ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಓವೈಸಿ ಕಾರಿನ ಮೇಲೆ ದಾಳಿ: ಕಾರಣ ಬಹಿರಂಗಪಡಿಸಿದ ಆರೋಪಿ

|
Google Oneindia Kannada News

ಮೀರತ್ ಫೆಬ್ರವರಿ 03: ಚುನಾವಣಾ ಪ್ರಚಾರನಿರತ ಅಸಾದುದ್ದೀನ್ ಓವೈಸಿ ಕಾರ್ ಮೇಲಿನ ದಾಳಿಗೆ ಸಂಬಂಧಿಸಿದಂತೆ, ದಾಳಿಕೋರರಲ್ಲಿ ಒಬ್ಬನನ್ನು ಬಂಧಿಸಲಾಗಿದೆ. ಗುರುವಾರದಂದು ನಡೆದ ಘಟನೆಗೆ ಸಂಬಂಧಿಸಿದಂತೆ ಮತ್ತೋರ್ವನನ್ನು ವಶಕ್ಕೆ ತೆಗೆದುಕೊಳ್ಳಲಾಗಿದ್ದು ವಿಚಾರಣೆ ನಡೆಯುತ್ತಿದೆ ಎಂದು ಉತ್ತರ ಪ್ರದೇಶ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಹಿಂದೂ ವಿರೋಧಿ ಹೇಳಿಕೆಗಳಿಂದ ಮನನೊಂದ ಅಸಾದುದ್ದೀನ್ ಓವೈಸಿ ಮೇಲೆ ಹಲ್ಲೆ ನಡೆಸಿರುವುದಾಗಿ ವಿಚಾರಣೆ ವೇಳೆ ಆರೋಪಿ ಪೊಲೀಸರಿಗೆ ತಿಳಿಸಿದ್ದಾನೆ.

ಮೀರತ್‌ನಲ್ಲಿ ಚುನಾವಣಾ ಕಾರ್ಯಕ್ರಮದ ನಂತರ ದೆಹಲಿಗೆ ಹೋಗುತ್ತಿದ್ದಾಗ ಅವರ ಕಾರಿನ ಮೇಲೆ ಗುಂಡು ಹಾರಿಸಲಾಗಿದೆ ಎಂದು ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ತಿಳಿಸಿದ್ದರು. ಓವೈಸಿ ಪ್ರಕಾರ, ಒಟ್ಟು 3 ರಿಂದ 4 ಜನರಿದ್ದರು. ಅದರಲ್ಲಿ 2 ಜನರು ಗುಂಡಿನ ದಾಳಿ ನಡೆಸಿದರು. ವಾಹನದ ಟೈರ್ ಪಂಕ್ಚರ್ ಆದ ಕಾರಣ ಓವೈಸಿ ಬೇರೆ ವಾಹನದಲ್ಲಿ ಹೋಗಬೇಕಾಯಿತು. ಇದಲ್ಲದೇ, ಯುಪಿಯಲ್ಲಿ ತಮ್ಮ ಬೆಂಗಾವಲು ಪಡೆಯ ಮೇಲೆ ನಡೆದ ದಾಳಿಯನ್ನು 'ಯೋಜಿತ' ಎಂದು ವಿವರಿಸಿರುವ ಓವೈಸಿ ತನಿಖೆಗೆ ಒತ್ತಾಯಿಸಿದರು.

ಉತ್ತರ ಪ್ರದೇಶದಲ್ಲಿ ಓವೈಸಿ ಕಾರಿನ ಮೇಲೆ ಗುಂಡಿನ ದಾಳಿಉತ್ತರ ಪ್ರದೇಶದಲ್ಲಿ ಓವೈಸಿ ಕಾರಿನ ಮೇಲೆ ಗುಂಡಿನ ದಾಳಿ

