಾರೆ.

"ಉತ್ತರ ಪ್ರದೇಶದಲ್ಲಿ ತಾಯಂದಿರು ಮತ್ತು ಸಹೋದರಿಯರಿಗೆ ಹಾನಿ ಮಾಡುವ ಬಗ್ಗೆ ಆಯೋಚಿಸುವುದೂ ತಪ್ಪು. ಇನ್ನು ಮುಂದೆ ಅಂಥವರಿಗೆ ಯಾವ ರೀತಿಯ ಶಿಕ್ಷೆ ನೀಡಲಾಗುತ್ತದೆ ಎಂದರೆ ಭವಿಷ್ಯದಲ್ಲಿ ಜನರು ಈ ಬಗ್ಗೆ ಆಲೋಚನೆಯನ್ನು ಮಾಡಬಾರದು. ಅಂಥ ಕಾನೂನು ಜಾರಿಗೊಳಿಸಿ ಶಿಸ್ತುಕ್ರಮ ತೆಗೆದುಕೊಳ್ಳಲಾಗುತ್ತದೆ" ಎಂದು ಟ್ವೀಟ್ ಮಾಡಿದ್ದಾರೆ.

ಹತ್ರಾಸ್ ಭೇಟಿಗೆ ತೆರಳಿದ ಟಿಎಂಸಿ ಸಂಸದರನ್ನು ನೆಲಕ್ಕುರುಳಿಸಿದ ಪೊಲೀಸ್ಹತ್ರಾಸ್ ಭೇಟಿಗೆ ತೆರಳಿದ ಟಿಎಂಸಿ ಸಂಸದರನ್ನು ನೆಲಕ್ಕುರುಳಿಸಿದ ಪೊಲೀಸ್

"ರಾಜ್ಯದ ತಾಯಂದಿರು ಮತ್ತು ಅಕ್ಕ-ತಂಗಿಯರ ಸುರಕ್ಷತೆ, ಭದ್ರತೆ ಮತ್ತು ರಾಜ್ಯದ ಸರ್ವಾಗೀಣ ಅಭಿವೃದ್ಧಿಗೆ ನಮ್ಮ ಸರ್ಕಾರವು ಬದ್ಧವಾಗಿದೆ. ಈ ಬಗ್ಗೆ ನಾನು ಪ್ರಮಾಣ ಮಾಡಿ ಹೇಳುತ್ತೇನೆ" ಎಂದು ಸಿಎಂ ಯೋಗಿ ಆದಿತ್ಯನಾಥ್ ಟ್ವಿಟರ್ ನಲ್ಲಿ ಬರೆದುಕೊಂಡಿದ್ದಾರೆ.

Our Govt Committed To Safety, Security Of All Women: CM Yogi Adityanath Tweet

ಸಿಎಂ ಯೋಗಿ ಸರ್ಕಾರದ ವಿರುದ್ಧ ಆಕ್ರೋಶ:

ಹತ್ರಾಸ್ ನಲ್ಲಿ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣ ಮತ್ತು ನಾಯಕರನ್ನು ಸಂತ್ರಸ್ತೆ ಸಂಬಂಧಿಕರ ಭೇಟಿಗೆ ಅವಕಾಶ ನೀಡದ ಕ್ರಮವನ್ನು ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಆದಿಯಾಗಿ ಹಲವು ನಾಯಕರು ಲಘುವಾಗಿ ಟೀಕಿಸಿದ್ದರು. ಉತ್ತರ ಪ್ರದೇಶದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟು ಹೋಗಿದ್ದು, ತಕ್ಷಣವೇ ಯೋಗಿ ಆದಿತ್ಯನಾಥ್ ತಮ್ಮ ಸಿಎಂ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಬೇಕು ಎಂದು ಆಗ್ರಹಿಸಿದ್ದಾರೆ.

ನವದೆಹಲಿಯಲ್ಲಿ ಮಾತನಾಡಿದ ಅವರು, ಸಾಮೂಹಿಕ ಅತ್ಯಾಚಾರಕ್ಕೆ ಒಳಗಾದ ಮೃತ ಯುವತಿ ಸಂಬಂಧಿಕರ ಜೊತೆಗೆ ಉತ್ತರಪ್ರದೇಶ ಸರ್ಕಾರ ಮತ್ತು ಪೊಲೀಸರು ನಡೆದುಕೊಂಡ ರೀತಿಯು ಸರಿಯಾಗಿಲ್ಲ ಎಂದು ದೂಷಿಸಿದ್ದರು. ನಾವು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಜೀವಿಸುತ್ತಿರುವುದನ್ನು ಎಲ್ಲರೂ ನೆನಪಿನಲ್ಲಿ ಇಟ್ಟುಕೊಳ್ಳಬೇಕು. ಇಲ್ಲಿ ಪ್ರಜೆಗಳೇ ಪ್ರಭುಗಳು ಆಗಿರುತ್ತಾರೆ ಎನ್ನುವುದನ್ನು ಮರೆಯಬಾರದು. ಪ್ರಜೆಗಳ ತೀರ್ಮಾನವೇ ಅಂತಿಮವಾಗಿರುತ್ತದೆ. ಇಂಥ ವ್ಯವಸ್ಥೆಯಲ್ಲಿ ನೀವೇಲ್ಲ ಸೇವಕರೇ ಹೊತರೂ ಮಾಲೀಕರಲ್ಲ ಎಂಬುದನ್ನು ಮರೆತು ವರ್ತಿಸಕೂಡದು ಎಂದು ಸಿಎಂ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ.

English summary
Our Govt Committed To Safety, Security Of All Women: CM Yogi Adityanath Tweet.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X