ಕಾರಿನ ಮೇಲೆ ದಾಳಿ: ಸೂಕ್ತ ತನಿಖೆ ನಡೆಸಿ, ನ್ಯಾಯ ಕೊಡಿಸಿ ಎಂದ ಓವೈಸಿ
ಲಕ್ನೋ, ಫೆಬ್ರವರಿ 5:ಉತ್ತರ ಪ್ರದೇಶದ ಮೀರತ್‌ನಲ್ಲಿ ಚುನಾವಣಾ ಪ್ರಚಾರ ಮುಗಿಸಿ ದೆಹಲಿಗೆ ವಾಪಸಾಗುತ್ತಿದ್ದ ವೇಳೆ ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಅವರ ಕಾರಿನ ಮೇಲೆ ನಡೆದ ಗುಂಡಿನ ದಾಳಿ ಕುರಿತು ಸೂಕ್ತ ತನಿಖೆ ನಡೆಸಬೇಕು ಎಂದು ಒತ್ತಾಯಿಸಲಾಗಿದೆ.
ಈ ಕುರಿತು ಓವೈಸಿ ಮಾತನಾಡಿ, ಈ ಘಟನೆಗೆ ಸಂಬಂಧಿಸಿದಂತೆ ತನಿಖೆಯಾಗಬೇಕು, ನನಗೆ ನ್ಯಾಯ ಸಿಗುವಂತೆ ನೀವು ಮಾಡಬೇಕು ಎಂದು ಸಿಎಂ ಯೋಗಿ ಆದಿತ್ಯನಾಥ್ ಅವರನ್ನು ಒತ್ತಾಯಿಸಿದ್ದಾರೆ.
ನಾನು ಸಾವಿಗೆ ಹೆದರುವುದಿಲ್ಲ. ನನಗೆ Z ವರ್ಗದ ಭದ್ರತೆ ನೀಡುವಂತೆ ಬಯಸುವುದಿಲ್ಲ. ಅದನ್ನ ತಿರಸ್ಕರಿಸುತ್ತೇನೆ ಎಂದಿರುವ ಹೈದರಾಬಾದ್ ಸಂಸದ, ತಮಗೆ A ವರ್ಗದ ಪ್ರಜೆಯನ್ನಾಗಿ ಮಾಡುವಂತೆ ಮನವಿ ಮಾಡಿದರು.

ಈ ಘಟನೆಗೆ ಸಂಬಂಧಿಸಿದಂತೆ ನಾನು ಮೌನಿಯಾಗಿರುವುದಿಲ್ಲ ಎಂದಿರುವ ಓವೈಸಿ, ದಯವಿಟ್ಟು ನನಗೆ ನ್ಯಾಯ ಕೊಡಿ ಎಂದರು. ಶೂಟರ್ಗಳ ಮೇಲೆ ಕಠಿಣ ಕ್ರಮಕೈಗೊಳ್ಳುವುದಷ್ಟೇ ಅಲ್ಲ, ಪ್ರಕರಣದ ಸೂಕ್ತ ತನಿಖೆಗೆ ಆದೇಶಿಸಿದ್ದಾರೆ.
ಇದೇ ಘಟನೆಗೆ ಸಂಬಂಧಿಸಿದಂತೆ ಫೆಬ್ರವರಿ 7ರಂದು ಸಂಸತ್ತಿನಲ್ಲಿ ಮಾತನಾಡುವುದಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.
ಯುಪಿಯಲ್ಲಿ ಚುನಾವಣಾ ಪ್ರಚಾರ ಮುಗಿಸಿ ದೆಹಲಿಗೆ ವಾಪಸಾಗುತ್ತಿದ್ದ ಅಸಾದುದ್ದೀನ್ ಓವೈಸಿ ಅವರ ಬೆಂಗಾವಲು ವಾಹನದ ಮೇಲೆ ನಿನ್ನೆ ಗುಂಡು ಹಾರಿಸಲಾಗಿತ್ತು. ಕೂಡಲೇ ಎಚ್ಚೆತ್ತ ಪೊಲೀಸರು, ಸಿಸಿಟಿವಿ ದೃಶ್ಯ ಆಧರಿಸಿ ಆರೋಪಿಗಳ ಪತ್ತೆಗೆ ಮುಂದಾಗಿದ್ದರು. ಸದ್ಯ ಬಂಧಿತರಿಂದ ಅಕ್ರಮವಾಗಿ ಇಟ್ಟುಕೊಂಡಿದ್ದ 9 ಎಂಎಂ ಪಿಸ್ತೂಲ್ ಅನ್ನು ವಶಪಡಿಸಿಕೊಳ್ಳಲಾಗಿದೆ.