ನಿನ್ನೆ ಉತ್ತರ ಪ್ರದೇಶದಲ್ಲಿ ಚುನಾವಣಾ ಪ್ರಚಾರಕ್ಕೆಂದು ತೆರಳಿದಾಗ ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಕಾರಿನ ಮೇಲೆ ಗಂಡಿನ ದಾಳಿ ನಡೆದಿದೆ. ಛಿಜರ್ಸಿ ಟೋಲ್ ಗೇಟ್ ಬಳಿ ತಮ್ಮ ಕಾರಿನ ಮೇಲೆ ಕೆಲ ಹೊತ್ತಿನ ಮುಂಚೆ ಗುಂಡಿನ ದಾಳಿ ನಡೆಸಲಾಗಿದೆ. ನಾಲ್ಕು ಸುತ್ತು ಗುಂಡು ಹಾರಿಸಲಾಗಿದೆ. ಮೂರ್ನಾಲ್ಕು ಮಂದಿ ಗುಂಡು ಹಾರಿಸಿ, ಪರಾರಿಯಾದರು. ನನ್ನ ಕಾರು ಪಂಕ್ಚರ್ ಆಯಿತು. ಆದರೆ, ಮತ್ತೊಂದು ಕಾರಿಗೆ ಸ್ಥಳಾಂತರವಾಗಿ ಅಲ್ಲಿಂದ ನಿರ್ಗಮಿಸಿದ್ದೇನೆ. ನಾವೆಲ್ಲರೂ ಸುರಕ್ಷಿತರಾಗಿದ್ದೇವೆ ಎಂದು ಅಸಾದುದ್ದೀನ್ ಓವೈಸಿ ಟ್ವೀಟ್ ಮಾಡಿದ್ದರು.

UP Owaisi car attacked, Accused tell reason for the attack

ಹಪೂರ್ ಜಿಲ್ಲೆಯಿಂದ ದೆಹಲಿಗೆ ಹಿಂತಿರುಗುತ್ತಿದ್ದಾಗ ತಮ್ಮ ಕಾರಿನ ಮೇಲೆ ಅಪರಿಚಿತರು ಗುಂಡಿನ ದಾಳಿ ನಡೆಸಿರುವುದಾಗಿ ಓವೈಸಿ ಆರೋಪಿಸಿದ್ದಾರೆ. ರಾಷ್ಟ್ರೀಯ ಹೆದ್ದಾರಿ 24ರಲ್ಲಿನ ಹಪೂರ್- ಗಾಜಿಯಾಬಾದ್ ಮಾರ್ಗದ ಛಿಜರ್ಸಿ ಟೋಲ್ ಪ್ಲಾಜಾ ಬಳಿ ಇಂದು ಸಂಜೆ 6 ಗಂಟೆ ಸುಮಾರಿನಲ್ಲಿ ಈ ಘಟನೆ ನಡೆದಿರುವುದಾಗಿ ಅವರು ಹೇಳಿದ್ದಾರೆ.

ಉತ್ತರಪ್ರದೇಶದ ಮೀರತ್‌ನಲ್ಲಿ ಚುನಾವಣಾ ಪ್ರಚಾರ ಮುಗಿಸಿ ದೆಹಲಿಗೆ ತೆರಳುತ್ತಿದ್ದ ಸಂದರ್ಭದಲ್ಲಿ ಓವೈಸಿ ವಾಹನದ ಮೇಲೆ 3-4 ಸುತ್ತು ಗುಂಡು ಹಾರಿಸಲಾಗಿದೆ. ಈ ಅವಘಡದಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಘಟನೆ ಬಳಿಕ ಓರ್ವನನ್ನು ಬಂಧಿಸಲಾಗಿದೆ ಎಂದು ವರದಿಯಾಗಿದೆ.

ಈ ಸಂಬಂಧ ಟ್ವೀಟ್ ಮಾಡಿರುವ ಓವೈಸಿ, ಎಲ್ಲರೂ ಸುರಕ್ಷಿತವಾಗಿರುವುದಾಗಿ ಮಾಹಿತಿ ನೀಡಿದ್ದಾರೆ. ಅಲ್ಲದೆ ಗುಂಡು ಹಾರಿಸಿದ ವ್ಯಕ್ತಿ ಆಯುಧಗಳನ್ನು ಸ್ಥಳದಲ್ಲಿಯೇ ಬಿಟ್ಟು ಪರಾರಿಯಾಗಿರುವುದಾಗಿ ತಿಳಿಸಿದ್ದಾರೆ. ಓವೈಸಿ, ಪೊಲೀಸರು ಶೂಟರ್‌ಗಳಲ್ಲಿ ಒಬ್ಬನನ್ನು ಬಂಧಿಸಿ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಂಡಿದ್ದಾರೆ ಎಂದು ತಿಳಿಸಿದ್ದಾರೆ. ಈ ಬಗ್ಗೆ ಚುನಾವಣಾ ಆಯೋಗ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದರು.

"ನಮ್ಮ ಮೇಲೆ ದಾಳಿ ಮಾಡುವವರು ಪ್ರತಿದಿನ ನಮ್ಮನ್ನು ಹಿಂಬಾಲಿಸುತ್ತಿದ್ದಾರೆ ಎಂದು ಭಾವಿಸುತ್ತೇನೆ. ಪೊಲೀಸರು ಒಬ್ಬನನ್ನು ಬಂಧಿಸಿದ್ದು, ಶಸ್ತಾಸ್ತ್ರಗಳನ್ನು ವಶಪಡಿಸಿಕೊಂಡಿದ್ದಾರೆ. ಈ ಬಗ್ಗೆ ತನಿಖೆ ನಡೆಸುವಂತೆ ಚುನಾವಣಾ ಆಯೋಗವನ್ನು ಕೋರುತ್ತೇನೆ. ಈ ಬಗ್ಗೆ ಸೂಕ್ತ ತನಿಖೆ ನಡೆಸುವುದು ರಾಜ್ಯ ಹಾಗೂ ಕೇಂದ್ರ ಸರ್ಕಾರಗಳ ಜವಾಬ್ದಾರಿಯಾಗಿದೆ"ಎಂದು ಪ್ರತಿಕ್ರಿಯಿಸಿದ್ದಾರೆ.

ಸಂಸದರು ಮತ್ತೊಂದು ಕಾರಿನಲ್ಲಿ ಸ್ಥಳದಿಂದ ತೆರಳಿದರು. ಫೆಬ್ರವರಿ 10 ರಿಂದ ಪ್ರಾರಂಭವಾಗುವ ಉತ್ತರ ಪ್ರದೇಶ ಚುನಾವಣೆಯ ಪ್ರಚಾರದ ಸಂದರ್ಭದಲ್ಲಿ ಎಐಎಂಐಎಂ ನಾಯಕ ಮೀರತ್‌ನಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದ್ದರು.

Owaisi car attacked, Accused tell reason for the attack

ಭಾರತದ ರಾಜಕಾರಣದ ದಿಕ್ಕನ್ನು ಬದಲಿಸುವ ದೇಶದ ಅತೀದೊಡ್ಡ ರಾಜ್ಯ ಉತ್ತರ ಪ್ರದೇಶಕ್ಕೆ ಏಳು ಹಂತದಲ್ಲಿ ಮತದಾನ ನಡೆಯಲಿದ್ದು, ಮೊದಲ ಹಂತದ ಮತದಾನ ಫೆಬ್ರವರಿ 10 ರಂದು ನಡೆಯಲಿದೆ. ಫೋಟೋ ಸಮೇತ ಓವೈಸಿ ಟ್ವೀಟ್ ಮಾಡಿದ್ದು, ಫೋಟೋದಲ್ಲಿ ಓವೈಸಿ ಇದ್ದ ಕಾರಿಗೆ ಗುಂಡು ತಾಗಿರುವುದನ್ನು ಹಾಗೂ ಟೈಯರ್‌ಗಳು ಪಂಕ್ಚರ್ ಆಗಿರುವುದನ್ನು ಕಾಣಬಹುದಾಗಿದೆ.

ಘಟನೆ ನಡೆದ ಬಳಿಕ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ. ನಾನು ಮೀರತ್‌ನಿಂದ ದೆಹಲಿಗೆ ತೆರಳುತ್ತಿದ್ದ ಸಂದರ್ಭದಲ್ಲಿ ಟೋಲ್ ಬಳಿ ಇಬ್ಬರು ದುಷ್ಕರ್ಮಿಗಳು ನನ್ನ ವಾಹನದ ಮೇಲೆ 4 ಸುತ್ತು ಗುಂಡು ಹಾರಿಸಿದ್ದಾರೆ. ಇವರ ಜೊತೆ ಇನ್ನೂ 3-4 ಮಂದಿ ಇದ್ದರು. ಗುಂಡು ಹಾರಿಸಿದ ಪರಿಣಾಮ ನನ್ನ ವಾಹನ ಪಂಕ್ಚರ್ ಆಯಿತು. ಹೀಗಾಗಿ ನಾನು ಬೇರೆ ವಾಹನದಲ್ಲಿ ಅಲ್ಲಿಂದ ತೆರಳಿದೆ ಎಂದು ಓವೈಸಿ ತಮ್ಮ ಟ್ವೀಟ್‌ನಲ್ಲಿ ವಿವರಿಸಿದ್ದಾರೆ.

English summary
Regarding the attack on Asaduddin Owaisi on Thursday, Uttar Pradesh Police officials said that one of the attackers has been arrested and the other has been taken into custody.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X