ಪಶ್ಚಿಮ ಉತ್ತರ ಪ್ರದೇಶದ ಹಾಪುರ್‌ನಲ್ಲಿರುವ ದೆಹಲಿ ಬಳಿಯ ಟೋಲ್ ಪ್ಲಾಜಾದಲ್ಲಿ ಈ ಘಟನೆ ನಡೆದಿದೆ. ಶೂಟರ್‌ಗಳು ಶಸ್ತ್ರಾಸ್ತ್ರಗಳನ್ನು ಬಿಟ್ಟು ಪರಾರಿಯಾಗಿದ್ದಾರೆ ಎಂದು ಹೈದರಾಬಾದ್ ಸಂಸದರು ತಿಳಿಸಿದ್ದಾರೆ. "ಮೀರತ್‌ನ ಕಿಥೌರ್‌ನಲ್ಲಿ ಚುನಾವಣಾ ಕಾರ್ಯಕ್ರಮದ ನಂತರ ನಾನು ದೆಹಲಿಗೆ ಹೊರಟಿದ್ದೆ. ಛಜರ್ಸಿ ಟೋಲ್ ಪ್ಲಾಜಾ ಬಳಿ ಇಬ್ಬರು ನನ್ನ ವಾಹನದ ಮೇಲೆ ಮೂರರಿಂದ ನಾಲ್ಕು ಸುತ್ತಿನ ಬುಲೆಟ್‌ಗಳನ್ನು ಹಾರಿಸಿದರು; ಒಟ್ಟು 3-4 ಜನರಿದ್ದರು," ಎಂದು ಓವೈಸಿ ಹೇಳಿದ್ದಾರೆ.
ಈ ದಾಳಿಯಲ್ಲಿ ನನ್ನ ಕಾರಿನ ಟೈರ್ ಪಂಕ್ಚರ್ ಆಗಿದ್ದು, ಇನ್ನೊಂದು ಕಾರಿನಲ್ಲಿ ನಾನು ಪ್ರಯಾಣ ಮುಂದುವರಿಸಿದೆ ಎಂದು ಓವೈಸಿ ತಿಳಿಸಿದ್ದಾರೆ. ಟೋಲ್ ಪ್ಲಾಜಾದಿಂದ ಓವೈಸಿ ಅವರು ಟ್ವೀಟ್ ಮಾಡಿದ ಚಿತ್ರಗಳಲ್ಲಿ ಅವರ ಬಿಳಿ ಎಸ್ ಯುವಿ ಕಾರಿನ ಕೆಳ ಭಾಗದಲ್ಲಿ ಎರಡು ಬುಲೆಟ್ ರಂಧ್ರಗಳನ್ನು ತೋರಿಸಿದೆ, ಹಾಗೂ ಈ ಬುಲೆಟ್ ಗಳು ಸ್ಥಳದಲ್ಲೇ ಇವೆ. ಮೂರನೇ ಬುಲೆಟ್ ಟೈರ್‌ಗೆ ತಗುಲಿದೆ ಎನ್ನಲಾಗಿದೆ.
ಶೂಟರ್ ಗಳ ಬಂಧನ: ಘಟನೆಯ ಬಳಿಕ ಸುದ್ದಿಸಂಸ್ಥೆ ಜೊತೆ ಮಾತನಾಡಿದ ಓವೈಸಿ, ಪೊಲೀಸರು ಶೂಟರ್‌ಗಳಲ್ಲಿ ಒಬ್ಬನನ್ನು ಬಂಧಿಸಿ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಂಡಿದ್ದಾರೆ ಎಂದು ತಿಳಿಸಿದ್ದಾರೆ. ಈ ಬಗ್ಗೆ ಚುನಾವಣಾ ಆಯೋಗ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದರು. "ನಮ್ಮ ಮೇಲೆ ದಾಳಿ ಮಾಡುವವರು ಪ್ರತಿದಿನ ನಮ್ಮನ್ನು ಹಿಂಬಾಲಿಸುತ್ತಿದ್ದಾರೆ ಎಂದು ಭಾವಿಸುತ್ತೇನೆ. ಪೊಲೀಸರು ಒಬ್ಬನನ್ನು ಬಂಧಿಸಿದ್ದು, ಶಸ್ತಾಸ್ತ್ರಗಳನ್ನು ವಶಪಡಿಸಿಕೊಂಡಿದ್ದಾರೆ.
ಈ ಬಗ್ಗೆ ತನಿಖೆ ನಡೆಸುವಂತೆ ಚುನಾವಣಾ ಆಯೋಗವನ್ನು ಕೋರುತ್ತೇನೆ. ಈ ಬಗ್ಗೆ ಸೂಕ್ತ ತನಿಖೆ ನಡೆಸುವುದು ರಾಜ್ಯ ಹಾಗೂ ಕೇಂದ್ರ ಸರ್ಕಾರಗಳ ಜವಾಬ್ದಾರಿಯಾಗಿದೆ' ಎಂದು ಪ್ರತಿಕ್ರಿಯಿಸಿದ್ದಾರೆ.












Click it and Unblock the Notifications